ಲೋಕದರ್ಶನ ವರದಿ
ಶಿರಹಟ್ಟಿ 15: ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕ ಸಮಸ್ಯೆಯ ಹಿನ್ನಲೆಯಲ್ಲಿ ರೋಗಿಗಳು ಗುಣಮಟ್ಟದ ವೈದ್ಯಕೀಯ ಚಿಕತ್ಸೆಯಿಂದ ವಂಚಿತಾರಾಗುತ್ತಿದ್ದು ವಿವಿಧ ಕಾಯಿಲೆಗಳಿಗೆ ತುತ್ತಾಗುವುದರಿಂದ ಉಚಿತ ಆರೋಗ್ಯ ಶಿಬಿರಗಳು ಅವರಿಗೆ ವರದಾನವಾಗಲಿವೆ ಎಂದು ತಾಲ್ಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಚಂದ್ರಶೇಖರ ಲಮಾಣಿ ಹೇಳಿದರು.
ತಾಲ್ಲೂಕಿನ ಕಡಕೋಳ ಗ್ರಾಮದಲ್ಲಿ ಬುಧುವಾರ ಹಮ್ಮಿಕೊಂಡಿದ್ದ ಅರಣ್ಯ ಇಲಾಖೆ ವತಿಯಿಂದ ಕಪ್ಪತ್ತಗುಡ್ಡದ ಅಂಚಿನಲ್ಲಿರುವ ಗ್ರಾಮಗಳ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬರದಲ್ಲಿ ಅವರು ಮಾತನಾಡಿದರು. ಬಡವರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಆಯೋಜಿಸಿರುವ ಉಚಿತ ಆರೋಗ್ಯ ತಪಾಸಣೆಯಲ್ಲಿ ಸಂಪೂರ್ಣ ಲಾಭವನ್ನು ಈ ಪ್ರದೇಶದ ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.
ತಾಲ್ಲೂಕು ಪಂಚಾಯ್ತಿ ಸ್ಥಾಯಿ ಸಮಿತಿಯ ಅಧ್ಯಕ್ಷ ತಿಪ್ಪಣ್ಣ ಕೊಂಚಿಗೇರಿ ಮಾತನಾಡಿ, ಆರೋಗ್ಯವೇ ಭಾಗ್ಯವೆಂಬತೆ, ಹಳ್ಳಗಳಲ್ಲೂ ಜನರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಿ ಆರೋಗ್ಯವಂತ ಸಮಾಜ ನಿಮರ್ಾಣ ಮಾಡಬೇಕಾದ ಅಗತ್ಯವಿದೆ ಎಂದು ನುಡಿದರು.
ಪ್ರಾಸ್ತಾವಿಕ ಮಾತನಾಡಿದ ಉಪವಲಯ ಅರಣ್ಯಾಧಿಕಾರಿ ಸತೀಶ ಪೂಜಾರ ಗ್ರಾಮ ಪಂಚಾಯ್ತಿ ಸದಸ್ಯರಾದ ಮಹಾದೇವಪ್ಪ ಅಡವಿ, ಈರನಗೌಡ ಪಾಟೀಲ, ಎಸ್.ಟಿ.ಕಪಲಿ, ಮತ್ತು ತಾಲ್ಲೂಕು ಆಸ್ಪತ್ರೆ ಆಡಳಿತದ ವೈದ್ಯಾಧಿಕಾರಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.