ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸೋಣ: ಅಪರ ಜಿಲ್ಲಾಧಿಕಾರಿ ಮಾರುತಿ

ಕೊಪ್ಪಳ: ಕನ್ನಡ ರಾಜ್ಯೋತ್ಸವವು ಕನ್ನಡಿಗರ ಉತ್ಸವವಾಗಿರುವುದರಿಂದ ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸೋಣ ಎಂದು ಕೊಪ್ಪಳ ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಹೇಳಿದರು.  

ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ನಿಮಿತ್ತ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರದಂದು (ಅ.19) ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಪ್ರತಿ ವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಬೇಕು ಎಂಬ ಬಗ್ಗೆ ಸಕರ್ಾರ ದಿಂದ ಸುತ್ತೋಲ್ಲೆ ಬಂದ ಮೇಲೆ ಈ ಕುರಿತು ನಿರ್ಧರಿಸಲಾಗುವುದು.  ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ನ. 01 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಏರ್ಪಡಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು. ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ ಸಾಹಿತಿಗಳನ್ನು ಸನ್ಮಾನಿಸಲಾಗುವುದು ಹಾಗೂ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾಥರ್ಿಗಳಿ ಬಹುಮಾನ ವಿತರಿಸಲಾಗುವುದು.  ಅಂದು ಜಿಲ್ಲಾ ಕ್ರೀಡಾಂಗಣಕ್ಕೆ ತೆರಳಲು ಶಾಲಾ ಮಕ್ಕಳಿಗೆ ಅನುಕೂಲವಾಗುವಂತೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ವ್ಯವಸ್ಥೆಯನ್ನು ಕಲ್ಪಿಸಬೇಕು.  ಜಿಲ್ಲಾ ಕ್ರೀಡಾಂಗಣ ರಸ್ತೆ ಮೂಲಕವೇ ಹೊರಡುವ ಇತರೆ ಬಸ್ಗಳಲ್ಲಿಯೂ ಸಹ ಮಕ್ಕಳನ್ನು ಕ್ರೀಡಾಂಗಣದ ವರೆಗೆ ಕರೆದುಕೊಂಡು ಹೋಗುವಂತೆ ಕೆ.ಎಸ್.ಆರ್.ಟಿ.ಸಿ. ಸಂಸ್ಥೆಯವರು ಚಾಲಕರಿಗೆ ನಿದರ್ೆಶನವನ್ನು ನೀಡಬೇಕು. ರಾಜ್ಯೋತ್ಸವದ ಹಿಂದಿನ ದಿನ ನಗರದ ಪ್ರಮುಖ ರಸ್ತೆ ಮತ್ತು ಜಿಲ್ಲಾ ಕ್ರೀಡಾಂಗಣ ಹಾಗೂ ಸಾಹಿತ್ಯ ಭವನವನ್ನು ಸ್ವಚ್ಛಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಅವರು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.  

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕ ಸಿದ್ದಲಿಂಗೇಶ ಕೆ.ರಂಗಣ್ಣನವರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಆರ್.ಜಿ. ನಾಡಗೀರ, ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿದರ್ೇಶಕ ಜಿ. ಸುರೇಶ, ತಹಶೀಲ್ದಾರ ಜೆ.ಬಿ. ಮಜ್ಗಿ, ಸಾಹಿತಿ ಮಹಾಂತೇಶ ಮಲ್ಲನಗೌಡರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದರು.