ಹಿರಿಯ ನಾಗರಿಕರಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ
Legal awareness assistance program for senior citizens
ಹಾವೇರಿ 30: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಣೇಬೆನ್ನೂರು ತಾಲೂಕು ಆಡಳಿತ, ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ರಾಣೇಬೆನ್ನೂರು ನಿವೃತ್ತ ನೌಕರರ ಸಂಘದ ಸಹಯೋಗದಲ್ಲಿ ಹಿರಿಯ ನಾಗರಿಕರಿಗೆ ರಾಜ್ಯ ಕ್ರಿಯಾ ಯೋಜನೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಬುಧವಾರ ರಾಣೇಬೆನ್ನೂರು ನಗರದ ನಿವೃತ್ತ ಸಮುದಾಯ ಭವನದಲ್ಲಿ ಜರುಗಿತು.
ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ 1ನೇ ಹೆಚ್ಚುವರಿ ದಿವಾಣಿ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ಮೇಘಶ್ರೀ ಅವರು, ಹಿರಿಯ ನಾಗರಿಕರ ಸಂರಕ್ಷಣಾ ಕಾಯ್ದೆ ಕುರಿತು ಮಾಹಿತಿ ನೀಡಿದರು ಹಾಗೂ ಕಾನೂನಿನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಡಾ.ನೇತ್ರಾ ಹಾಗೂ ಡಾ.ವಿನೋದಾ ಎಸ್. ಅವರು ಹಿರಿಯ ನಾಗರಿಕರಲ್ಲಿ ಕಂಡುಬರುವ ವಯೋಸಹಜ ಕಾಯಿಲೆ ಮತ್ತು ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು.
ರಾಣೇಬೆನ್ನೂರು ಸಿಪಿಐ ವೆಂಕಟೇಶ ಎನ್. ಅವರು ಸೈಬರ್ ಕ್ರೈಂ, ಡಿಜಿಟಲ್ ಅರೆಸ್ಟ್ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು. ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಶ್ರೀಮತಿ ಆಶು ನದಾಫ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬಿ.ಎಚ್.ಬುರಡಿಕಟ್ಟಿ, ಹೊನ್ನಪ್ಪ ಎಚ್ ತಿಮ್ಮೇನಹಳ್ಳಿ, ಸುರೇಶ ಎನ್.ದ್ಯಾವಕ್ಕಳವರ, ವಿ.ಎಂ.ಕರ್ಜಗಿ, ಎನ್.ಎಸ್.ಪಾಟೀಲ, ಎಸ್.ಕೆ.ನೇಸ್ವಿ ಇತರರು ಉಪಸ್ಥಿತರಿದ್ದರು. ನಿವೃತ್ತ ನೌಕರರ ಸಂಘದ ಉಪಾಧ್ಯಕ್ಷ ಎಂ.ಬಿ.ಬೆನಕಣ್ಣನವರ ಸ್ವಾಗತಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 