ಕೊಪ್ಪಳ 03: ಮಕ್ಕಳು ವಿದ್ಯಾರ್ಥಿ ದೆಸೆಯಿಂದಲೇ ಸಾಮಾಜಿಕ ಜವಾಬ್ದಾರಿ ಅರಿತುಕೊಳ್ಳಬೇಕಾಗಿದ್ದು, ಜೀವನದಲ್ಲಿ ಶಿಸ್ತು, ಧನಾತ್ಮಕ ಮನೋಭಾವನೆ, ಉತ್ತಮ ವ್ಯಕ್ತಿತ್ವ, ದೇಶ ಭಕ್ತಿ ಮುಂತಾದ ಸಾಮಾಜಿಕ ಜವಾಬ್ದಾರಿಗಳನ್ನು ಬೆಳೆಸುವಲ್ಲಿ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮವು ಸಹಕಾರಿಯಾಗಿದೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಕೆ. ಸುಕುಮಾರರವರು ಹೇಳಿದರು.
ನಗರದ ಸಾಹಿತ್ಯ ಭವನದಲ್ಲಿ ಜರುಗಿದ ಕನರ್ಾಟಕ ರಾಜ್ಯ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಜಿಲ್ಲೆಯಲ್ಲಿ ಆರಂಭವಾದ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ಗಳು ರಾಷ್ಟ್ರದ ಭಾವಿ ಪ್ರಜೆಗಳು. ನೀವು ಜೀವನದಲ್ಲಿ ಶಿಸ್ತು ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ನಡೆಯುವ ಅನೇಕ ಅಪರಾಧ ಕೃತ್ಯಗಳನ್ನು ತಡೆಯುವಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯ ಪಾತ್ರ ಬಹುಮುಖ್ಯವಾಗಿದೆ. ಅದರಲ್ಲೂ ದೇಶದ ಸಂಪತ್ತಾದ ಇಂದಿನ ಮಕ್ಕಳು ವಿದ್ಯಾರ್ಥಿ ದೆಸೆಯಿಂದಲೇ ಸಾಮಾಜಿಕ ಜವಾಬ್ದಾರಿಯನ್ನು ಅರಿತು ರಸ್ತೆ ನಿಯಮಗಳು ಸೇರಿದಂತೆ ಇತರೆ ಸಕರ್ಾರಿ ನಿಯಮಗಳನ್ನು ತಿಳಿದುಕೊಳ್ಳಬೇಕು ಮತ್ತು ಅವುಗಳನ್ನು ಪಾಲಿಸಬೇಕು. ಆರೋಗ್ಯಯುತ ದೇಹ ಹಾಗೂ ಮನಸ್ಥಿತಿಯನ್ನು ರೂಢಿಸಿಕೊಳ್ಳಬೇಕು. ನಮ್ಮ ದೇಶದ ಕಾನೂನು, ಸಂವಿಧಾನವನ್ನು ಅರಿತು ಅದನ್ನು ಗೌರವಿಸಬೇಕು. ನಿತ್ಯ ಜೀವನದಲ್ಲಿ ಸಮಯ ಪಾಲನೆ ಹಾಗೂ ಶಿಸ್ತನ್ನು ರೂಢಿಸಿಕೊಂಡು ಔಪಚಾರಿಕ ಶಿಕ್ಷಣದ ಜೊತೆ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುವ ಸಾಮಥ್ರ್ಯವನ್ನು ಈ ಕಾರ್ಯಕ್ರಮವು ನೀಡುತ್ತದೆ. ಅದರ ಸದುಪಯೋಗವನ್ನು ವಿದ್ಯಾಥರ್ಿಗಳು ಪಡೆಯಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಐ.ಆರ್.ಬಿ ಮುನಿರಾಬಾದ್ನ ಕಮಾಂಡೆಂಟ್ ಡಾ. ರಾಮಕೃಷ್ಣ ಎಂ., ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮವು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು ರಾಜ್ಯ ಸಕರ್ಾರದ ಸಹಭಾಗಿತ್ವದಲ್ಲಿ ಕಳೆದ ಮೂರು ವರ್ಷಗಳಿಂದ ನಮ್ಮ ರಾಜ್ಯದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ 8 ರಿಂದ 10 ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಆ ಶಾಲಾ ವಿದ್ಯಾಥರ್ಿಗಳಲ್ಲಿ ನೈತಿಕತೆ, ದೇಶಭಕ್ತಿ, ಶಿಸ್ತು, ಕಾನೂನು ಸುವ್ಯವಸ್ಥೆ ಕುರಿತ ಅರಿವು, ಮಾದಕ ವಸ್ತುಗಳ ನಿಯಂತ್ರಣ, ಸಮಾಜ ವಿರೋಧಿ ಚಟುವಟಿಕೆಗಳ ನಿಯಂತ್ರಣ ಮುಂತಾದ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುತ್ತದೆ. ಅದರಂತೆ ಕೊಪ್ಪಳ ಜಿಲ್ಲೆಯ ಕೇಂದ್ರೀಯ ವಿದ್ಯಾಲಯವನ್ನು ಆಯ್ಕೆ ಮಾಡಲಾಗಿದೆ.
ಈ ಮೂಲಕ ವಿದ್ಯಾಥರ್ಿಗಳ ದೈಹಿಕ ಹಾಗೂ ಮಾನಸಿಕ ಅಭಿವೃದ್ಧಿ ಮತ್ತು ವ್ಯಕ್ತಿತ್ವ ವಿಕಸನವೇ ಈ ಕಾರ್ಯಕ್ರಮದ ಮೂಲ ಉದ್ದೇಶ. ಈ ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಇಲಾಖೆಗಳು, ಶಾಲಾ ಸಿಬ್ಬಂದಿ ವರ್ಗ, ಪಾಲಕರು, ಮಕ್ಕಳು ಎಲ್ಲರ ಸಕ್ರಿಯ ಭಾಗವಹಿಸುವಿಕೆ ಅಗತ್ಯ ಎಂದು ಅವರು ಹೇಳಿದರು.
ಕಾರ್ಯಕ್ರದಲ್ಲಿ ಉಪಸ್ಥಿತರಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿದರ್ೇಶಕರಾದ ಅಮಿತಾ ಯಲಗೂರಕರ ಮಾತನಾಡಿ, ವಿದ್ಯಾಥರ್ಿ ದೆಸೆಯಲ್ಲಿಯೇ ಸಾಮಾಜಿಕ ಜವಾಬ್ದಾರಿ ಬೆಳೆಸುವ, ವಿದ್ಯಾಥರ್ಿಗಳನ್ನು ಪ್ರಜ್ಞಾವಂತರನ್ನಾಗಿ ಮಾಡುವ ಈ ಕಾರ್ಯಕ್ರಮ ಸಮಾಜ ಸುಧಾರಣೆಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ಪಟ್ಟರು.
ಜಿಲ್ಲಾ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಎಸ್.ಟಿ.ಮೇತ್ರೆ ಮಾತನಾಡಿ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮಕ್ಕೆ ನಮ್ಮ ಕೇಂದ್ರೀಯ ವಿದ್ಯಾಲಯ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ. ಈ ಕಾರ್ಯಕ್ರಮದಲ್ಲಿ ವಿದ್ಯಾಥರ್ಿಗಳು ತಿಳಿದುಕೊಳ್ಳಬೇಕಾದ ಶ್ರೇಷ್ಠ ಹಾಗೂ ಕುತೂಹಲಕಾರಿ ಅಂಶಗಳಿವೆ. ಈಗಾಗಲೇ ಜನಪ್ರಿಯವಾಗಿರುವ ಎನ್.ಸಿ.ಸಿ ಕಾರ್ಯಕ್ರಮಕ್ಕಿಂತಲೂ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮ ಹೆಚ್ಚು ಪರಿಣಾಮಕಾರಿ ಯೋಜನೆಯಾಗಿದ್ದು, ವಿದ್ಯಾಥರ್ಿಗಳನ್ನು ಉತ್ತಮ ನಾಗರಿಕರನ್ನಾಗಿ ಮಾಡುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯದಾ ಆಯಿಷಾ, ವಿವಿಧ ಇಲಾಖೆಗಳ ಅಧಿಕಾರಿಗಳು, ಕೇಂದ್ರೀಯ ವಿದ್ಯಾಲಯದ ಮಕ್ಕಳು, ಪಾಲಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕೇಂದ್ರೀಯ ವಿದ್ಯಾಲಯದ ಮಕ್ಕಳು ಪ್ರಾರ್ಥನೆ ಹಾಗೂ ಸ್ವಾಗತ ಗೀತೆಗಳನ್ನು ನಡೆಸಿಕೊಟ್ಟರು. ಶಿಕ್ಷಕಿ ನಳಿನಿ ಶಾ ಸ್ವಾಗತಿಸಿದರು. ಅಂಜಲಿ ಸಿಂಗ್ ನಿರೂಪಿಸಿದರು.