ಹಾವೇರಿ: ಫೆ.14: ಸಾರ್ವಜನಿಕರಿಗೆ ಕಾನೂನಿನ ಅರಿವು ಮೂಡಿಸುವುದರ ಜೊತೆಗೆ ಕಾನೂನಿನ ನೆರವು ನೀಡುವುದು ಕಾನೂನು ಸೇವಾ ಪ್ರಾಧಿಕಾರದ ಉದ್ದೇಶವಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್.ಸಿ. ಲಕ್ಷ್ಮಿ ಎನ್.ಗರಗ ಅವರು ಹೇಳಿದರು.
ನಗರದ ವಾಯವ್ಯ ಕನರ್ಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ಕಚೇರಿಯಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಅಭಿಯೋಜನೆ ಇಲಾಖೆ ಹಾಗೂ ವಾಯವ್ಯ ಕನರ್ಾಟಕ ರಸ್ತೆ ಸಾರಿಗೆ ಸಂಸ್ಥೆ ಸಹಯೋಗದಲ್ಲಿ ಜರುಗಿದ ಸಾಮಾನ್ಯ ಕಾನೂನು ಹಾಗೂ ಸಂತ್ರಸ್ತ ಪರಿಹಾರ ಯೋಜನೆ ಕುರಿತು ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಅಧೀನದಲ್ಲಿ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರಿಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.
ವಾಯವ್ಯ ಕನರ್ಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಎಸ್.ಜಗದೀಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿಗಳಾದ ಕೆ.ಶ್ರೀವಿದ್ಯಾ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಸಿ.ಪಾವಲಿ, ಕಾರ್ಯದಶರ್ಿ ಪಿ.ಎಂ.ಬೆನ್ನೂರ, ಸಕರ್ಾರಿ ಅಭಿಯೋಜಕರಾದ ಸರೋಜ ಕೂಡಲಮಠ ಉಪಸ್ಥಿತರಿದ್ದರು. ಪೆನಲ್ ವಕೀಲರಾದ ಕೆ.ಎಚ್.ಎಣ್ಣಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ಹಾಗೂ ಕುಮಾರಿ ಮಂಗಳಾ ಆರ್. ಕಮ್ಮಾರ್ ಅವರು ಸಾಮಾನ್ಯ ಕಾನೂನು ಮತ್ತು ಸಂತ್ರಸ್ತರ ಪರಿಹಾರ ಯೋಜನೆ ಕುರಿತು ಉಪನ್ಯಾಸ ನೀಡಿದರು.