ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಒಟ್ಟಾಗಿ ಶ್ರಮಿಸೋಣ: ಲಿಂಗರಾಜ ಪಾಟೀಲರಿಗೆ ಹಾರೈಕೆ
Let's work together for the development of the education sector: Wishes to Lingaraj Patil
ಲೋಕದರ್ಶನ ವರದಿ
ಹುಬ್ಬಳ್ಳಿ 25: ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಆತ್ಮೀಯರು, ಹಿತೈಸಿಗಳಾದ ಲಿಂಗರಾಜ ಪಾಟೀಲ ಅವರಿಗೆ ಮೂವರು ಲಿಂಗರಾಜ ಹೆಸರಿನ ಶಿಕ್ಷಣ ಕ್ಷೇತ್ರದಲ್ಲಿ ಅಮೋಘ ಸೇವೆ ಸಲ್ಲಿಸಿ, ವಿವಿಧ ಕಾಲೇಜುಗಳಲ್ಲಿ ಪ್ರಾಧ್ಯಾಪಕ, ಪ್ರಾಚಾರ್ಯರಾಗಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಸೇವಾ ನಿವೃತ್ತರಾಗಿ, ಸಾಮಾಜಿಕ, ಧಾರ್ಮಿಕ, ಸಾಹಿತ್ಯ , ಆಧ್ಯಾತ್ಮ ಕ್ಷೇತ್ರದಲ್ಲಿ ತಮ್ಮನ್ನು ತಾವು ಕ್ರಿಯಾಶೀಲರಾಗಿ ತೊಡಗಿಸಿಕೊಂಡು ಕಾರ್ಯ ಮಾಡುತ್ತಿರುವ ನಿವೃತ್ತ ಪ್ರಾಚಾರ್ಯ ಡಾ.ಲಿಂಗರಾಜ ಮುಳ್ಳಳ್ಳಿ, ನಿವೃತ್ತ ಪ್ರಾಚಾರ್ಯ ಡಾ ಲಿಂಗರಾಜ ಡಿ ಹೊರಕೇರಿ, ನಿವೃತ್ತ ಪ್ರಾಚಾರ್ಯ, ಕಸಾಪ ಜಿಲ್ಲಾಧ್ಯಕ್ಷ ಡಾ ಲಿಂಗರಾಜ ಅಂಗಡಿ ಅವರು ಆತ್ಮೀಯವಾಗಿ, ಹುತ್ಪೂರ್ವಕವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಲಿಂಗರಾಜ ಪಾಟೀಲ ಅವರ ಅವಧಿಯಲ್ಲಿ ಒಟ್ಟಾಗಿ ಸಮಾಜ ಅದರಲ್ಲೂ ಶಿಕ್ಷಣ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮ ವಹಿಸಿ ಕಾರ್ಯಮಾಡಲಿ ಎಂದು ಶುಭ ಕೋರಿದರು. ನೂತನ ಶಾಸಕ ಲಿಂಗರಾಜ ಪಾಟೀಲ ಅವರಿಗೆ ರಾಣಿಚನ್ನಮ್ಮ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಪ್ರಾಚಾರ್ಯ ಡಾ ಮಹೇಶ್ ಡಿ ಹೊರಕೇರಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಶುಭ ಕೋರಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 