ಲೋಕದರ್ಶನ ವರದಿ
ಬೆಳಗಾವಿ .ಫೆ.26: ವಿದ್ಯಾಥರ್ಿಗಳು ತಮ್ಮ ವೃತ್ತಿನಿರತ ಜೀವನದಲ್ಲಿ ಸದಾ ಹೊಸ ಆಲೋಚನೆಗಳೊಂದಿಗೆ ವ್ಯವಹಾರ ನಡೆಸಿದರೆ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಏಕಸ್ ಏರೋಸ್ಪೇಸ ಸಂಸ್ಥೆಯ ನಿರ್ವಹಣಾ ವಿಭಾಗದ ಉಪಾಧ್ಯಕ್ಷ ಮೋಹನ ಡಿ.ಎಸ್. ಅವರು ಹೇಳಿದರು.
ಭರತೇಶ ಶಿಕ್ಷಣ ಸಂಸ್ಥೆಯ ಪಿ.ಎ.ಅರಿಗ ಭರತೇಶ ಬಿಬಿಎ ಮಹಾವಿದ್ಯಾಲಯದ ವತಿಯಿಂದ ಆಯೋಜಿಸಲಾದ ನಿವರ್ಿಕಲ್ಪ-2019 ತಾಂತ್ರಿಕ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಭಾರತ ದೇಶ ಆಥರ್ಿಕ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಸಾಧಿಸುವದರೊಂದಿಗೆ ಈ ಕ್ಷೇತ್ರದಲ್ಲಿ ಅತೀ ವೇಗವಾಗಿ ಬೆಳೆಯುವ ರಾಷ್ಟ್ರವಾಗಿದೆ. ಭಾರತ ಆಥರ್ಿಕ ಕ್ಷೇತ್ರದಲ್ಲಿ ಇನ್ನಷ್ಟು ಬಲಿಷ್ಠಗೊಳ್ಳಬೇಕಾದರೆ ಪ್ರತಿಯೊಬ್ಬ ವ್ಯಕ್ತಿಯು ಪ್ರತಿನಿತ್ಯ ಕೆಲಸ ಮಾಡಬೇಕು. ಸ್ವಂತ ಉದ್ಯಮ ಅಥವಾ ಉದ್ಯೋಗಿಯಾಗಿ ಕೆಲಸ ಮಾಡಬೇಕು. ಇದರಿಂದ ದೇಶದ ಆಥರ್ಿಕ ಪ್ರಗತಿ ಸುಧಾರಿಸಲಿದೆ ಎಂದು ಅವರು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯದಶರ್ಿ ರಾಜೀವ ದೊಡ್ಡಣ್ಣವರ ಅವರು ಮಾತನಾಡಿ, ಇಂದು ಇಡೀ ವಿಶ್ವ ಭಾರತದತ್ತ ನೋಡುತ್ತಿದೆ. ಸೌರ ಶಕ್ತಿಯ ಇಂಧನ ಭಾರತದಲ್ಲಿ ಹೆಚ್ಚಾಗಿ ಬಳಕೆಯಾಗುತ್ತಿದ್ದು , ಇದೊಂದು ಶುಭ ಸಂಕೇತವಾಗಿದೆ. ಜಗತ್ತಿನಾದ್ಯಂತ ಹವಾಮಾನ ಮತ್ತು ಆಥರ್ಿಕ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ವಿದ್ಯಾಥರ್ಿಗಳು ಹೆಚ್ಚಿನ ಅಧ್ಯಯನ ನಡೆಸಬೇಕೆಂದು ಅವರು ಸಲಹೆ ನೀಡಿದರು.
ಭರತೇಶ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದಶರ್ಿ ಹಾಗೂ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್.ಚೌಗುಲೆ ಕಲಮನಿ ಇವರು ಮಾತನಾಡಿ, ವಿದ್ಯಾಥರ್ಿಗಳು ಎಲ್ಲ ಸ್ಪಧರ್ೆಗಳಲ್ಲಿ ಭಾಗವಹಿಸಿ ತಮ್ಮಲ್ಲಿ ಆತ್ಮ ವಿಶ್ವಾಸವನ್ನು ಬೆಳೆಸಿಕೊಳ್ಳಬೇಕೆಂದು ಅವರು ಹೇಳಿದರು.
ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರಶಾಂತ ಕಾಂಬಳೆ ಅತಿಥಿಗಳನ್ನು ಸ್ವಾಗತಿಸಿದರು. ವೇದಿಕೆ ಮೇಲೆ ಮಹಾವಿದ್ಯಾಲಯದ ಸಲಹಾ ಸಮಿತಿ ಸದಸ್ಯ ಹೀರಾಚಂದ ಕಲಮನಿ, ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು. ಐಶ್ವರ್ಯ ಗಣಾಚಾರಿ ಮತ್ತು ಪ್ರಿಯಂಕಾ ರೈಕಾ ಕಾರ್ಯಕ್ರಮ ನಿರೂಪಿಸಿದರು. ಪಲ್ಲವಿ ಪತಂಗೆ ವಂದಿಸಿದರು.