ಪ್ರಚೋದನಕಾರಿ ಹೇಳಿಕೆ ನೀಡುವ ಸ್ವಪಕ್ಷೀಯರಿಗೆ ಯಡಿಯೂರಪ್ಪ ಕಡಿವಾಣ ಹಾಕಲಿ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಏ 8, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಾಳಿರುವ ನಿಲುವಿನ ಬಗ್ಗೆ ಅವರ ಪಕ್ಷದ ಕೆಲವು ಜನಪ್ರತಿನಿಧಿಗಳು ಪ್ರಚೋದನಕಾರಿ ಮತ್ತು ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಇಂತಹವುಗಳಿಗೆ ಕಡಿವಾಣ ಹಾಕಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸಮುದಾಯಗಳ ನಡುವೆ ಪರಸ್ಪರ ಸಂಘರ್ಷಕ್ಕೆ ಪ್ರಚೋದಿಸುವ ದುಷ್ಕರ್ಮಿಗಳ ವಿರುದ್ಧ ಮುಖ್ಯಮಂತ್ರಿಗಳು ತಾಳಿರುವ ದೃಢ ನಿಲುವು ಸೂಕ್ತ ಮತ್ತು ಸ್ವಾಗತಾರ್ಹ. ಆದರೆ ಅವರ ಸ್ಪಷ್ಟ ಎಚ್ಚರಿಕೆಯ ನಂತರವೂ ಅನೇಕ ಮಾಧ್ಯಮಗಳು ಸಂಕುಚಿತ ಮನೋಭಾವನೆಯಿಂದ ದ್ವೇಷಕಾರಿಕೊಳ್ಳುತ್ತಿವೆ. ಇಂತಹ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಸಮುದಾಯಗಳ ವಿರುದ್ಧ ದ್ವೇಷವನ್ನು ಬಿತ್ತರಿಸುವ ಎಲ್ಲರ ಮೇಲೂ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.ಹಿಂದೆಂದೂ ಕಂಡರಿಯದ ಅನಾರೋಗ್ಯದ ಸಂಕಟದ ಈ ದಿನಗಳಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ. ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಠಿಣ ಕ್ರಮ ಜರುಗಿಸದೇ ಹೋದರೆ ರಾಜ್ಯವೇ ಕೋಮುದಳ್ಳುರಿಗೆ ಬಲಿಯಾಗುವ ಅಪಾಯ ಎದುಗಾಗಲಿದೆ ಎಂದು ಆತಂಕ ವ್ಯಕ್ತಪಡಿಸಿಡಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 