ನಾವೆಲ್ಲರೂ ಒಂದು ಎಂಬ ಭಾವನೆ ಎಲ್ಲರಲ್ಲೂ ಮೂಡಲಿ: ಗಂಗಾಧರ ಅರಸ್
Let everyone feel that we are all one: Gangadhar Urs
ತಾಳಿಕೋಟಿ 27 : ಎಲ್ಲ ಸಮುದಾಯದವರು ನಾವೆಲ್ಲರೂ ಒಂದೇ ಎಂಬ ಭಾವ ಬೆಳೆಸಿಕೊಂಡಾಗ ಮಾತ್ರ ದೇಶ ಬಲಿಷ್ಠ ವಾಗಲು ಸಾಧ್ಯ ಎಂದು ರಾಷ್ಟ್ರೀಯ ಸೇವಾ ಯೋಜನೆಯ ಜಿಲ್ಲಾ ಸಂಯೋಜನಾಧಿಕಾರಿ ಗಂಗಾಧರ ಅಗಸರ ಹೇಳಿದರು.
ಪಟ್ಟಣದ ಶ್ರೀ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದಿಂದ ಆಶ್ರಯ ಕಾಲೋನಿಯಲ್ಲಿ ಏಳು ದಿನಗಳ ಕಾಲ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದ ಮುಕ್ತಾಯ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಶುಕ್ರವಾರ ಅವರು ಮಾತನಾಡಿದರು. ಉತ್ತಮ ಸಂಸ್ಕಾರಗಳನ್ನು ಯುವಕರು ಮೈಗೂಡಿಸಿಕೊಳ್ಳಬೇಕು. ದುಶ್ಚಟಗಳ ದಾಸರಾಗದೆ ಆರೋಗ್ಯದ ಕಡೆ ಗಮನ ಹರಿಸಬೇಕು ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ ಇದೆಲ್ಲವೂ ನಿಮಗೆ ರಾಷ್ಟ್ರೀಯ ಸೇವಾ ಯೋಜನೆಯಿಂದ ಮಾತ್ರ ಸಾಧ್ಯವಾಗುತ್ತದೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಎಂ.ಎಸ್. ಸರಶೆಟ್ಟಿ ಅವರು ಸಮಾಜ ಸೇವೆ ಅತ್ಯಂತ ಪವಿತ್ರವಾದದ್ದು ನಿಸ್ವಾರ್ಥದಿಂದ ಸೇವೆ ಮಾಡುವ ಗುಣ ಯಾರಲ್ಲಿ ಇರುತ್ತದೆಯೋ ಅವರು ಸಮಾಜದಲ್ಲಿ ಒಬ್ಬ ಆದರ್ಶ ವ್ಯಕ್ತಿಯಾಗಿ ಬಾಳಲು ಸಾಧ್ಯ ಎಂದರು. ವಿ.ವಿ.ಸಂಘದ ಸಹ ಕಾರ್ಯದರ್ಶಿ ಕಾಶಿನಾಥ ಮುರಾಳ ಅವರು ರಾಷ್ಟ್ರದ ಐಕ್ಯತೆ ಮತ್ತು ಸಮಗ್ರತೆಗೆ ತನು-ಮನ ಅರೆ್ಣಯ ಭಾವ ವಿದ್ಯಾರ್ಥಿಯ ದಿಸೆಯಲ್ಲಿ ಕರಗತವಾಗಬೇಕು ಸಮಸ್ಯಗಳನ್ನು ನಿರ್ಭೀತಿಯಿಂದ ನಿವಾರಿಸಲು ಸಾಧ್ಯ ಎಂದು ಹೇಳಿದರು.ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಆರ್.ಎಮ್.ಬಂಟನೂರ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ನಾನು ಎಲ್ಲರಿಗಾಗಿ ಎಲ್ಲರೂ ನನಗಾಗಿ, ಇಂತಹ ಶಿಬಿರಗಳ ಮೂಲಕ ಸಮಾಜ ಪರಿವರ್ತನೆಗೆ ಪ್ರೇರಣೆಯಾಗಬೇಕು ಅಂದಾಗ ಮಾತ್ರ ಸದೃಢ, ಸ್ವಾಸ್ಥ್ಯ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣ ಮಾಡಿಕೊಳ್ಳಲು ಸಾಧ್ಯ ಎಂದು ತಿಳಿಸಿದರು. ಏನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿ ಎ.ಎ.ಗಂಗನಗೌಡರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವೀರೇಶ ಹುನಗುಂದ, ಮಹಿಳಾ ಪ್ರತಿನಿಧಿ ಭಾಗ್ಯಶ್ರೀ ಕಡಕಲ್, ಪ್ರಥಮ ವರ್ಷದ ವರ್ಗ ಪ್ರತಿನಿಧಿ ಮಯೂರ ಕೊಡಬಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬಿ.ಇಡಿ ಮಹಾವಿದ್ಯಾಲಯದ ಎಲ್ಲಾ ಉಪನ್ಯಾಸಕರು ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದರು. ಪ್ರಶಿಕ್ಷಣಾರ್ಥಿ ಪಾರ್ವತಿ ಹಾಗೂ ಸಂಗಡಿಗರು ಸ್ವಾಗತ ಗೀತೆ ಹಾಡಿದರು.ಪ್ರಶಿಕ್ಷಣಾರ್ಥಿ ಭಾಗ್ಯವಂತಿ ಸ್ವಾಗತಿಸಿದರು. ಪ್ರಶಿಕ್ಷಣಾರ್ಥಿ ಐಶ್ವರ್ಯ ದೊಡ್ಡಮನಿ ವಂದಿಸಿದರು. ಪ್ರಶಿಕ್ಷಣಾರ್ಥಿ ಕೀರ್ತಿ ಹಂದ್ರಾಳ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 