ಸಕ್ಕರೆ, ದಿನಸಿ ಪದಾರ್ಥಗಳನ್ನು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಕಾನೂನು ಕ್ರಮ
Legal action will be taken if sugar and grocery items are sold at prices higher than the prescribed
ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಎಚ್ಚರಿಕೆ
ವಿಜಯನಗರ (ಹೊಸಪೇಟೆ), ಆ.27: ಇತ್ತೀಚೆಗೆ ಸಕ್ಕರೆ ಸೇರಿದಂತೆ ಅಗತ್ಯ ದಿನಸಿ ಪದಾರ್ಥಗಳ ಬೆಲೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಕೆಲ ಸಗಟು ಹಾಗೂ ಚಿಲ್ಲರೆ ವ್ಯಾಪಾರಿಗಳು ಸಕ್ಕರೆ ಮತ್ತು ದಿನಸಿ ಪದಾರ್ಥಗಳನ್ನು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಎಚ್ಚರಿಕೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಮಾರುಕಟ್ಟೆ ದರ, ವ್ಯಾಪಾರ ವಹಿವಾಟು ಹಾಗೂ ಗ್ರಾಹಕರ ಹಿತಾಸಕ್ತಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಕ್ಕರೆಯನ್ನು ಅಗತ್ಯ ಸರಕುಗಳ ವ್ಯಾಪ್ತಿಗೆ ಒಳಪಡಿಸಲಾಗಿದ್ದು, ನವೆಂಬರ್ವರೆಗೆ ನಿಯಮಗಳು ಜಾರಿಯಲ್ಲಿರಲಿವೆ. ವರ್ತಕರು ಹಾಗೂ ಸಗಟು ಮಾರಾಟಗಾರರು ತಮ್ಮ ನೈಜ ಸಕ್ಕರೆ ದಾಸ್ತಾನು ವಿವರಗಳನ್ನು ಕಡ್ಡಾಯವಾಗಿ ಆನ್ಲೈನ್ನಲ್ಲಿ ದಾಖಲಿಸಬೇಕು. ಪ್ರತಿ ಶುಕ್ರವಾರ ದಾಸ್ತಾನು ಘೋಷಣೆ ಮಾಡಬೇಕು. ಗರಿಷ್ಠ 4 ಸಾವಿರ ಕ್ವಿಂಟಲ್ಗಿಂತ ಹೆಚ್ಚಿನ ಸಕ್ಕರೆಯನ್ನು ಅನಧಿಕೃತವಾಗಿ ದಾಸ್ತಾನು ಮಾಡುವಂತಿಲ್ಲ. ದಾಸ್ತಾನು ಮಾಡಲು ಬಳಸುವ ಎಲ್ಲ ಅಧಿಕೃತ ಹಾಗೂ ಪರ್ಯಾಯ ಗೋದಾಮುಗಳ ವಿವರಗಳನ್ನು ಇಲಾಖೆಗೆ ಮುಂಚಿತವಾಗಿ ಸಲ್ಲಿಸಿ ಅನುಮತಿ ಪಡೆಯಬೇಕು. ಹೋಟೆಲ್ಗಳು ಸೇರಿದಂತೆ ಸಗಟು ಗ್ರಾಹಕರಿಗೆ ಇಲಾಖೆಯ ಪೂರ್ವಾನುಮತಿ ಇಲ್ಲದೆ ಸಗಟು ಪ್ರಮಾಣದಲ್ಲಿ ಸಕ್ಕರೆ ಪೂರೈಸುವಂತಿಲ್ಲ ಎಂದು ಸೂಚಿಸಿದರು.
ಸಾರ್ವಜನಿಕರಿಗೆ ತೊಂದರೆಯಾಗದಂತೆ ಪ್ರತಿಯೊಂದು ಅಂಗಡಿಯಲ್ಲಿಯೂ ಸಕ್ಕರೆ, ಬೇಳೆಕಾಳು, ಖಾದ್ಯ ತೈಲ ಸೇರಿದಂತೆ ಪ್ರಮುಖ ದಿನಸಿ ಪದಾರ್ಥಗಳ ದರಪಟ್ಟಿ ಹಾಗೂ ದಾಸ್ತಾನು ಘೋಷಣಾ ಫಲಕವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಪ್ಯಾಕ್ ಮಾಡಿದ ಸರಕುಗಳನ್ನು ಮುದ್ರಿತ ಗರಿಷ್ಠ ಚಿಲ್ಲರೆ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಅಪರಾಧ. ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 