ಗ್ಯಾರಂಟಿ ಯೋಜನೆ ಲಭಿಸದೇ ಇದ್ದವರ ಸಮಸ್ಯೆ ಪರಿಹರಿಸಲು ಮುಂದಾಗಲಿ

ಗ್ಯಾರಂಟಿ ಯೋಜನೆ ಲಭಿಸದೇ ಇದ್ದವರ ಸಮಸ್ಯೆ ಪರಿಹರಿಸಲು ಮುಂದಾಗಲಿ Let's move forward to resolve the problems of those who have not received the guarantee scheme.

ಗ್ಯಾರಂಟಿ ಯೋಜನೆ ಲಭಿಸದೇ ಇದ್ದವರ ಸಮಸ್ಯೆ ಪರಿಹರಿಸಲು ಮುಂದಾಗಲಿ 

ವಿಜಯನಗರ(ಹೊಸಪೇಟೆ)  05: ಸರ್ಕಾರದ ಮಹತ್ವಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳನ್ನು ಗ್ರಾಮೀಣ ಭಾಗದ ಜನರಿಗೆ, ಬಡವರ್ಗದ ಅರ್ಹ ಫಲಾನುಭವಿಗಳ ಸಮಸ್ಯೆಗಳನ್ನು ಆಲಿಸಿ, ಸಮರ​‍್ಕವಾಗಿ ತಲುಪಿಸುವ ಕಾರ್ಯವನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಮಾಡಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್‌.ಆರ್‌.ಮೆಹರೋಜ್ ಖಾನ್ ಹೇಳಿದರು.  

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರಿ​‍್ಡಸಿದ್ದ ಗ್ಯಾರಂಟಿ ಅನುಷ್ಟಾನ ಸಮಿತಿಯ ಸಮಾಲೋಚನ ಸಭೆಯ ಅಧ್ಯಕ್ಷತೆ ವಹಿಸಿ ಸೋಮವಾರ ಮಾತನಾಡಿದರು, ಈಗಾಗಲೇ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ​‍್ಕವಾಗಿ ಅನುಷ್ಟಾನಗೊಳಿಸುವಲ್ಲಿ ಸರ್ಕಾರ ಮತ್ತು ಅಧಿಕಾರಿಗಳ ವರ್ಗ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿರುವುದರಿಂದಲೇ ಫಲಾನುಭವಿಗಳಿಗೆ ಯೋಜನೆಗಳ ಲಭ್ಯತೆ ಸಕಾರವಾಗಿದೆ. ಆದರೆ ಗ್ರಾಮೀಣ ಭಾಗದಲ್ಲಿ ಕೆಲವು ಸಣ್ಣಪುಟ್ಟ ಸಮಸ್ಯೆಗಳಿಂದ ಅರ್ಹ ಫಲಾನುಭವಿಗಳು ಯೋಜನೆಗಳನ್ನು ಪಡೆಯುವಲ್ಲಿ ವಂಚಿತರಾಗಿದ್ದಾರೆ ಅಂತಹ ಸಮಸ್ಯೆಗಳಿಗೆ ಶೀಘ್ರ ಪರಿಹಾರ ನೀಡಲು ಸಮಿತಿ ಸದಸ್ಯರು ಕಾರ್ಯೋನ್ಮುಖರಾಗಬೇಕಿದೆ. 

ಸಮಿತಿ ಸದಸ್ಯ ಪರಶುರಾಮ ಮಾತನಾಡಿ ಗ್ರಾಪಂ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಸಮಸ್ಯೆಗಳನ್ನು ಆಲಿಸುವ ಕಾರ್ಯವಾಗುತ್ತಿದೆ ಎಂದರು.  

ಸದಸ್ಯರಾದ ಗೀರೀಶ್ ಗೌರಜ್ಜನವರ್ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯಲ್ಲಿ ಮರಣ ಹೊಂದಿದ ಫಲಾನುಭವಿಗಳ ಖಾತೆಯಲ್ಲಿರುವ ಹಣವನ್ನು ನಾಮಿನಿಗಳಿಗೆ ನೀಡಲು ಬ್ಯಾಂಕ್‌ಗಳಿಂದ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಜಿಪಂ ಸಿಇಒರವರು ಬ್ಯಾಂಕ್‌ಗಳಿಗೆ ನಿಯಮಾನುಸಾರ ಸೂಕ್ತ ನಿರ್ದೇಶನ ನೀಡಬೇಕು ಎಂದರು. 

ಜಿಪಂ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ಮಾತನಾಡಿ, ಬ್ಯಾಂಕಿನ ಸಮಸ್ಯೆಗಳಿಗೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಗುವುದು. ಆಹಾರ ಇಲಾಖೆಯಲ್ಲಿ ಹೊಸ ಪಡಿತರ ಅರ್ಜಿಗೆ ಅವಕಾಶ ನೀಡಿಲ್ಲ. ಈಗಾಗಲೇ ಶೇ.90 ರಷ್ಟು ಪಡಿತರ ನೊಂದಣಿ ಕಾರ್ಯವಾಗಿದೆ. ಹಾಗೂ ಅನಾರೋಗ್ಯ ಪೀಡಿತರಿಗೆ ಆರೋಗ್ಯ ಸೇವೆಗಳಿಗೆ ಆದ್ಯತೆ ನೀಡಿ ರೇಷನ್ ಕಾರ್ಡ್‌ಗಳಲ್ಲಿ ಸೇರಿಸುವ ಪ್ರಕ್ರಿಯೆ ನಿರಂತರವಾಗಿ ಅವಕಾಶ ನೀಡಲಾಗಿದೆ. ಸಮಿತಿ ಸದಸ್ಯರು ಅಂತಹ ಪ್ರಕರಣಗಳಿದ್ದಲ್ಲಿ ಮಾಹಿತಿ ನೀಡುವಂತೆ ಸೂಚಿಸಿದರು. 

ಸಭೆಯಲ್ಲಿ ಜಿಲ್ಲಾ ಮಟ್ಟದ ಪ್ರಾಧಿಕಾರದ ಉಪಾಧ್ಯಕ್ಷರಾದ ಕೆ.ಬದಾವಲಿ, ಕೆ.ಎಸ್‌.ಶಾಂತನಗೌಡ, ಹೆಚ್‌.ಜಂದಿಸಾಹೇಬ್ ಸದಸ್ಯರಾದ ಭಾಗ್ಯಲಕ್ಷ್ಮೀ ಭರಾಡ, ಎಸ್‌.ಯರಿ​‍್ರಸ್ವಾಮಿ, ಡಿ.ವೆಂಕಟರಮಣ, ಪ್ರಭಾಕರ್, ಶೇಕ್ ಮಹಮ್ಮದ್ ಜೀಲಾನ್, ಸೊನ್ನದ ಗುರುಬಸವರಾಜ್, ದೇವರಾಜ್‌.ಪಿ.ಹೆಚ್, ಪರಶುರಾಮ, ಗೌರಜ್ಜನವರ್ ಗೀರೀಶ್, ಜಿಪಂ ಯೋಜನಾಧಿಕಾರಿ ಜೆ.ಎಂ.ಅನ್ನದಾನಸ್ವಾಮಿ, ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ವೇತಾ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಟ್ಟಪ್ಪ, ಹೊಸಪೇಟೆ ವಿಭಾಗದ ಕೆಕೆಆರ್‌ಟಿಸಿ ಅಧಿಕಾರಿ ರಾಜಶೇಖರ್, ಜೆಸ್ಕಾಂ ಕಾರ್ಯಪಾಲಕ ಅಭಿಯಂತರ ಸತೀಶ್ ಕುಮಾರ ಸಭೆಯಲ್ಲಿ ಹಾಜರಿದ್ದರು.