ಹುತಾತ್ಮರ ತ್ಯಾಗವನ್ನು ಮುಂದಿನ ಪೀಳಿಗೆಗೆ ತಿಳಿಸೋಣ: ಜಿಲ್ಲಾಧಿಕಾರಿ ಸ್ನೇಹಲ್ ಆರ್‌

ಹುತಾತ್ಮರ ತ್ಯಾಗವನ್ನು ಮುಂದಿನ ಪೀಳಿಗೆಗೆ ತಿಳಿಸೋಣ: ಜಿಲ್ಲಾಧಿಕಾರಿ ಸ್ನೇಹಲ್ ಆರ್‌ Let's convey the sacrifice of the martyrs to the next generation: District Collector Snehal R

ಲೋಕದರ್ಶನ ವರದಿ 

ಧಾರವಾಡ  01: ಸಮಾಜಕ್ಕೆ ಒಳ್ಳೆಯದು ಆಗಬೇಕಾದರೆ ಹಲವರ ತ್ಯಾಗ ಮತ್ತು ಬಲಿದಾನ ಅಗತ್ಯ ಎಂಬುದನ್ನು ನಮ್ಮ ಹಿರಿಯರು ತೋರಿಸಿಕೊಟ್ಟಿದ್ದಾರೆ. ಅವರ ತ್ಯಾಗದ ಸಂದೇಶವನ್ನು ಸ್ಮರಿಸಿ, ಮುಂದಿನ ಪೀಳಿಗೆಗೆ ತಿಳಿಸುವ ಕೆಲಸವನ್ನು ನಾವು ಮಾಡಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್‌. ಆರ್ ಹೇಳಿದರು. ಅವರು ಇಂದು (ಜು.1) ಬೆಳಿಗ್ಗೆ ನಗರದ ಜಕಣಿಬಾವಿ ರಸ್ತೆಯಲ್ಲಿನ ಹುತಾತ್ಮರ ವರ್ತುಲದಲ್ಲಿರುವ ಹುತಾತ್ಮರ ಸ್ಮಾರಕಕ್ಕೆ ಗೌರವ ಸಮರೆ​‍್ಣ ಮಾಡಿ, ಮಾತನಾಡಿದರು. 

1921ರ ಜುಲೈ 1 ರಂದು ಸಾರಾಯಿ (ಮದ್ಯ) ಮಾರಾಟ ನಿಷೇಧಕ್ಕೆ ಆಗ್ರಹಿಸಿ ನಡೆದ ಸ್ವಾತಂತ್ರ್ಯ ಹೋರಾಟದ ಚಳುವಳಿಯಲ್ಲಿ ಭಾಗವಹಿಸಿದ್ದ ಮಲ್ಲಿಕ ಸಾಬ್ ಬಿನ ಮರ್ದಾನಸಾಬ್, ಗೌಸುಸಾಬ್ ಬಿನ ಖಾದರ ಸಾಬ್ ಹಾಗೂ ಅಬ್ದುಲ್ ಗಫಾರ ಚೌಕತಾಯಿ ಅವರು ಗುಂಡೇಟಿಗೆ ಬಲಿಯಾಗಿ ಹುತಾತ್ಮರಾದರು ಎಂದು ಅವರು ಹೇಳಿದರು. 

ಸಮಾಜದ ಒಳಿತಿಗಾಗಿ ಶ್ರಮಿಸಿ, ತಮ್ಮ ಜೀವವನ್ನೇ ತ್ಯಾಗ ಮಾಡಿದ ಈ ಮೂವರು ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.  ಸಮಾಜದ ಹಿತಕ್ಕಾಗಿ ಹೋರಾಡಿದ ಈ ಮಹನೀಯರು ತಮ್ಮ ವೈಯಕ್ತಿಕ ಬದುಕಿಗಿಂತ ಜನರ ಒಳಿತನ್ನೇ ಮುಖ್ಯವೆಂದು ಪರಿಗಣಿಸಿ ಹೋರಾಟ ನಡೆಸಿದರು. ಉತ್ತಮ ಸಮಾಜ ನಿರ್ಮಾಣವಾಗಬೇಕಾದರೆ ಅನೇಕ ಜನರ ತ್ಯಾಗ ಮತ್ತು ಬಲಿದಾನ ಅಗತ್ಯವಾಗುತ್ತದೆ ಎಂಬುದನ್ನು ಅವರ ಜೀವನವೇ ನಮಗೆ ತಿಳಿಸಿಕೊಡುತ್ತದೆ. ಸಮಾಜದ ಹಿತಕ್ಕಾಗಿ ತಮ್ಮ ಪ್ರಾಣವನ್ನೇ ಅರ​‍್ಿಸಿದ ಅವರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.  

ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ ಅವರು ಮಾತನಾಡಿ. ಸರಾಯಿ ಮಾರಾಟ ನಿಷೇಧಕ್ಕಾಗಿ ಹೋರಾಟ ನಡೆಸಿದ ಮಹಾತ್ಮರು ಸಮಾಜದ ಹಿತಕ್ಕಾಗಿ ತಮ್ಮ ಜೀವನವನ್ನೇ ಬಲಿದಾನ ಮಾಡಿದರು. ಅವರ ತ್ಯಾಗವು ಮದ್ಯಮುಕ್ತ ಸಮಾಜ ನಿರ್ಮಾಣದ ಸಂಕಲ್ಪಕ್ಕೆ ಪ್ರೇರಣೆಯಾಗಿದೆ. ಅವರ ಆದರ್ಶಗಳು ಇಂದಿಗೂ ಜನರಲ್ಲಿ ಜಾಗೃತಿ ಮೂಡಿಸುತ್ತಿವೆ. ಹುತಾತ್ಮರ ತ್ಯಾಗವನ್ನು ಸ್ಮರಿಸುವ ಮೂಲಕ ಸಮಾಜ ಸೇವೆಯ ಮೌಲ್ಯವನ್ನು ಉಳಿಸಬೇಕಾಗಿದೆ. ಅವರ ಬಲಿದಾನವು ಇತಿಹಾಸದಲ್ಲಿ ಅಜರಾಮರವಾಗಿದೆ ಎಂದು ಅವರು ಹೇಳಿದರು. 

ಕಿರಿಯ ನ್ಯಾಯವಾದಿ ಬಸವಪ್ರಭು ಹೊಸಕೇರಿ ಅವರು ಮಾತನಾಡಿ. ಮದ್ಯ ಮಾರಾಟ ನಿಷೇಧಕ್ಕಾಗಿ ನಡೆದ ಹೋರಾಟದಲ್ಲಿ ಮೂವರು ಹುತಾತ್ಮರು ತಮ್ಮ ಪ್ರಾಣವನ್ನು ಬಲಿದಾನ ಮಾಡಿದ್ದರು. ಅವರ ತ್ಯಾಗವನ್ನು ಸ್ಮರಿಸುವ ಉದ್ದೇಶದಿಂದ ಪ್ರತಿವರ್ಷ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಸಮಾಜದ ಒಳಿತಿಗಾಗಿ ಅವರು ನಡೆಸಿದ ಹೋರಾಟ ಇಂದಿಗೂ ಸ್ಫೂರ್ತಿದಾಯಕವಾಗಿದೆ. ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು. 

ಕಾರ್ಯಕ್ರಮದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷ ಶಂಕರ ಹಲಗತ್ತಿ, ಪ್ರದಾನ ಕಾರ್ಯದರ್ಶಿ ರವೀಂದ್ರ ಆಕಳವಾಡಿ, ಧಾರವಾಡ ವಾಣಿಜ್ಯೋದ್ಯಮ ಸಂಘದ ಕಾರ್ಯದರ್ಶಿ ಸಂಗಮೇಶ್ವರಯ್ಯಾ ಲಿಂಬೆಣ್ಣದೇವರಮಠ, ಪಂಡಿತ ಮುಂಜಿ, ವೀರಣ್ಣಾ ಪತ್ತಾರ, ಚಂದ್ರಶೇಖರ ಅಮಿನಗಡ, ಶಶಿಧರ  ನರೇಂದ್ರ, ಮಲ್ಲಿಕಾರ್ಜುನ ಚಿಕ್ಕಮಠ, ಕಾರ್ಯಕ್ರಮ ಸಂಘಟಕ ಉದಯ ಯಂಡಿಗೇರಿ, ಮಹಾಂತೇಶ ಲಿಂಬೆಣ್ಣದೇವರಮಠ, ಬಸವರಾಜ ಅಕ್ಕಿ, ಈರಣ್ಣಾ  ಆಕಳವಾಡಿ, ವಿಜಯಾ ಲಂಬೆಣ್ಣದೇವರಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.