ಪೋಕ್ಸೊ ಕಾಯಿದೆ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಕಾನೂನು ಅರಿವು

ಪೋಕ್ಸೊ ಕಾಯಿದೆ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಕಾನೂನು ಅರಿವು Legal awareness regarding the POCSO Act and the ill effects of drug abuse

ಲೋಕದರ್ಶನ ವರದಿ

ಧಾರವಾಡ 16: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ವಿದ್ಯಾ. ಪಿ. ಹಂಚಿನಮನಿ ಪದವಿ ಪೂರ್ವ ವಿಜ್ಞಾನ ಕಾಲೇಜು, ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಪೋಕ್ಸೊ ಕಾಯಿದೆ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಜೂನ್ 15 ರಂದು  ವಿದ್ಯಾ. ಪಿ. ಹಂಚಿನಮನಿ ಪದವಿ ಪೂರ್ವ ವಿಜ್ಞಾನ ಕಾಲೇಜಿನ ಕೊಠಡಿಯಲ್ಲಿ  ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಅಧ್ಯಕ್ಷ ಎನ್‌.ವಿ.ವಿಜಯ, ಅವರು ಸಸಿಗೆ ನೀರು ಹಾಕುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನಡೆಸಿ, ಮಾದಕ ದ್ರವ್ಯ ವ್ಯಸನದಿಂದ ಇಂದಿನ ಯುವಕರ ಮೇಲೆ ಉಂಟಾಗುವ ದುಷ್ಪರಿಣಾಮದ ಕುರಿತು ಅವರು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಜಿಲ್ಲಾ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ  ಎಚ್‌. ಶಶಿಧರ ಶೆಟ್ಟಿ, ಅವರು ಭಾಗವಹಿಸಿ ಪೊಕ್ಸೋ ಕಾಯಿದೆಯ ಕುರಿತು ಮಾತನಾಡಿದರು. 

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಅಲ್ಲಪ್ಪ ಎಂ ಬಡಿಗೇರ, ಶಾಲಾ ಶಿಕ್ಷಣ ಇಲಾಖೆಯ, ಉಮೇಶ ಬೊಮ್ಮಕ್ಕನವರ, ಮುಖ್ಯ ಅತಿಥಿಗಳಾಗಿ ಹಾಜರಿದ್ದರು. ವಿ.ಪಿ.ಎಚ್ ಪಿಯು ಕಾಲೇಜು ಪ್ರಾಂಶುಪಾಲರಾದ ರಾಜು. ಎಸ್‌. ಕಡೆಮನಿ ಅವರು ಅಧ್ಯಕ್ಷತೆ ವಹಿಸಿದ್ದರು.  ಕಾರ್ಯಕ್ರಮದಲ್ಲಿ ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ, ಸಾರ್ವಜನಿಕ ಸಂಪರ್ಕ ಅಧಿಕಾರಿ ಬಾಲಸುಬ್ರಹ್ಮಣ್ಯ ಸೇರಿದಂತೆ ಕಾಲೇಜಿನ ಪ್ರಾಧ್ಯಾಪಕ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.