ಬಸವ ಜಯಂತಿ ಕಾರ್ಯಕ್ರಮ ಒಳ್ಳೆಯ ರೀತಿಯಲ್ಲಿ ಆಯೋಜನೆ ಮಾಡೋಣ- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ

Let's organize Basava Jayanti program in a good manner - Additional District Collector Sidrameshwar

ಬಸವ ಜಯಂತಿ ಕಾರ್ಯಕ್ರಮ ಒಳ್ಳೆಯ ರೀತಿಯಲ್ಲಿ ಆಯೋಜನೆ ಮಾಡೋಣ- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ 

ಕೊಪ್ಪಳ  19: 30 ರಂದು ನಡೆಯುವ ಬಸವ ಜಯಂತಿ ಕಾರ್ಯಕ್ರಮವನ್ನು ಎಲ್ಲರೂ ಸೇರಿ ಒಳ್ಳೆಯ ರೀತಿಯಲ್ಲಿ ಆಯೋಜನೆ ಮಾಡೋಣ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು. 

ಅವರು ಶನಿವಾರ ಬಸವ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಅಂದು ಬೆಳಗ್ಗೆ 8 ಗಂಟೆಗೆ ಅಂಬಿಗರ ಚೌಡಯ್ಯ ಉದ್ಯಾನವನದಲ್ಲಿರುವ ಬಸವೇಶ್ವರ ಪುತ್ಥಳಿಗೆ ಹೂ-ಮಾಲೆಗಳನ್ನು ಹಾಕಿದ ನಂತರ 9 ಗಂಟೆಗೆ ಗಂಜ್ ಸರ್ಕಲ್‌ನಲ್ಲಿರುವ ಬಸವೇಶ್ವರ ಮೂರ್ತಿಗೆ ಮಾಲಾರೆ​‍್ಣ ಮಾಡಲಾಗುತ್ತದೆ. ನಂತರ ಸಂಜೆ 4 ಗಂಟೆಗೆ ಗಡಿಯಾರ ಕಂಬದ ಬಳಿ ಇರುವ ಮಹೇಶ್ವರ ದೇವಸ್ಥಾನದಿಂದ ಗವಿಮಠದವರೆಗೆ ಬಸವೇಶ್ವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ ಎಂದರು.ವೇದಿಕೆ ಕಾರ್ಯಕ್ರಮ ಅಂದು ಸಂಜೆ 6 ಗಂಟೆಗೆ ಗವಿಮಠದ ತೇರು ಮೈದಾನದಲ್ಲಿ ನಡೆಯಲಿದೆ. ಡಾ. ಅರವಿಂದ ಜತ್ತಿ ಅಧ್ಯಕ್ಷರು ಬಸವ ಸಮಿತಿ ಬೆಂಗಳೂರು ಇವರಿಂದ ಬಸವೇಶ್ವರ ಕುರಿತು ವಿಶೇಷ ಉಪನ್ಯಾಸ ನೀಡುವರು. ರಥದ ಸಿಂಗಾರ ಒಳ್ಳೆಯ ರೀತಿಯಲ್ಲಿ ಮಾಡಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಗರಸಭೆ ಸೇರಿದಂತೆ ಇತರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ತಮಗೆ ವಹಿಸಿದ ಕೆಲಸ ಕಾರ್ಯಗಳನ್ನು ಜವಾಬ್ದಾರಿಯಿಂದ ಹಾಗೂ ಅಚ್ಚುಕಟ್ಟಾಗಿ ನಿಭಾಯಿಸಬೇಕು. ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯನ್ನು ಎಲ್ಲರೂ ಸೇರಿ ಅದ್ದೂರಿಯಾಗಿ ಆಚರಿಸೋಣ ಎಂದು ಹೇಳಿದರು.ಈ ಸಭೆಯಲ್ಲಿ ಬಸವ ಸಮಾಜದ ಜಿಲ್ಲಾಧ್ಯಕ್ಷರಾದ ಬಸವರಾಜ ಬಳ್ಳೊಳಿ. ಲಿಂಗಾಯತ ಧರ್ಮ ಮಹಾಸಭಾ ರಾಜ್ಯಾಧ್ಯಕ್ಷರಾದ ಈಶಣ್ಣ ಕೊರನಳ್ಳಿ ಹಾಗೂ ಶಾಂತಣ್ಣ ಓಜನಳ್ಳಿ. ಈಶ್ವರ​‍್ಪ ತೋಟಪ್ಪ ದಿನ್ನಿ. ನಗರಸಭೆ ಪೌರಾಯುಕ್ತರಾದ ಗಣಪತಿ ಪಾಟೀಲ್‌. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕರಾದ ಕೊಟ್ರೇಶ ಮರಬನಳ್ಳಿ. ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಪುಷ್ಪಲತ್ ಎಸ್‌. ಸೇರಿದಂತೆ ಇತರರು ಉಪಸ್ಥಿತರಿದ್ದರು.