ಮಕ್ಕಳ ಕಲಿಕೆಯನ್ನು ವ್ಯಂಗ್ಯವಾಡುವ ಶಿಕ್ಷಕರ ವಿರುದ್ಧ ಕಾನೂನು ಕ್ರಮ; ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು, ಜ 10 :             ಮಕ್ಕಳ ಕಲಿಕೆ ಅಂಶಗಳನ್ನು ವ್ಯಂಗವಾಗಿ ತೋರಿಸುವ ವಿಡಿಯೋಗಳನ್ನು ಮುದ್ರಿಸಿ, ಅವುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಶಿಕ್ಷಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಶಿಕ್ಷಕರು ಮಕ್ಕಳಿಗೆ ಶಾಲೆಯಲ್ಲಿ ಸರಿಯಾದ ಉಚ್ಚಾರಣೆ ಕಲಿಸಬೇಕು. ಅದನ್ನು ಅಪರಾಧವೆಂಬಂತೆ ಬಿಂಬಿಸುವುದು ತಪ್ಪು. ಇದರಿಂದ ಮಕ್ಕಳಲ್ಲಿ ಕೀಳರಿಮೆ ಉಂಟಾಗುತ್ತದೆ ಎಂದು ಸುತ್ತೋಲೆ ತಿಳಿಸಿದೆ.  

ಮಕ್ಕಳ ಆತ್ಮವಿಶ್ವಾಸ ಕುಗ್ಗಿಸುವ ಇಂತಹ ಯಾವುದೇ ಚಟುವಟಿಕೆ ಶಿಕ್ಷಕರು ಮಾಡಿದಲ್ಲಿ ಅಂತಹವರ  ವಿರುದ್ಧ ಶಿಸ್ತು ಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಆದೇಶ ಸ್ಪಷ್ಟಪಡಿಸಿದೆ.

ಈ ಕುರಿತು ಆದೇಶ ಹೊರಡಿಸುವಂತೆ ಕಮಿಷನರ್ ಜಗದೀಶ್ ಗೆ  ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದರು.