ತಂಬಾಕು ಮತ್ತು ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಿಸೋಣ; ಎಡಿಸಿ ಝುಬೇರ್
ತಂಬಾಕು ಮತ್ತು ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಿಸೋಣ; ಎಡಿಸಿ ಝುಬೇರ್
ಬಳ್ಳಾರಿ 12: ತಂಬಾಕು ಉತ್ಪನ್ನ ಸೇವನೆ, ಮಾರಾಟ ಹಾಗೂ ಮಾದಕ ವ್ಯಸನಗಳ ನಿರ್ಮೂಲನೆಗೆ ನಾವೆಲ್ಲರೂ ಪನತೊಟ್ಟು, ತಂಬಾಕು ಮತ್ತು ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಿಸೋಣ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್.ಎನ್ ಝುಬೇರ್ ಅವರು ಕರೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ನಗರದ ಕೋಟೆ ಪ್ರದೇಶದ ಸಂತ ಜಾನರ ಪ್ರೌಢಶಾಲೆ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತಂಬಾಕು ಮುಕ್ತ ಯುವ ಅಭಿಯಾನ 2.0 ಅರಿವು ಮೂಡಿಸುವ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಏಕಕಾಲದಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಅಭಿಯಾನ ಹಮ್ಮಿಕೊಳ್ಳಗಿದ್ದು, ಜಿಲ್ಲೆಯಲ್ಲಿ ಒಟ್ಟಾರೆ 1265 ಪ್ರೌಡ ಶಾಲೆಗಳಲ್ಲಿ 2 ಲಕ್ಷಕ್ಕೂ ಅಧಿಕ ವಿಧ್ಯಾರ್ಥಿಗಳಿಗೆ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಅರಿವು ಮೂಡಿಸಲಾಗಿದೆ ಎಂದರು. ಇದೇ ವೇಳೆ ಅಪರ ಜಿಲ್ಲಾಧಿಕಾರಿಗಳು ಪ್ರತಿಜ್ಞಾ ವಿಧಿ ಬೋಧಿಸಿದರು. ಹಾಗೂ ತಂಬಾಕು ನಿಯಂತ್ರಣ ಕೋಶದ ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಿದರು. ಜೀವನ ಆಯ್ದುಕೊಳ್ಳಿ ತಂಬಾಕನಲ್ಲ, ತಂಬಾಕು ಮುಕ್ತ ಬಳ್ಳಾರಿ ಜಿಲ್ಲೆಯನ್ನಾಗಿ ಮಾಡೋಣ ಎನ್ನುವ ಘೋಷವಾಕ್ಯದೊಡನೆ ತೆರೆಯಲಾಗಿದ್ದ ಸೆಲ್ಪೀ ಬೂತ್ ಕಾರ್ಯಕ್ರಮದ ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ವೈ.ರಮೇಶ್ ಬಾಬು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಮರಿಯಂಬಿ ವಿ.ಕೆ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಉಮಾದೇವಿ, ಸೇರಿದಂತೆ ಸಂತ ಜಾನರ ಪ್ರೌಢಶಾಲೆಯ ಮುಖ್ಯ ಗುರುಗಳಾದ ಫಾದರ್ ಫ್ರಾನ್ಸಿಸ್, ಡಿವೈಪಿಸಿ ಶಿವನಂದ ರೆಡ್ಡಿ, ಡಿಪಿಒ, ಕೊಟ್ರೇಶ್.ಡಿ, ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣಾಧಿಕಾರಿ ಈಶ್ವರ್.ಹೆಚ್ ದಾಸಪ್ಪನವರ, ಜಿಲ್ಲಾ ತಂಬಾಕು ನಿಯತ್ರಣ ಕೋಶದ ಜಿಲ್ಲಾ ಸಲಹೆಗಾರ ಪ್ರಶಾಂತ್, ಸಾಮಾಜಿಕ ಕಾರ್ಯಕರ್ತೆ ಸರಸ್ವತಿ, ಆಪ್ತಸಮಾಲೋಚಕ ಮಲ್ಲೇಶಪ್ಪ, ಸೇರಿದಂತೆ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಅನಾಮಧೇಯ ಮೃತದೇಹ ಪತ್ತೆ; ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ 12: ನಗರದ ಟ್ರಾಮಾ ಕೇರ್ ಆಸ್ಪತ್ರೆಯ ಆವರಣದ ಪಾರ್ಕಿಂಗ್ ಆವರಣದ ಹತ್ತಿರ ಅಂದಾಜು 40-50 ವರ್ಷದ ಅನಾಮಧೇಯ ವ್ಯಕ್ತಿಯ ಮೃತದೇಹ ನ.06 ರಂದು ದೊರೆತಿದ್ದು, ಶವವನ್ನು ವಿಮ್ಸ್ ಆಸ್ಪತ್ರೆಯ ಶವಗಾರ ಕೋಣೆಯಲ್ಲಿ ಇರಿಸಲಾಗಿದೆ. ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಸಹಕರಿಸಬೇಕೆಂದು ಕೌಲ್ಬಜಾರ್ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರು ಮನವಿ ಮಾಡಿದ್ದಾರೆ.*ಮೃತನ ಚಹರೆ* ಎತ್ತರ 5 ಅಡಿ 6 ಇಂಚು, ಕೋಲು ಮುಖ ಕಪ್ಪು ಮೈಬಣ್ಣ ತೆಳುವಾದ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಕಪ್ಪು ಮತ್ತು ಬಿಳಿ ಕೂದಲು, ಬಿಳಿ ಗಡ್ಡ ಇರುತ್ತದೆ. ಬಲಗೈಗೆ ವೈರ್ನ ಬ್ರಾಸ್ ಲೈಟ್ ಇದ್ದು, ಮೃತನ ಮೈಮೇಲೆ ಕಪ್ಪು ಬಣ್ಣದ ತುಂಬು ತೋಳಿನ ಮಾಸಿದ ಶರ್ಟ್ ಇರುತ್ತದೆ. ಮೇಲ್ಕಂಡ ಚಹರೆ ಗುರುತುಳ್ಳ ಮೃತನ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್ಬಜಾರ್ ಪೊಲೀಸ್ ಠಾಣೆಯ ಮೊ:9480803047, 9480803084 ಅಥವಾ ಛಿಠಟಛಚಿದಚಿಡಿಛಟಡಿಅಠಿ.ರಠ.ಟಿ ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.-