ಪರಿಸರ ಪ್ರೀತಿ ಮುಂದಿನ ಜನಾಂಗದವರಿಗೆ ಸ್ಪೂರ್ತಿಯಾಗಲಿ : ಪಿಎಸ್‌ಐ ಸಂಜಯ ತಿಪ್ಪಾರಡ್ಡಿ
Let love for the environment inspire the next generation: PSI Sanjay Tipparaddy
ಮುದ್ದೇಬಿಹಾಳ 16: ಪರಿಸರ ಸಂರಕ್ಷಿಸುವ ಕೆಲಸದಲ್ಲಿ ನಾವೆಲ್ಲರೂ ಕೈಜೋಡಿಸಬೇಕು. ನಮ್ಮ ಪರಿಸರ ಪ್ರೀತಿಯ ಕೆಲಸ ಮುಂದಿನ ಜನಾಂಗದವರಿಗೆ ಸ್ಪೂರ್ತಿಯಾಗಬೇಕು. ನಾವು ನೆಟ್ಟ ಗಿಡಗಳು ದೊಡ್ಡದಾದಾಗ ಅವುಗಳಿಂದ ಸಿಗುವ ಖುಷಿ ದೊಡ್ಡದು ಎಂದು ಪಿಎಸ್‌ಐ ಸಂಜಯ ತಿಪ್ಪಾರಡ್ಡಿ ಹೇಳಿದರು. ಅವರು ಮಂಗಳವಾರ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಅರಣ್ಯ ಇಲಾಖೆ, ಪುರಸಭೆ, ಹಸಿರು ತೋರಣ ಗೆಳೆಯರ ಬಳಗದ ಸಹಯೋಗದೊಂದಿಗೆ ಗಿಡಗಳನ್ನು ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪುರಸಭೆ ಅಧ್ಯಕ್ಷರಾದ ಮಹಿಬೂಬ ಗೊಳಸಂಗಿ ಮಾತನಾಡಿ, ಪರಿಸರ ಸಂರಕ್ಷಣೆ ವಿಷಯದಲ್ಲಿ ನಾಗರಿಕರಿಗೆ ಎಲ್ಲ ರೀತಿಯ ನೆರವು ನೀಡುತ್ತೇವೆ. ಮುದ್ದೇಬಿಹಾಳ ಪಟ್ಟಣದ ಸೌಂದರ್ಯ ವರ್ಧನೆಗೆ ಜೆಸಿಬಿ, ನೀರು, ಅಲ್ಲಲ್ಲಿ ಸಾರ್ವಜನಿಕ ಆಸನಗಳ ಜೋಡಣೆಗೆ ಆದ್ಯತೆ ನೀಡುತ್ತೇವೆ. "ಅಮೃತ ಮಿತ್ರ" ಯೋಜನೆಯ ಅಡಿಯಲ್ಲಿ ಇನ್ನೂ ಹತ್ತು ಉದ್ಯಾನವನಗಳನ್ನು ತಲಾ ಹತ್ತು ಲಕ್ಷ ರೂ ಅನುದಾನದಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದರು. ಪುರಸಭೆ ಉಪಾಧ್ಯಕ್ಷೆ ಪ್ರೀತಿ ಶರಣು ದೇಗಿನಾಳ ಮಾತನಾಡಿ, ಮುದ್ದೇಬಿಹಾಳ ಪಟ್ಟಣದಲ್ಲಿ ಮೊದಲು ಗಿಡಗಳು ಕಾಣುತ್ತಿರಲಿಲ್ಲ. ಈಗ ಹಸಿರು ತೋರಣ ಬಳಗದಿಂದಾಗಿ ಗಿಡಗಳು ಬೆಳೆದು ನಿಂತು ಎಲ್ಲೆಡೆ ಒಳ್ಳೆಯ ಆರೋಗ್ಯಕರ ಹಸಿರು ಪರಿಸರ ನಿರ್ಮಾಣವಾಗಿದೆ ಎಂದರು.
ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ, ಹಸಿರು ತೋರಣ ಬಳಗದ ಅಧ್ಯಕ್ಷ ಬಿ.ಎಚ್.ಬಳಬಟ್ಟಿ, ಮಾಜಿ ಅಧ್ಯಕ್ಷ ರವಿ ಗೂಳಿ ಮಾತನಾಡಿದರು. ಹತೋಗೆಬ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಪಟ್ಟಣದಲ್ಲಿರುವ ಉದ್ಯಾನವನಗಳನ್ನು ಗುರುತಿಸಿ, ಅಲ್ಲಿ ನಾಮಫಲಕ, ತಂತಿ ಬೇಲಿ ಹಚ್ಚುವ ಕೆಲಸ ನಡೆಯಬೇಕು. ಉದ್ಯಾನವನಗಳಲ್ಲಿ ಗಿಡಗಳನ್ನು ನೆಡಲು ಜೆಸಿಬಿ ನೀಡಬೇಕು.
ನಾಗರಿಕರು ತಮ್ಮ ಬಡಾವಣೆಗಳಲ್ಲಿ ಇರುವ ಉದ್ಯಾನವನಗಳಲ್ಲಿ ಗಿಡಗಳನ್ನು ನೆಡಲು ಮುಂದೆ ಬರಬೇಕು ಎಂದರು. ಕಾರ್ಯಕ್ರಮದಲ್ಲಿ ಗಿಡಗಳನ್ನು ನೆಟ್ಟು ನೀರೆರೆಯಲಾತು. ಕಾರ್ಯಕ್ರಮದಲ್ಲಿ ಪುರಸಭೆಯ ಸದಸ್ಯೆ ಸಹನಾ ಬಡಿಗೇರ, ಭಾರತಿ ಪಾಟೀಲ, ಹತೋಗೆಬ ಕಾರ್ಯದರ್ಶಿ ಅಮರೇಶ ಗೂಳಿ, ಉಪಾಧ್ಯಕ್ಷ ಸೋಮಶೇಖರ ಚೀರಲದಿನ್ನಿ, ಮಾಜಿ ಅಧ್ಯಕ್ಷರಾದ ಬಿ.ಎಸ್.ಮೇಟಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ಸದಸ್ಯರಾದ ಮಲ್ಲಿಕಾರ್ಜುನ ಬಾಗೇವಾಡಿ, ಸುರೇಶ ಕಲಾಲ, ಬಸವರಾಜ ಬಿಜ್ಜೂರ, ಡಾ.ವಿಜಯಕುಮಾರ ಗೂಳಿ, ಡಾ. ಚಂದ್ರಶೇಖರ ಶಿವಯೋಗಿಮಠ, ಶ್ರೀಕಾಂತ ಕಡೂರ ವಕೀಲರು, ಲೋಹಿತ್ ನಾಲತವಾಡ, ಆದಿನಾಥ ಪಂಡಿತ, ಸಾಗರ ಉಕ್ಕಲಿ, ಹಣಮಂತ ಬೆಳಗಲ್ಲ, ವಿಜಯ ಬಡಿಗೇರ, ಎಎಸ್‌ಐ ಅಸ್ಕಿ, ಪ್ರಕಾಶ ಪೂಜಾರಿ, ರವಿ ಲಮಾಣಿ, ಹಣಮಂತ ದೇವರಳ್ಳಿ, ಸೇರಿದಂತೆ ಅರಣ್ಯ ಇಲಾಖೆ, ಪುರಸಭೆ, ಹಸಿರು ತೋರಣ ಬಳಗದ ಸದಸ್ಯರಿದ್ದರು. ಪರಮಾನಂದ ಪಾಟೀಲ ಪ್ರಾರ್ಥಿಸಿದರು. ಸಾಹಿತಿ ಸಿದ್ದನಗೌಡ ಬಿಜ್ಜೂರ ಪರಿಸರ ಗೀತೆ ಹಾಡಿದರು. ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಸ್ವಾಗತಿಸಿ, ನಿರೂಪಿಸಿದರು. ಸಂಗಮೇಶ ಚಲವಾದಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 