ಅಂಗನವಾಡಿ ಕಾರ್ಯಕರ್ತೆ ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯವಹಿಸಿದರೆ ಕಾನೂನು ಕ್ರಮ : ಲತೀಫಾಬೇಗಂ

ಅಂಗನವಾಡಿ ಕಾರ್ಯಕರ್ತೆ ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯವಹಿಸಿದರೆ ಕಾನೂನು ಕ್ರಮ  : ಲತೀಫಾಬೇಗಂ Legal action will be taken if Anganwadi worker neglects to prevent child marriage: Latifa Begum

ಲೋಕದರ್ಶನ ವರದಿ

ಕಂಪ್ಲಿ 15: ಬಾಲ್ಯ ವಿವಾಜಗಳನ್ನು ತಡೆಯುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ನಿರ್ಲಕ್ಷ್ಯ ವಹಿಸಿದರೆ ಕಾನೂನು ಕ್ರಮಗಳಿಗೆ ಗುರಿಯಾಗಬೇಕಾಗುತ್ತದೆ ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಲತೀಪಾಬೇಗಂ ಅಂಗನವಾಡಿ ಕಾರ್ಯಕರ್ತೆಯರಿಗೆ ಎಚ್ಚರಿಕೆ ನೀಡಿದರು.ಅವರು ಪಟ್ಟಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಾತ್ಕಾಲಿಕ ಕಚೇರಿಯಲ್ಲಿ ಏರಿ​‍್ಡಸಿದ್ದ ದೇವಸಮುದ್ರ ವಲಯ ಮಟ್ಟದ ಅಂಗನವಾಡಿ ಕಾರ್ಯಕರ್ತೆಯರ ಸಭೆಯಲ್ಲಿ ಮಾತನಾಡಿದರು.

ಅಪ್ರಾಪ್ತೆಯರ ಮದುವೆ ಮಾತುಕತೆ, ನಿಶ್ಚಿತಾರ್ಥ, ಮದುವೆ ಸಿದ್ಧತೆಗಳನ್ನು ಕಡೆಗಣಿಸದೇ ಕೂಡಲೇ 1098 ಅಥವಾ 112 ಮತ್ತು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ಮಾಹಿತಿ ನೀಡಬೇಕು. ಬಾಲ್ಯ ವಿವಾಹಗಳನ್ನು ಪ್ರೋತ್ಸಾಹಿಸುವುದು, ತಡೆಗಟ್ಟುವಲ್ಲಿ ನಿರ್ಲಕ್ಷ್ಯ ವಹಿಸುವುದು ಕಾನೂನು ಪ್ರಕಾರ ಅಪರಾಧವಾಗಿದೆ ಎಂದು ತಿಳಿಸಿದರು.ಗ್ರಾಮೀಣ ಪ್ರದೇಶಗಳಲ್ಲಿ ಕಂದಾಯ ಇಲಾಖೆಯ ಗ್ರಾಮಾಡಳಿತಾಧಿಕಾರಿಗಳು, ಪಂಚಾಯತ್ ಇಲಾಖೆಯ ಗ್ರಾಮಾಭಿವೃದ್ಧಿ ಅಧಿಕಾರಿಗಳು ಮತ್ತು ಶಿಕ್ಷಣ ಇಲಾಖೆಯ ಮುಖ್ಯ ಶಿಕ್ಷಕರೊಂದಿಗೆ ಸಮನ್ವಯತೆಯಿಂದ ಬಾಲ್ಯ ವಿವಾಹಗಳನ್ನು ತಡೆಯುವಲ್ಲಿ ಗಂ ಹರಿಸಬೇಕೆಂದರು.

ಕೇಂದ್ರಗಳಲ್ಲಿ ವಿದ್ಯುತ್, ಫ್ಯಾನ್,ನೀರು, ಶೌಚಗೃಹ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳಿಗೆ ಕೊರತೆಯಾಗದಂತೆ ನೋಡಿಕೊಳ್ಳಬೇಕು,ಅವಧಿ ಮೀರಿದ ಪಡಿತರ ಬಳಕೆ ಮಾಡಬಾರದು. ಹಾಗೂ ವಿತರಿಸಬಾರದು.ಅಡುಗೆ ತಯಾರಿಕೆಯಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕೆಂದು ಹಲವಾರು ಸಲಹೆಗಳನ್ನು ನೀಡಿದರು.ಸಭೆಯಲ್ಲಿ ಮೆಟ್ರಿ,ಸಣಾಪುರ,ದೇವಸಮುದ್ರ ಗ್ರಾಮಪಂಚಾಯತಿ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಕ್ಕಮಹಾದೇವಿ, ಈರಮ್ಮ, ವಿಜಯಕುಮಾರಿ, ಉಮಾ, ಹೇಮಲತಾ, ಪವಿತ್ರಾ ಸೇರಿದಂತೆ ಇತರರು ಇದ್ದರು.