ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ
Legal Awareness and Assistance Programme on the Special Revision of Electoral Rolls
ಲೋಕದರ್ಶನ ವರದಿ
ಕಾಗವಾಡ 24 : ಪ್ರಜಾಪ್ರಭುತ್ವದ ಯಶಸ್ಸು ಪ್ರತಿಯೊಬ್ಬ ನಾಗರೀಕನ ಮತದಾನದ ಮೇಲೆ ಅವಲಂಬಿತವಾಗಿದೆ ಎಂದು ಸಿವ್ಹಿಲ್ ನ್ಯಾಯಾಧೀಶರು ಹಾಗೂ ಜೆ ಎಂ ಎಫ್ ಸಿ ಮತ್ತು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ರೂಪಾ ಚಿನಿವಾರ ಹೇಳಿದ್ದಾರೆ.
ಅವರು ಶುಕ್ರವಾರ ದಿ. 24 ರಂದು ಪಟ್ಟಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಬೆಳಗಾವಿ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಕಾಗವಾಡ, ನ್ಯಾಯವಾದಿಗಳ ಸಂಘ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಶಿವಾನಂದ ಮಹಾವಿದ್ಯಾಲಯ ಕಾಗವಾಡ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಭಾರತೀಯ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮತದಾರರ ಪಟ್ಟಿಯಲ್ಲಿನ ನಿಖರತೆ ಮತ್ತು ಪಾರದರ್ಶಕತೆ ಪ್ರಜಾಪ್ರಭುತ್ವದ ಬಲವರ್ಧನೆಗೆ ಅತ್ಯಂತ ಅವಶ್ಯಕವಾಗಿದೆ ಎಂದು ಹೇಳಿದರು.
ತಹಶೀಲ್ದಾರ ರವೀಂದ್ರ ಹಾದಿಮನಿ ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಅಭಿಯಾನದ ಉದ್ದೇಶವನ್ನು ವಿವರಿಸಿ, ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರೆ್ಡ, ತಿದ್ದುಪಡಿ, ವಿಳಾಸ ಬದಲಾವಣೆ, ಹೆಸರು ತೆಗೆದು ಹಾಕುವಿಕೆ ಸೇರಿದಂತೆ ವಿವಿಧ ಸೇವೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಪ್ರಾಚಾರ್ಯ ಡಾ. ಎಸ್.ಪಿ. ತಳವಾರ, ಕನ್ನಡ ಉಪನ್ಯಾಸಕ ಡಾ. ಎ.ಎಂ. ಜಕ್ಕಣ್ಣವರ, ಕಚೇರಿಯ ಶಿಕ್ಷಣ ಸಂಯೋಜಕ ಭರತ ಬಿಲವಾಡೆ, ತಾಲೂಕು ವಕೀಲರ ಸಂಘದ ಉಪಾಧ್ಯಕ್ಷ ಎಸ್.ವ್ಹಿ. ನಾಂದ್ರೆ, ಬಿ.ಡಿ ಧಾಮಣ್ಣವರ, ಡಾ. ಚಂದ್ರಶೇಖರ್ ವೈ., ಎಸ್.ಎಸ್ ಫಡತರೆ, ಸೇರಿದಂತೆ ನ್ಯಾಯವಾದಿಗಳ ಸಂಘದ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ 