ಮಕ್ಕಳ ರಕ್ಷಣೆ, ಮಾದಕವಸ್ತು ದುಷ್ಪರಿಣಾಮ ಕುರಿತು ಕಾನೂನು ಅರಿವು
Legal awareness regarding child protection and the adverse effects of drugs
ಲೋಕದರ್ಶನ ವರದಿ
ಧಾರವಾಡ 25 : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಪೋಕ್ಸೊ ಕಾಯ್ದೆ ಮತ್ತು ಮಾದಕವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎನ್.ವಿ. ವಿಜಯ ಕಾರ್ಯಕ್ರಮ ಉದ್ಘಾಟಿಸಿದರು. ಮಕ್ಕಳ ಹಿತಾಸಕ್ತಿ ಹಾಗೂ ದೈಹಿಕ-ಮಾನಸಿಕ ಸುರಕ್ಷತೆಗೆ ಆದ್ಯತೆ ನೀಡಬೇಕು.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತ್ವರಿತ ನ್ಯಾಯ ಒದಗಿಸಲು ಪೋಕ್ಸೊ ಕಾಯ್ದೆಯಡಿ ವಿಶೇಷ ನ್ಯಾಯಾಲಯಗಳಿವೆ ಎಂದು ತಿಳಿಸಲಾಯಿತು. ಮಾದಕವಸ್ತು ವ್ಯಸನದಿಂದ ವ್ಯಕ್ತಿಯ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಬದುಕಿನ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ ಎಂದು ಗಣ್ಯರು ಹೇಳಿದರು. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಅಲ್ಲಪ್ಪ ಎಂ. ಬಡಿಗೇರ ಸೇರಿದಂತೆ ನ್ಯಾಯಾಂಗ, ಶಿಕ್ಷಣ ಕ್ಷೇತ್ರದ ಅಧಿಕಾರಿಗಳು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 