ಪ್ರತಿಯೊಬ್ಬರೂ ಕನ್ನಡ ನಾಡು, ನುಡಿ ಬೆಳಿಸೋಣ: ಬಸವರಾಜ ಖಾನಪ್ಪನವರ
Let's all cultivate Kannada language and culture: Basavaraja Khanappa
ಬೆಟಗೇರಿ, 24 :ಇಂದು ನಾಡಿನ ಕಲೆ, ಸಂಸ್ಕೃತಿ, ಸಂಪ್ರದಾಯ ಉಳಿಸಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು. ಕನ್ನಡ ನಾಡು ಕಟ್ಟೋಣ, ಕನ್ನಡ ಭಾಷೆ ಬೆಳೆಸೋಣ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ಅಧ್ಯಕ್ಷ ಬಸವರಾಜ ಖಾನಪ್ಪನವರ ಹೇಳಿದರು.
ಟಿ.ಎ.ನಾರಾಯಣಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ಸಹಯೋಗದಲ್ಲಿ ನಾನು ಕರವೇ ಕಾರ್ಯಕರ್ತ ಸದಸ್ಯತ್ವ ಅಭಿಯಾನ ಪ್ರಯುಕ್ತ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನಾನು ಕರವೇ ಕಾರ್ಯಕರ್ತ ಸದಸ್ಯತ್ವ ಅಭಿಯಾನದ ಕರಪತ್ರ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಗೋಕಾಕ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಗ್ರಾಮ ಘಟಕದ ಕರವೇ ಸಂಘಟನೆ ಸ್ಥಾಪಿಸಿ, ಎಲ್ಲರೂ ಈ ಕರವೇ ಸಂಘಟನೆಗೆ ಸೇರಿ ಕನ್ನಡ ಪರ ಹೋರಾಟಗಾರರಾಗಿ ಕನ್ನಡ ನಾಡು, ನುಡಿ ಬೆಳಿಸೋಣ ಎಂದರು.
ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ಉಪಾಧ್ಯಕ್ಷ ದೀಪಕ ಹಂಜಿ, ಸಂಚಾಲಕ ಮಲ್ಲಪ್ಪ ಸಂಪಗಾಂವ, ಬೆಟಗೇರಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ, ರಾಮಣ್ಣ ಮಾಳೇದ, ಈರ್ಪ ಕನೋಜಿ, ನಾಗಪ್ಪ ಹಿಡಕಲ, ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ಸದಸ್ಯರು, ಸ್ಥಳೀಯ ಕನ್ನಡ ಪರ ಅಭಿಮಾನಿ ಬಳಗದ ಸದಸ್ಯರು, ಗ್ರಾಮಸ್ಥರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 