ಬಳ್ಳಾರಿ 13: ಮಕ್ಕಳಲ್ಲಿನ ಅನೇಕ ರೀತಿಯ ಪ್ರತಿಭೆಗಳನ್ನು ಗುರುತಿಸಲು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂದು ಸರ್ಕಾರಿ ಕನ್ನಡ ಮಾಧ್ಯಮ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಪಾಧ್ಯಾಯರಾದ ಲೀಮ ರೋಸ್ ಅವರು ಹೇಳಿದರು.
ರಾಜ್ಯ ಬಾಲಭವನ ಸೊಸೈಟಿ (ರಿ) ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಬಾಲಭವನ ಸೊಸೈಟಿ ಇವರ ಸಹಯೋಗದಲ್ಲಿ ನಗರದ ಪಾರ್ವತಿ ನಗರ ಬಡಾವಣೆಯ ಸರಕಾರಿ ಕನ್ನಡ ಮಾಧ್ಯಮ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 05 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಗುರುವಾರ ಏರಿ್ಡಸಿದ್ದ ಚಿತ್ರಕಲೆ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.
ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಎಲ್ಲಾ ಮಕ್ಕಳು ಹೆಚ್ಚಾಗಿ ಭಾಗವಹಿಸಲು ಆಸಕ್ತಿ ವಹಿಸಬೇಕು ಎಂದು ಕಿವಿಮಾತು ಹೇಳಿದರು.
ಶಿಕ್ಷಕಿ ಶ್ವೇತಾ ಹೆಚ್.ಎಂ ಅವರು ಮಾತನಾಡಿ, ಮಕ್ಕಳಿಗೆ ವಿವಿಧ ಕಲೆಗಳಲ್ಲಿ ಪ್ರತಿಭೆಯಿದ್ದು, ಅದನ್ನು ಸೂಕ್ತ ರೀತಿಯಲ್ಲಿ ಹೊರ ತರುವಲ್ಲಿ ಇಂತಹ ಸ್ಪರ್ಧೆಯಲ್ಲಿ ಭಾಗವಹಿಸಿದಾಗ ಮಾತ್ರ ತಮ್ಮಲ್ಲಿರುವ ಹೊಸ ಪ್ರತಿಭೆ ಹೊರ ಹೊಮ್ಮಲು ಸಾಧ್ಯ ಎಂದು ಹೇಳಿದರು.
ಚಿತ್ರಕಲೆ ಸ್ಪರ್ಧೆಯಲ್ಲಿ 65 ಮಕ್ಕಳು ಭಾಗವಹಿಸಿದ್ದರು. ವಿಜೇತರಾದ ಮಕ್ಕಳಿಗೆ ಪ್ರಮಾಣ ಪತ್ರ ಹಾಗೂ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕರಾದ ವೀಣಾಕುಟ್ಟಿ.ಎಂ., ಶಶಿರೇಖಾ, ಶರ್ಮಿಳಾ.ಯು., ಜಿಲ್ಲಾ ಬಾಲಭವನ ಸೊಸೈಟಿಯ ಕಚೇರಿ ಸಹಾಯಕ ಜೀರ್ ಮಲ್ಲಿಕಾರ್ಜುನ, ಜಿಲ್ಲ್ಲಾ ಮಹಿಳಾ ಸಬಲೀಕರಣ ಘಟಕದ ಕಾರ್ಯಕ್ರಮ ಸಂಯೋಜಕ ಷಹಜಹಾನ್.ಟಿ ಸೇರಿದಂತೆ ಸಿಬ್ಬಂದಿ ವರ್ಗ ಮತ್ತು ಶಾಲಾ ಮಕ್ಕಳು ಭಾಗವಹಿಸಿದ್ದರು.