ಹಾವೇರಿ: ವಿದ್ಯಾರ್ಥಿಗಳಿಗೆ ಪ್ರಾಥಮಿಕ ಕಾನೂನು ಅರಿವು ಅತ್ಯಗತ್ಯ ಹಾಗೂ ವಿದ್ಯಾರ್ಥಿಗಳು ದೇಶದ ಸಂವಿಧಾನದ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಎಸ್.ಎಚ್. ರೇಣುಕಾದೇವಿ ಅವರು ಹೇಳಿದರು.
ನಗರದ ಎಸ್.ಎಂ.ಎಸ್ ಫ್ರೌಢಶಾಲೆಯಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯವಾದಿಗಳ ಸಂಘ, ಜಿಲ್ಲಾ ಅಭಿಯೋಜನಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಎಸ್.ಎಂ.ಎಸ್ ಫ್ರೌಢಶಾಲೆ ಇವರ ಸಹಯೋಗದಲ್ಲಿ 'ಸಂತ್ರಸ್ಥರ ಪರಿಹಾರ ಯೋಜನೆ, ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು, ಸಾಮಾನ್ಯ ಕಾನೂನುಗಳು, ಜನತಾ ನ್ಯಾಯಾಲಯಗಳು ಹಾಗೂ ಮಧ್ಯಸ್ಥಿಕಾ ಕೇಂದ್ರದ ಮಹತ್ವ ವಿಷಯದ ಕುರಿತು ಜರುಗಿದ ಕಾನೂನು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾಥಿಗಳು ಸಹೋದರತ್ವ ಭಾವನೆ, ಸ್ನೇಹ -ಪ್ರೀತಿ, ಸೇವಾ ಮನೋಭಾವ, ನಾವೆಲ್ಲ ಒಂದೇ ಎಂಬ ಮನೋಭಾವವನ್ನು ಬೆಳಸಿಕೊಳ್ಳಬೇಕು. ಉತ್ತಮ ಓದಿನ ಜೊತೆಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಂದಾನೆಪ್ಪ .ಎನ್.ವಡಗೇರಿ ಅವರು ಮಾತನಾಡಿ, ಓದಿಗೆ ಯಾವುದೇ ಅಡ್ಡಿ ಆತಂಕಗಳಿರುವುದಿಲ್ಲ, ಏಕಾಗ್ರತೆಯೇ ಯಶಸ್ಸಿಗೆ ಪ್ರಮುಖ ಕಾರಣ. ಬಡತನದಲ್ಲಿ ಓದಿದ ವಿದ್ಯಾರ್ಥಿಗಳುಅತಿ ಹೆಚ್ಚು ಅಂಕಗಳಿಸಿ ರಾಜ್ಯ, ಜಿಲ್ಲೆ ಹಾಗೂ ತಾಲೂಕಿಗೆ ಕೀತರ್ಿ ತಂದಿದ್ದಾರೆ ಎಂದು ಹೇಳಿದರು.
ಅತಿವೃಷ್ಟಿ ಹಾಗೂ ನೆರೆಹಾವಳಿ ಸಂತ್ರಸ್ಥರಿಗೆ ತೆರೆದ ಪರಿಹಾರ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಿದ ಬಿಸಿಯೂಟ ತಯಾರಕರ ಸೇವೆ ಶ್ಲಾಘನೀಯ ಎಂದು ಹೇಳಿದರು.
ನಂತರ ಸಂತ್ರಸ್ಥರ ಪರಿಹಾರ ಯೋಜನೆ 2011, ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು ಕುರಿತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನೆಲ್ ವಕೀಲರಾದ ಎಸ್.ಪಿ. ದೇವಸೂರ, ಸಾಮಾನ್ಯ ಕಾನೂನುಗಳು, ಜನತಾ ನ್ಯಾಯಾಲಯ ಮತ್ತು ಮಧ್ಯಸ್ಥಿಕೆಯ ಮಹತ್ವ ಕುರಿತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮಧ್ಯಸ್ಥಿಕೆದಾರ ವಕೀಲರಾದ ಜಿ.ಕೆ.ಕಮ್ಮಾರ ಹಾಗೂ ಪೊಲೀಸ್ ದೂರು ಪ್ರಾಧಿಕಾರದ ರಚನೆ, ಮಹತ್ವ ಮತ್ತು ಕಾರ್ಯ ವೈಖರಿ ಕುರಿತು ನಗರ ಪೊಲೀಸ್ ಠಾಣೆಯ ಪಿ.ಎಸ್.ಐ. ಯು.ಕೆ. ಕುಲಕಣರ್ಿ ವಿದ್ಯಾಥರ್ಿಗಳಿಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿಗಳಾದ ಕೆ.ಶ್ರೀವಿದ್ಯಾ, ಹಿರಿಯ ಸಕರ್ಾರಿ ಅಭಿಯೋಜಕರು ಸರೋಜ ಕೂಡಲಮಠ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಸಿ.ಪಾವಲಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದಶರ್ಿ ಪಿ.ಎಂ.ಬೆನ್ನೂರು, ಎಸ್.ಎಂ.ಎಸ್ ಫ್ರೌಢಶಾಲೆಯ ಮುಖ್ಯೋಪಾಧ್ಯಾರಾದ ವೈ.ಎಂ. ಓಲೇಕಾರ, ಎಸ್.ಎಚ್. ಕಬ್ಬಿಣಕಂತಿಮಠ ಮತ್ತಿತರರು ಉಪಸ್ಥಿತರಿದ್ದರು.