ವಿದ್ಯಾರ್ಥಿಗಳು ಕ್ರೀಡಾ ಮನೋಭಾವವನ್ನು ಪ್ರದರ್ಶಿಸಲಿ: ಡಾ. ಕೋರೆ
Let students display sportsmanship: Dr. Corey
ಮಾಂಜರಿ 25: ಗ್ರಾಮೀಣ ಭಾಗದಲ್ಲಿ ವಿದ್ಯಾಭಾಸ ಮಾಡುವ ವಿದ್ಯಾರ್ಥಿಗಳಲ್ಲಿ ಕ್ರೀಡೆಯಲ್ಲಿ ನೈಪುಣ್ಯ ಹೊಂದಿರುತ್ತಾರೆ, ಅದಕ್ಕಾಗಿ ವಿದ್ಯಾರ್ಥಿಗಳು ಆಟ ಪಾಠದ ಜೊತೆಗೆ ಕ್ರೀಡಾಸ್ಪರ್ಧೆಯಲ್ಲಿ ಸಹಭಾಗಿತ್ವ ಬೆಳೆಸಿ ತಮ್ಮ ಕ್ರೀಡಾ ಮನೋಭಾವವನ್ನು ಪ್ರದರ್ಶಿಸಬೇಕು ಅದಕ್ಕಾಗಿ ಕೆಎಲ್‌ಇ ಶಿಕ್ಷಣ ಸಂಸ್ಥೆಯ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಕೆಎಲ್‌ಇ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ ಪ್ರಭಾಕರ್ ಕೋರೆ ಹೇಳಿದರು.
ಅವರು ಇಂದು ಚೀಕೋಡಿ ತಾಲೂಕಿನ ಅಂಕಲಿ ಗ್ರಾಮದ ಶಿವಾಲಯದಲ್ಲಿ ಕೆಎಲ್‌ಇ ಶಿಕ್ಷಣ ಸಂಸ್ಥೆಯ ರಾಯಬಾಗ ತಾಲೂಕಿನ ಯಡ್ರಾವ ಗ್ರಾಮದಲ್ಲಿರುವ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ನಕುಲ ಉಮೇಶ ಕೆಂಚೆ ಚಕ್ರ ಎಸೆತದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ. ಹೇಮಾ ಪ್ರಕಾಶ ಬೆಳೆಸೆ ಮತ್ತು ಕುಮಾರ ಮಲ್ಲಿನಾಥ ಕಲಶೆಟ್ಟಿ ಎತ್ತರ ಜಿಗಿತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಕಾಗಿ ಅವರನ್ನು ಸನ್ಮಾನಿಸುವಾಗ ಅವರು ಮಾತನಾಡುತ್ತಿದ್ದರು.
ರಾಯಬಾಗ್ ಶಾಸಕ ದುರ್ಯೋಧನ ಐಹೊಳೆ ಶುಭ ಕೋರಿದರು. ಇವರ ಜೊತೆಗೆ ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಮಲ್ಲಿಕಾರ್ಜುನ್ ಕೋರೆ, ಅಂಕಲಿ ಗ್ರಾಮ ಪಂಚಾಯತ್ ಸದಸ್ಯ ಸುರೇಶ ಪಾಟೀಲ ಹಾಗೂ ಸ್ಥಳೀಯ ಶಾಲಾ ಸುಧಾರಣಾ ಸಮಿತಿಯ ಆಡಳಿತ ಮಂಡಳಿಯ ಅಧ್ಯಕ್ಷ ಸತ್ಯಪ್ಪ ಬಿಷ್ಠೆ ಸದಸ್ಯ ಸದಾಶಿವ ನಿಪ್ಪಾಣಿ ಅಜೀವ ಸದಸ್ಯ ಬಿ. ಎಸ್. ಅಂಬಿ ಪ್ರಧಾನ ಗುರು ಡಿ. ಬಿ. ಕಬ್ಬೂರೆ ಹಾಗೂ ದೈಹಿಕ ಶಿಕ್ಷಕ ಕುಮಾರ ಎ.ಎಸ್. ಮಗದುಮ್ಮ ಮತ್ತು ಎಸ್. ಜಿ. ಕಾಂಬಳೆ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 