ವ್ಯಸನ ಮುಕ್ತ ಸುಸಂಬದ್ಧ ಸಮಾಜ ನಿರ್ಮಾಣವಾಗಲಿ: ದಾನೇಶ ಅವಟಿ
Let's build a harmonious society free from addiction: Danesh Avati
ವಿಜಯಪುರ 04: ಮಧ್ಯ ಸಾರಾಯಿ. ತಂಬಾಕು - ಗಾಂಜಾ ದಂತಹ ಅಮಲು ವ್ಯಸನ ಮುಕ್ತ ಸುಸಂಬದ್ಧ ಸಮಾಜ ನಿರ್ಮಾಣವಾಗಲಿ ಎಂದು ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿ ವೇದಿಕೆ ಬೆಂಗಳೂರು ರಾಜ್ಯ ಸಂಚಾಲಕರ.ಹಾಗು ನ್ಯಾಯವಾದಿ ದಾನೇಶ ಅವಟಿ ಆಶಯ ವ್ಯಕ್ತಪಡಿಸಿದರು.
ಜೂ. 03ರಂದು ಗ್ಯಾನಿ ಕಾಲನಿಯ ಸ್ನೇಹ ಸಂಗಮ ಶಾಲಾ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯವರು ಏರಿ್ಡಸಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಜ್ಯೋತಿ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದ ಅವರು.ವಿಷಕಾರಿ ತಂಬಾಕಿನ ದುಷ್ಪರಿಣಾಮ ಅರಿತು ವಿಶ್ವ ಆರೋಗ್ಯ ಸಂಸ್ಥೆ ಹಾಗು ಸದಸ್ಯ ರಾಷ್ಟ್ರಗಳು 1987 ರಲ್ಲಿ ವಿಶ್ವ ತಂಬಾಕು ವಿರೋಧಿ ಅಭಿಯಾನ ಜಾರಿಗೆ ತಂದವು. ತಂಬಾಕು ಸೇವನೆ. ಧೂಮಪಾನ ಅದರಿಂದ ಆಗುತ್ತಿರುವ ದುಷ್ಪರಿಣಾಮ. ಸಾವು ನೋವು. ಜಗತ್ತಿನಾದ್ಯಂತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಒಳ್ಳೆಯ ಕಾರ್ಯ ಮಾಡುತ್ತಿದೆ. ಭಾರತೀಯರಾದ ನಾವು ಕೂಡಾ ಈ ಅಭಿಯಾನದಲ್ಲಿ ಕೈ ಜೋಡಿಸಿದ್ದು ಈ ದಿನ ಎಲ್ಲಡೆ ಸಾರ್ವಜನಿಕ ಸ್ಥಳದಲ್ಲಿ ಸಮುದಾಯ ಭವನ.ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ಅರಿವು ಮೂಡಿಸುವ ಕಾರ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರ ಮೇ 31 ನೆಯ ದಿನವನ್ನು ವಿಶ್ವ ತಂಬಾಕು ವಿರೋಧಿ ದಿನವೆಂದು ಘೋಷಿಸಿದೆ. ವಿದ್ಯಾರ್ಥಿಗಳು ತಂಬಾಕು ಮತ್ತಿತರ ಮಾದಕ ವಸ್ತುಗಳ ದಾಸರಾಗದೆ. ಸದೃಢ ಶರೀರ.ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕಂಕಣಬದ್ದರಾಗಿ ತಂಬಾಕು ಮತ್ತಿತರ ಮಾದಕ ವಸ್ತುಗಳ ಸೇವಿಸುವದಿಲ್ಲವೆಂದು ಪ್ರತಿಜ್ಞೆ ಮಾಡಬೇಕೆಂದು ಕರೆ ನೀಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಸಂಚಲಕಿ ಗಂಗಾ ದೊಡ್ಡುರ ಮಾತನಾಡಿ ಭಾರತವು ತಂಬಾಕು ನಿಷೇಧ ಕಾಯ್ದೆ ಜಾರಿಗೆ ತಂದಿದೆ.18ವರ್ಷದ ಕೆಳಗಿನ ಮಕ್ಕಳಿಗೆ ತಂಬಾಕೂ.ಮತ್ತಿತರ ಮಾದಕ ವಸ್ತುಗಳ ಮಾರಾಟ ಮಾಡಬಾರದು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿತ ಪ್ರದೇಶ ಎಂದು ಸಾರಲಾಗಿದೆ. ಶಾಲೆ ಕಾಲೇಜು ಪರಿಸರದಲ್ಲಿ ಮಾದಕ ವಸ್ತುಗಳ ಮಾರಾಟ ಮಾಡಬಾರದು ಇವುಗಳನ್ನು ಉಲ್ಲಂಘಿಸಿದರೆ ದಂಡ ಮತ್ತು ಶಿಕ್ಷೆಗೆ ಗುರಿಪಡಿಸಲಾಗುತ್ತದೆ ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಸಾರ್ವಜನಿಕರ ಅಭ್ಯುದಯಕ್ಕಾಗಿ ಹಲವಾರು ಕಾರ್ಯ ಕ್ರಮಗಳನ್ನು ಕೈಗೊಂಡಿದೆ. ಈವುಗಳ ಸದುಪಯೋಗ ಜನತೆ ಪಡೆದುಕೊಳ್ಳ ಬೇಕೆಂದರು. ಸ್ನೇಹ ಸಂಗಮ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಲೂಸಿ ಡಿಸೋಜಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಶಾಲಾ ಮಕ್ಕಳು ಸ್ವಾಗತ ಗೀತೆ ಹಾಡಿದರು.ಸಿಸ್ಟರ್ ಆÃundefined ವಿನ್ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಶ್ರೀದೇವಿ ಪರೀಟ ನಿರೂಪಿಸಿದರು. ರಾಜೇಶ್ವರಿ ಕೇಶವೆ ವಂದಿಸಿದರು.ಮಕ್ಕಳಿಗೆ ಸಿಹಿ ವಿತರಣೆಯೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಕೊನೆಗೊಂಡಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 