ಮಾನವ ಕಳ್ಳಸಾಗಣೆ ತಡೆ ಕುರಿತು ಕಾನೂನು ಅರಿವು ಕಾರ್ಯಕ್ರಮ

ಮಾನವ ಕಳ್ಳಸಾಗಣೆ ತಡೆ ಕುರಿತು ಕಾನೂನು ಅರಿವು ಕಾರ್ಯಕ್ರಮ  Legal Awareness Program on Prevention of Human Trafficking

ಲೋಕದರ್ಶನ ವರದಿ 

ಧಾರವಾಡ 04: ಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಮಂಜುನಾಥೇಶ್ವರ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಮಾನವ ಕಳ್ಳಸಾಗಣೆ ತಡೆ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು.  

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಜೆ.ಎಂ. ಬಡಿಗೇರ್ ಮಾತನಾಡಿ, ವಂಚನೆ, ಬೆದರಿಕೆ ಅಥವಾ ಆಮಿಷ ಒಡ್ಡಿ ವ್ಯಕ್ತಿಗಳನ್ನು ದುಡಿಮೆ, ಲೈಂಗಿಕ ಶೋಷಣೆ ಹಾಗೂ ಇತರ ಉದ್ದೇಶಗಳಿಗೆ ಬಳಸುವುದು ಮಾನವ ಕಳ್ಳಸಾಗಣೆ ಆಗಿದ್ದು, ಇದನ್ನು ತಡೆಗಟ್ಟುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ತಿಳಿಸಿದರು. ಹೆಚ್ಚಿನ ಸಂಬಳದ ಉದ್ಯೋಗ, ವಿದೇಶಿ ಉದ್ಯೋಗದ ಆಮಿಷಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.  

ಪೊಲೀಸ್ ಇಲಾಖೆಯ ಡಿಸಿಪಿ ಶೃತಿ ಎಸ್‌.ಎನ್‌. ವಿದ್ಯಾರ್ಥಿಗಳು ಮೊಬೈಲ್ ವ್ಯಸನ ಹಾಗೂ ಮಾದಕ ವಸ್ತುಗಳಿಂದ ದೂರವಿದ್ದು, ವಿದ್ಯಾಭ್ಯಾಸ ಮತ್ತು ವ್ಯಕ್ತಿತ್ವ ವಿಕಸನದತ್ತ ಗಮನಹರಿಸಬೇಕು ಎಂದು ಕರೆ ನೀಡಿದರು.  

ಎಸಿಪಿ ಶಿವಪ್ರಕಾಶ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಪ್ರಾಚಾರ್ಯ ರವಿವರ್ಮ ಜೋಶಿ, ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ದಯಾನಂದ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಅನುಷಾ ಹೊಸಗೌಡರ್ ಸ್ವಾಗತಿಸಿ, ಡಾ. ಎಸ್‌.ಕೆ. ನಡುವಿನಕೇರಿ ವಂದಿಸಿದರು.