ಸರ್ಕಾರದ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪಲಿ: ಪಿಡಿ ಕರೀಂ ಅಸದಿ
Let government programs reach deserving beneficiaries: PD Karim Asadi
ಲೋಕದರ್ಶನ ವರದಿ
ಕಾರವಾರ, ಮಾ.18 :- ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಜನರಿಗೆ ಅನುಕೂಲವಾಗಲೆಂದು ಅನುಷ್ಠಾನಕ್ಕೆ ತರುವ ಎಲ್ಲ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿ ಒದಗಿಸುವ ಮೂಲಕ ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪಬೇಕು ಎಂದು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರರೀಂ ಅಸದಿ ಹೇಳಿದರು.
ಅವರು ಬುಧವಾರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ ವತಿಯಿಂದ ನಡೆದ ಎನ್.ಆರ್.ಎಲ್.ಎಮ್. ಕೃಷಿ ಸಖಿ ಮತ್ತು ಪಶು ಸಖಿ ಅವರಿಗಾಗಿ ಆಯೋಜಿಸಿದ್ದ ಪ್ರಗತಿ ಪರೀಶೀಲನೆ ಸಭೆ ಮತ್ತು ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕೃಷಿ ಸಖಿಗಳು ಕೃಷಿ ಇಲಾಖೆಯಡಿ ಮಣ್ಣು ಪರೀಕ್ಷೆ, ಆತ್ಮ ಯೋಜನೆ, ಮಿಶ್ರ ಬೆಳೆಗಳು, ಹನಿ ನೀರಾವರಿ, ಸಾವಯವ ಕೃಷಿ, ಬೆಳೆ ವಿಮೆ, ಕೃಷಿ ಯಾಂತ್ರೀಕರಣದ ಕುರಿತು ಮಾಹಿತಿ ಪಡೆದು, ತಮಗೆ ನಿಯೋಜಿಸಿದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೃಷಿಕರಿಗೆ ಮಾಹಿತಿ ನೀಡಬೇಕು. ಪಶು ಸಖಿಗಳು ಪಶುಸಂಗೋಪನೆ ಇಲಾಖೆಯಡಿ ಜಾನುವಾರು ಲಸಿಕಾ ಕಾರ್ಯಕ್ರಮ, ದೇಶಿ ತಳಿಗಳ ಅಭಿವೃದ್ಧಿಗೆ ಪ್ರೋತ್ಸಾಹ, ರಾಷ್ಟ್ರೀಯ ಗೋಕುಲ ಮಿಷನ್, ಕಾಲುಬಾಯಿ ರೋಗದ ಕುರಿತು ಜಾಗೃತಿ, ಜಾನುವಾರು ವಿಮೆ, ಮೇವು ಸೇರಿದಂತೆ ವಿವಿಧ ಮಾಹಿತಿ ಪಡೆದುಕೊಂಡು ಪಶುಪಾಲಕರಿಗೆ ಅರಿವು ಮೂಡಿಸಬೇಕು ಎಂದರು.
ಕೃಷಿ ಇಲಾಖೆಯ ಉಪ ನಿರ್ದೇಶಕಿ ಪ್ರತಿಭಾ ಹೂಗಾರ ಹಾಗೂ ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ. ನದಾಫ್ ಕೃಷಿ ಇಲಾಖೆ ಮತ್ತು ಪಶುಸಂಗೋಪನೆ ಇಲಾಖೆಯಡಿ ಲಭ್ಯವಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಎನ್.ಆರ್.ಎಲ್.ಎಮ್. ಯೋಜನೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ನಾಗರಾಜ ಕಲ್ಮನೆ ಸೇರಿದಂತೆ ಜಿಲ್ಲಾ ಸಮಾಲೋಚಕರು, ಎಲ್ಲಾ ತಾಲೂಕುಗಳ ಕೃಷಿ ಸಖಿ ಹಾಗೂ ಪಶು ಸಖಿಯರು ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 