ಮಹರ್ಷಿ ವಾಲ್ಮೀಕಿ ಆದರ್ಶ ಪಾಲಿಸೋಣ: ಶಾಸಕ ರಾಜುಗೌಡ
Let's follow the ideals of Maharishi Valmiki: MLA Rajugowda
ಮಹರ್ಷಿ ವಾಲ್ಮೀಕಿ ಆದರ್ಶ ಪಾಲಿಸೋಣ: ಶಾಸಕ ರಾಜುಗೌಡ
ದೇವರಹಿಪ್ಪರಗಿ 07: ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.
ಪಟ್ಟಣದ 1008 ಜಗದ್ಗುರು ಪಂಚಾಚಾರ್ಯರ ಕಲ್ಯಾಣ ಮಂಟಪದಲ್ಲಿ ನಡೆದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ‘ರಾಮಾಯಣ’ ಗ್ರಂಥವನ್ನು ರಚಿಸಿ ದೇಶ ಮಾತ್ರವಲ್ಲದೆ ಇಡೀ ಜಗತ್ತಿನಲ್ಲಿ ಮಾದರಿಯಾಗಿದ್ದಾರೆ. ರಾಮಾಯಣದ ಮೂಲಕ ಮನುಕುಲಕ್ಕೆ ಮಾರ್ಗದರ್ಶನ ನೀಡಿದ್ದಾರೆ. ಅದರಲ್ಲಿರುವ ಸಂದೇಶಗಳು ಪ್ರಸ್ತುತವಾಗಿದ್ದು, ಯುವಕರು ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು’ಮಕ್ಕಳಿಗೆ ಶಿಕ್ಷಣದ ಜೊತೆ ಒಳ್ಳೆಯ ಸಂಸ್ಕಾರ ನೀಡಬೇಕು. ಬರುವಂತ ದಿನಗಳಲ್ಲಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಶಾಲೆ ಹಾಗೂ ಹಾಸ್ಟೆಲ್ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.ಮಾಜಿ ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ ಅವರ ಫೋಟೋ ಪೂಜೆ ನೆರವೇರಿಸಿ ಮಾತನಾಡಿದ ಅವರು, ವಾಲ್ಮೀಕಿ ಅವರ ಆದರ್ಶ ಮೌಲ್ಯಗಳನ್ನು ಸಮುದಾಯದ ಯುವಕರು ಪಾಲನೆ ಮಾಡುವ ಮೂಲಕ ಶಿಕ್ಷಣವಂತರಾಗಿ ಬೇರೆ ಸಮುದಾಯದವರಿಗೆ ಸಹಾಯ ಮಾಡುವ ಕೆಲಸವಾಗಬೇಕು ಎಂದರು.ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಮುಖ್ಯಸ್ಥರು ಹಾಗೂ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಪ್ರಭುಗೌಡ ಲಿಂಗದಳ್ಳಿ (ಚಬನೂರ) ಅವರು ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು ‘ಮಹರ್ಷಿ ವಾಲ್ಮೀಕಿ ರಾಮಾಯಣ ಮಾನವ ಜನಾಂಗಕ್ಕೆ ಬದುಕುವ ನೈತಿಕತೆಯ ಕೈಗನ್ನಡಿಯಾಗಿದೆ. ಮೇರು ಕೃತಿಯನ್ನು ನೀಡಿದ ವಾಲ್ಮೀಕಿ ಅವರ ಆದರ್ಶ ಮೌಲ್ಯಗಳನ್ನು ಪ್ರತಿಯೊಬ್ಬರು ಪಾಲನೆ ಮಾಡಬೇಕು. ಜೊತೆಗೆ ಎಲ್ಲಾ ಸಮುದಾಯದವರ ಜೊತೆ ಬೆರೆತು ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸ್ಥಳೀಯ ಪರದೇಶಿ ಮಠದ ಪ.ಪೂ ಶ್ರೀ ಶಿವಯೋಗಿ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾದ ಡಾ. ರಾಮು ನಾಯಕ್ ಅವರು ,ಆದಿ ಕವಿ ಮಹರ್ಷಿ ವಾಲ್ಮೀಕಿ ಹಾಗೂ ಸಮುದಾಯದ ಬಗ್ಗೆ ಉಪನ್ಯಾಸ ನೀಡಿದರು.ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮುಖಂಡರಾದ ಸಾಹೇಬಣ್ಣ ಬಾಗೇವಾಡಿ,ರಾವುತ ತಳಕೇರಿ, ಯಮನೂರಿ ಸಿಂದಗೇರಿ ಮಾತನಾಡಿದರು. ಶ್ರೀ ಮಹರ್ಷಿ ವಾಲ್ಮೀಕಿ ಮಹಾಸಭಾ ಸಂಘದ ತಾಲೂಕು ಘಟಕದ ಅಧ್ಯಕ್ಷರಾದ ಶರಣಗೌಡ ಪಾಟೀಲ ಅವರ ನೇತೃತ್ವದಲ್ಲಿ ರಾಜಕೀಯ, ಸಮುದಾಯದ ಮುಖಂಡರು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆಯನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಡೊಳ್ಳು ಕುಣಿತ, ಕೋಲಾಟಗಳೊಂದಿಗೆ ತಾಲೂಕಿನ ಪ್ರಗತಿಪರ ಸಂಘಟನೆಯ ಹಾಗೂ ಸಮುದಾಯದ ಮುಖಂಡರು ಭಾಗವಹಿಸಿದ್ದು ವಿಶೇಷವಾಗಿತ್ತು .ಇದೇ ಸಂದರ್ಭದಲ್ಲಿ ತಹಸಿಲ್ದಾರ್ ಪ್ರಕಾಶ ಸಿಂದಗಿ,ತಾ.ಪಂ ಇಒ ಭಾರತಿ ಚೆಲುವಯ್ಯ,ಪ.ಪಂ ಅಧ್ಯಕ್ಷರ ಪ್ರತಿನಿಧಿಯಾದ ಬಸವರಾಜ ದೇವಣಗಾಂವ, ಉಪಾಧ್ಯಕ್ಷರಾದ ರಮೇಶ ಮಸಿಬಿನಾಳ,ಮುಖಂಡರುಗಳಾದ ಮಹೇಶ ಸುಣಗಾರ, ಬಾಳಾಸಾಹೇಬಗೌಡ ಪಾಟೀಲ, ಬಸೀರಅಹ್ಮದ್ ಬೇಪಾರಿ, ರೀಯಾಜ ಯಲಿಗಾರ, ಸಿದ್ದು ಬುಳ್ಳಾ, ಸಂಗಮೇಶ ಛಾಯಗೋಳ, ಹುಯೋಗಿ ತಳ್ಳೊಳ್ಳಿ, ಸಿದ್ದನಗೌಡ ಬಿರಾದಾರ, ಕಾಸುಗೌಡ ಬಿರಾದಾರ, ಸಿದ್ದು ಮೇಲಿನಮನಿ, ರಾಜು ಮೆಟಗಾರ,ಲಕ್ಷ್ಮಣ ಕೆಂಜುಟಗಿ, ವಿಠ್ಠಲ, ಮಹಾಂತೇಶ ಮುರಕನಾಳ, ಅಶೋಕ ಬಿರಾದಾರ, ಪಿಡಪ್ಪ ಗಾಣಜಲಿ ಸೇರಿದಂತೆ ತಾಲೂಕು ಸಂಘಟನೆಯ ಪದಾಧಿಕಾರಿಗಳು, ಎಲ್ಲಾ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 