ಬಾಗಲಕೋಟೆ01: ಜಿಲ್ಲೆಯಲ್ಲಿ ಫೆ. 27 ಮತ್ತು 28 ರಂದು ಹಮ್ಮಿಕೊಂಡ ಬಾಗಲಕೋಟೆ ಜಿಲ್ಲಾ ಮಟ್ಟದ ಉದ್ಯೋಗ ಮೇಳದ ನೂತನ ವೆಬ್ಸೈಟ್ಗೆ ಶಾಸಕ ವೀರಣ್ಣ ಚರಂತಿಮಠ ಚಾಲನೆ ನೀಡಿದರು.
ಶನಿವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ದಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಉದ್ಯೋಗ ಮೇಳದ ಅಂಗವಾಗಿ ರೂಪಿಸಲಾದ ಹೊಸ ವೆಬ್ಸೈಟ್ಗೆ ಚಾಲನೆ ನೀಡಿ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ವಿದ್ಯಾಗಿರಿಯ ಬಸವೇಶ್ವರ ಇಂಜಿನೀಯರಿಂಗ್ ಕಾಲೇಜ ಆವರಣದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದ್ದು, ಪ್ರಾರಂಭಿಸಲಾದ ಉದ್ಯೋಗ ಮೇಳದ ವೆಬ್ಸೈಟ್ನಲ್ಲಿ ಉದ್ಯೋಗಾಕಾಂಕ್ಷಿಗಳು ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದರು.
ಈ ವೆಬ್ಸೈಟ್ನಲ್ಲಿ ಆಯಾ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆ ಹಾಗೂ ವಿದ್ಯಾರ್ಹತೆಯ ಮಾಹಿತಿಯನ್ನು ವೆಬ್ಸೈಟ್ ಮೂಲಕ ಮಾಹಿತಿ ಪಡೆಯಬಹುದಾಗಿದೆ. ಅಲ್ಲದೇ ಈ ಮೇಳದಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ಕಂಪನಿಗಳು ಸಹ ಖಾಲಿ ಇರುವ ಹುದ್ದೆಗಳ ಮಾಹಿತಿಯನ್ನು ಹಾಗೂ ನೊಂದಣಿ ಮಾಡಿಕೊಳ್ಳಬಹುದಾಗಿದೆ. ಈ ಅವಕಾಶದ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮಾತನಾಡಿ ಈ ಉದ್ಯೋಗ ಮೇಳದಲ್ಲಿ 50ಕ್ಕೂ ಹೆಚ್ಚು ವಿವಿಧ ಕಂಪನಿಗಳು ಭಾಗವಹಿಸಲಿದ್ದು, ಸುಮಾರು 3 ಸಾವಿರಕ್ಕಿಂತ ಹೆಚ್ಚು ಹುದ್ದೆಗಳನ್ನು ಭತರ್ಿ ಮಾಡಲಿದ್ದಾರೆ. ಆಸಕ್ತ ಉದ್ಯೋಗಾಕಾಂಕ್ಷಿಗಳು ತಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ನೂತನ ಉದ್ಯೋಗ ಮೇಳದ ವೆಬ್ಸೈಟ್ ನಲ್ಲಿ ಫೆಬ್ರವರಿ 25 ರೊಳಗಾಗಿ ನೋಂದಾನಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂಸಂ.08354-235337, ಮೊನಂ.8722914903, 9538162203ಗೆ ಸಂಪಕರ್ಿಸಬಹುದಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಗರಿಮಾ ಪನ್ವಾರ, ಎನ್.ಐ.ಸಿಯ ಗಿರಿಯಾಚಾರ, ಆಹಾರ ಇಲಾಖೆಯ ಉಪನಿದರ್ೇಶಕ ಶ್ರೀಶೈಲ ಕಂಕಣವಾಡಿ, ಜಿಲ್ಲಾ ಅಂಕಿ ಸಂಖ್ಯಾಧಿಕಾರಿ ಗಂಗಾಧರ ದಿವಟರ, ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ಶಾಂತಾ ಕಡಿ, ಜಿಲ್ಲಾ ಕೌಶಲ್ಯ ಅಭಿವೃದ್ದಿ ಅಧಿಕಾರಿ ವಿ.ಎಸ್.ಹಿರೇಮಠ, ಜಿಲ್ಲಾ ಕೌಶಲ್ಯ ಇಲಾಖೆಯ ವ್ಯವಸ್ಥಾಪಕ ಎನ್.ಎಸ್.ಏರಗೂಡಿ, ಸಹಾಯಕ ನಿಯಂತ್ರಕ ಕೋಳೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.