ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಸಮಾನ ಶಿಕ್ಷಣ ಜಾರಿಯಾಗಲಿ
Let equitable education be implemented in today's education system
ರಾಣೇಬೆನ್ನೂರು, ಆ.21: ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿರುವ ಹಲವು ವೈರುಧ್ಯಗಳನ್ನು ನಿವಾರಿಸಿ ಎಲ್ಲರಿಗೂ ಸಮಾನ ಶಿಕ್ಷಣ ದೊರೆಯುವಂತೆ ಸರ್ಕಾರಗಳು ಜವಾಬ್ದಾರಿಯುತವಾಗಿ ಕ್ರಮ ಕೈಗೊಳ್ಳಬೇಕು ಎಂದು ಯುವಕವಿ ಮಾರುತಿ ತಳವಾರ ಹೇಳಿದರು.
ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಆಯೋಜಿಸಿದ್ದ 10ನೇ ವಿದ್ಯಾರ್ಥಿ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣ ಕ್ಷೇತ್ರದಲ್ಲಿ ಸಮಾನತೆ ಸಾಧಿಸುವುದು ಅತ್ಯಗತ್ಯ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ವೈಚಾರಿಕ ಚಿಂತನೆ ಬೆಳೆಸಬೇಕು. ವಿದ್ಯಾರ್ಥಿ ಸಮುದಾಯವು ನ್ಯಾಯ, ಸಮಾನತೆ ಹಾಗೂ ಶೈಕ್ಷಣಿಕ ಹಕ್ಕುಗಳಿಗಾಗಿ ಹೋರಾಟ ನಡೆಸುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.
ಸ್ವಾಮಿ ವಿವೇಕಾನಂದ, ಡಾ. ಬಿ.ಆರ್. ಅಂಬೇಡ್ಕರ್, ಭಗತ್ಸಿಂಗ್ ಸೇರಿದಂತೆ ಮಹನೀಯರು ಶಿಸ್ತು ಮತ್ತು ಪ್ರಗತಿಪರ ಚಿಂತನೆಗಳನ್ನು ಅಳವಡಿಸಿಕೊಂಡು ದೇಶದ ಭವಿಷ್ಯ ರೂಪಿಸಲು ಶ್ರಮಿಸಿದ್ದಾರೆ. ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದರು.
ಜಿಲ್ಲಾಧ್ಯಕ್ಷ ಬಸವರಾಜ್ ಎಸ್. ಮಾತನಾಡಿ, ಹೋರಾಟದ ತತ್ವ ಹಾಗೂ ಸಿದ್ಧಾಂತ ಹೊಂದಿರುವ ಯುವ ಸಮುದಾಯವು ಆದರ್ಶ ಜೀವನ ರೂಪಿಸಿಕೊಂಡು ಕೋಮು ಗಲಭೆಗಳನ್ನು ತಡೆಯಲು ಮುಂದಾಗಬೇಕು. ಜಾತಿ, ಧರ್ಮದ ಹೆಸರಿನಲ್ಲಿ ನಡೆಯುವ ವಿಭಜನಾ ರಾಜಕಾರಣದ ವಿರುದ್ಧ ವಿದ್ಯಾರ್ಥಿಗಳು ಸಂಘಟಿತರಾಗಿ ನ್ಯಾಯಯುತ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.
ಶಿಕ್ಷಣ ಹಾಗೂ ಉದ್ಯೋಗ ಮೂಲಭೂತ ಹಕ್ಕುಗಳಾಗಬೇಕು. ಶಿಕ್ಷಣದ ವ್ಯಾಪಾರೀಕರಣವನ್ನು ತಡೆದು ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸಲು ಎಲ್ಲ ಶಿಕ್ಷಣ ಪ್ರೇಮಿಗಳು ಒಂದಾಗಿ ಹೋರಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲ್ಲೂಕು ಅಧ್ಯಕ್ಷ ಗೌತಮ್ ಸಾವಕ್ಕನವರ್ ವಹಿಸಿದ್ದರು. ಸಿಂಧು ಮಕರವಳ್ಳಿ ಸ್ವಾಗತಿಸಿ ನಿರೂಪಿಸಿದರು. ಜಿಲ್ಲಾ ಮುಖಂಡರಾದ ಅರುಣ್ ಕುಮಾರ್ ನಾಗಾವತ್, ಚೈತ್ರಾ ಕೊರವರ ಸೇರಿದಂತೆ ಎಸ್‌ಎಫ್‌ಐ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 