ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸೋಣ ರಾಜಣ್ಣ ಕಳ್ಯಾಳ
Let's save and develop government schools, Rajanna Kaliala
ಬ್ಯಾಡಗಿ 08 : ನಾವೆಲ್ಲರೂ ನಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸೋಣ ಮತ್ತು ನಮ್ಮ ಶಾಲೆ ನಮ್ಮ ಹೆಮ್ಮೆ ಎಂಬ ಘೋಷವಾಕ್ಯದೊಂದಿಗೆ ಪ್ರತಿಯೊಬ್ಬರೂ ಶಾಲೆ ಪ್ರಗತಿಗಾಗಿ ಹಾಗೂ ಮಕ್ಕಳ ಹೆಚ್ಚಿನ ದಾಖಲೆಗೆ ಎಲ್ಲರೂ ಪ್ರಯತ್ನಿಸೋಣ ಎಂದು ಪುರಸಭೆಯ ನಾಮ ನಿರ್ದೇಶಕ ಸದಸ್ಯ ಶಿಕ್ಷಣ ಪ್ರೇಮಿ ರಾಜಣ್ಣ ಕಳ್ಯಾಳ ಅಭಿಪ್ರಾಯ ಪಟ್ಟರು.
ಪಟ್ಟಣದ ನಂ1 ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದ ಶಿಕ್ಷಕರ ಮತ್ತು ಪೋಷಕರ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು ಇಂದಿನ ದಿನದಲ್ಲಿ ಪೋಷಕರು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದು ಇದು ದುರ್ದೈವದ ಸಂಗತಿ ನಾವೆಲ್ಲರೂ ಸರ್ಕಾರಿ ಶಾಲೆಯಲ್ಲಿ ಕಲಿತು ದೊಡ್ಡ ದೊಡ್ಡ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಆದರೆ ಇತ್ತೀಚಿನ ದಿನಗಳಲ್ಲಿ ಪೋಷಕರಿಗೆ ಇಂಗ್ಲಿಷ್ ವ್ಯಾಮೋಹ ಹೆಚ್ಚಾಗಿ ಖಾಸಗಿ ಶಾಲೆಗೆ ಸೇರಿಸುತ್ತಿದ್ದಾರೆ.
ಇದರಿಂದ ಸರ್ಕಾರಿ ಶಾಲೆಗಳಿಗೆ ಮಕ್ಕಳ ಸಂಖ್ಯೆ ತೀರಾ ಕಡಿಮೆಯಾಗುತ್ತಿದೆ ಸುಮಾರು ನೂರು ವರ್ಷಗಳಷ್ಟು ಹಳೆಯದಾದ ಈ ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಕಲಿತು ಒಳ್ಳೆ ಹುದ್ದೆಯಲ್ಲಿ ಶಿಕ್ಷಕರಾಗಿ ದೊಡ್ಡ ದೊಡ್ಡ ಅಧಿಕಾರಿಗಳಾಗಿ ರಾಜಕಾರಣಿಗಳಾಗಿ ಮತ್ತು ಡಾಕ್ಟರ್ ಗಳಾಗಿ ಸಮಾಜದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಇಂತಹ ಸರ್ಕಾರಿ ಶಾಲೆಯಲ್ಲಿ ಪ್ರತಿಯೊಬ್ಬರು ಮಕ್ಕಳನ್ನು ಕಲಿಸಬೇಕು ಸರ್ಕಾರವು ಮಕ್ಕಳೇ ವಿದ್ಯಾಭ್ಯಾಸಕ್ಕೆ ಅನುಕೂಲ ಕ್ಕೊಗೋಸ್ಕರ ಹಲವಾರು ಯೋಜನೆಗಳನ್ನು ತಂದಿದ್ದಾರೆ ಅದನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದರು ನಾನು ಕೂಡ ಈ ಶಾಲೆಯ ವಿದ್ಯಾರ್ಥಿಯು ಹೌದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್ ವಿ ಮೂಲಿಮನಿ ಶಿಕ್ಷಕರು ಸ್ವಾಗತವನ್ನು ಮಾಡಿದರು ಮತ್ತು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಲೆಯ ವಿದ್ಯಾರ್ಥಿ ಉಮೇಶ್ ಸಂಕಣ್ಣನವರ್ ಭಾಗವಹಿಸಿದ್ದರು ನಿರೂಪಣೆಯನ್ನು ಶಿಕ್ಷಕಿ ಚಟ್ಟಿಯಾರ ನೆರವೇರಿಸಿದರು. ಅಫ್ರಿನ್ ಬಾನು ಅವರು ಕಾರ್ಯಕ್ರಮದಲ್ಲಿ ವಂದನಾರೆ್ಣಯನ್ನು ಮಾಡಿದರು ಈ ಸಂದರ್ಭದಲ್ಲಿ ಮುದ್ದು ವಿದ್ಯಾರ್ಥಿ ಗಳ ಪಾಲಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 