2027ರ ವೇಳೆಗೆ ಬಳ್ಳಾರಿ ಜಿಲ್ಲೆಯನ್ನು ಮಲೇರಿಯಾ ಮುಕ್ತವಾಗಿಸಲು ಸಂಕಲ್ಪ ಮಾಡೋಣ: ಡಾ.ಮರಿಯಂಬಿ ವಿ.ಕೆ
Let's resolve to make Bellary district malaria-free by 2027: Dr. Mariambi V.K.
ಲೋಕದರ್ಶನ ವರದಿ
ಬಳ್ಳಾರಿ 27: “ಮಲೇರಿಯಾ ಅಂತ್ಯಗೊಳಿಸಲು ಸಂಕಲ್ಪ ಮಾಡೋಣ; ಇದು ನಮ್ಮಿಂದ ಸಾಧ್ಯವಿದೆ” ಎಂಬ ಘೋಷವಾಕ್ಯದೊಂದಿಗೆ ಜಿಲ್ಲೆಯನ್ನು 2027ರ ವೇಳೆಗೆ ಮಲೇರಿಯಾ ಮುಕ್ತಗೊಳಿಸಲು ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಜಿಲ್ಲಾ ವಿಬಿಡಿಸಿ ಅಧಿಕಾರಿಗಳಾದ ಡಾ.ಮರಿಯಂಬಿ ವಿ.ಕೆ ಅವರು ಹೇಳಿದರು.
ವಿಶ್ವ ಮಲೇರಿಯಾ ದಿನಾಚರಣೆ-2026ರ ಅಂಗವಾಗಿ ಸೋಮವಾರ ನಗರದ ಬಂಡಿಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಉದ್ಘಾಟನಾ ಕಾರ್ಯಕ್ರಮ ಹಾಗೂ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
ಮಲೇರಿಯಾ ಪ್ಲಾಸ್ಮೋಡಿಯಂ ಎಂಬ ಪರಾವಲಂಬಿ ಸೂಕ್ಷ್ಮ ಜೀವಿಯಿಂದ ಉಂಟಾಗುತ್ತದೆ. ಇದು ಹೆಣ್ಣು ಅನಾಫಿಲೀಸ್ ಸೊಳ್ಳೆಯ ಕಚ್ಚುವಿಕೆಯಿಂದ ಹರಡುತ್ತದೆ. ಚಳಿ, ನಡುಕ, ಬಿಟ್ಟು ಬಿಟ್ಟು ಬರುವ ಜ್ವರ, ವಾಕರಿಕೆ ಮತ್ತು ಮೈ ಬೆವರುವುದು ಈ ರೋಗದ ಪ್ರಮುಖ ಲಕ್ಷಣಗಳಾಗಿವೆ. ಹಾಗಾಗಿ ಯಾವುದೇ ರೀತಿಯ ಜ್ವರವಿದ್ದರೂ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.
ಮನೆಯ ಸುತ್ತಮುತ್ತ ಇಲಾಖೆ ವತಿಯಿಂದ ನಡೆಸುವ ಕೀಟನಾಶಕ ಸಿಂಪರಣೆಗೆ ಸಹಕರಿಸುವುದು. ಮಲಗುವಾಗ ಕಡ್ಡಾಯವಾಗಿ ಸೊಳ್ಳೆ ಪರದೆ ಬಳಸುವುದು ಮತ್ತು ಕಿಟಕಿಗಳಿಗೆ ಜಾಲರಿ ಅಳವಡಿಸುವುದು. ನೀರು ನಿಲ್ಲುವ ಸ್ಥಳಗಳಲ್ಲಿ ಲಾರ್ವಹಾರಿ ಗಪ್ಪಿ ಮತ್ತು ಗಂಬೂಷಿಯಾ ಮೀನುಗಳನ್ನು ಬಿಡುವ ಮೂಲಕ ಸೊಳ್ಳೆಗಳ ಉತ್ಪತ್ತಿ ತಡೆಯುವುದು ಸೇರಿದಂತೆ ಆರೋಗ್ಯ ಇಲಾಖೆಯಿಂದ ಕೈಗೊಳ್ಳುವ ಕಾರ್ಯಗಳಿಗೆ ಸಹಕರಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ವಿಬಿಡಿಸಿ ಸಮಾಲೋಚಕ ಪ್ರತಾಪ್.ಹೆದ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆಯಲ್ಲಿ ಬಂಡಿಹಟ್ಟಿ ವೈದ್ಯಾಧಿಕಾರಿಗಳಾದ ಡಾ.ಯಾಸ್ಮಿನ್, ಡಾ.ಫಾಮಿದಾ ಭಾನು, ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿಗಳಾದ ನಾಗೇಂದ್ರ್ಪ, ಮರಿಬಸವನಗೌಡ, ನಾಗರಾಜ್, ಬಾಬುರಾವ್ ಹಾಗೂ ಬಳ್ಳಾರಿ ತಾಲ್ಲೂಕಿನ ಆರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 