ಬಾಗಲಕೋಟೆ: ಕನ್ನಡದ ನೆಲ, ಜಲ ಹಾಗೂ ಸಂಸ್ಕೃತಿ ಉಳಿವಿಗೆ ಕನ್ನಡ ಅಭಿವೃದ್ದಿ ಪ್ರಾಧಿಕಾರ ಪ್ರೇರಣಾ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ನವನಗರದ ಕಲಾಭವನದಲ್ಲಿಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡ ಬೆಳವಾಗಿ ವಿಭಾಗ ಮಟ್ಟದ ಕನ್ನಡ ಭಾಷಾ ಮಾಧ್ಯಮ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಕನ್ನಡ ಭಾಷೆ ಕೇವಲ ಸಾಂಖ್ಯೇತಿಕವಾಗಿರಬಾರದು. ಪ್ರಾಥಮಿಕ ಹಂತದಲ್ಲಿ ಕನ್ನಡಕ್ಕೆ ಹೆಚ್ಚಿನ ಆದ್ಯತೆ ಕೊಟ್ಟು ಮಕ್ಕಳಲ್ಲಿ ಕನ್ನಡ ಭಾಷೆಯ ಮಹತ್ವವನ್ನು ಅರಿಯುವಂತೆ ಮಾಡಬೇಕು. ಕನ್ನಡ ಭಾಷೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಸಂತೋಷದ ವಿಷಯವಾಗಿದ್ದು, ಇಂತಹ ಪ್ರೇರಣೆ ನಿರಂತರವಾಗಿರಲಿ ಎಂದರು.
ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಶಾಸಕ ಸಿದ್ದರಾಮಯ್ಯನವರು ಕನ್ನಡ ಭಾಷಾ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದ ಅವರು ಬೇರೆ ರಾಜ್ಯಗಳಲ್ಲಿ ಅವರವರ ಮಾತೃ ಭಾಷೆಗಳಿಗೆ ಮಾನ್ಯತೆ ನೀಡುವ ಹಾಗೆ ನಮ್ಮ ರಾಜ್ಯದಲ್ಲಿಯೂ ಸಹ ಕನ್ನಡ ಭಾಷೆಗೆ ಮಹತ್ವ ಸಿಗುತ್ತಿಲ್ಲ. ಏಕೆಂದರೆ ಪ್ರಾಂತೀಯ ಭಾಷೆಯ ವಾತಾವರಣ ನಿಮರ್ಾಣವಾಗಿದೆ. ಇದರಿಂದ ಭಾಷೆಯ ಬಗ್ಗೆ ಅಭಿಮಾನ ಕಡಿಮೆಯಾಗುತ್ತಿರುವುದು ವಿಷಾಧನೀಯ ಸಂಗತಿಯಾಗಿದೆ ಎಂದರು.
ಬೇರೆ ಭಾಷೆ ಕಲಿಯಬೇಕೆಂತಲ್ಲ. ನಮ್ಮ ನೆಲದ ಹಾಗೂ ಸಂಸ್ಕೃತಿಯ ಭಾಷೆಯನ್ನು ಬೆಳೆಸುವ ಕೆಲಸವಾಗಬೇಕು. ಆಂಗ್ಲ ಭಾಷೆ ಕಲಿತರೆ ಮಕ್ಕಳು ಹೆಚ್ಚಿನ ಜ್ಞಾನ ಸಂಪಾದಿಸುತ್ತಾರೆ ಎಂಬ ಭಾವನೆ ಸುಳ್ಳು. ಸಿ.ವಿ.ರಾಮನ್ರವರು ಕನ್ನಡದಲ್ಲೆ ವಿದ್ಯಾಬ್ಯಾಸ ಮಾಡಿ ವಿಜ್ಞಾನಿಯಾಗಿರುವುದನ್ನು ನಾವು ಕಾಣಬಹುದಾಗಿದೆ. ನಮ್ಮ ಸಂಸ್ಕೃತಿ, ಭಾಷೆ ಉಳಿದರೆ ಮಾತ್ರ ನಮ್ಮ ಬದುಕು ಉಳಿಯುತ್ತದೆ. ಬೆಂಗಳೂರಿನಂದ ಮಹಾನಗರಗಳಲ್ಲಿ ಶೇ.80 ರಷ್ಟು ಇತರೆ ಭಾಷಿಗರು ಇದ್ದಾರೆ.
ಆದರೆ ಕನ್ನಡ ಮಾತನಾಡುವವರು ಶೇ.20 ರಷ್ಟು ಮಾತ್ರ ಕಂಡುಬುತ್ತಿದ್ದಾರೆ. ಆದ್ದರಿಂದ ಕನ್ನಡವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಕನ್ನಡ ಭಾಷೆಯ ಸಂರಕ್ಷಣೆಗಾಗಿ ಪ್ರಾಧಿಕಾರವನ್ನು ರಚಿಸಲಾಗಿದ್ದು, ಈ ಹಿಂದೆ ಅದು ಕನ್ನಡ ಕವಲು ಸಮಿತಿಯಾಗಿತ್ತು.
ಈ ಸಮಿತಿಯ ಆಗಿನ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯನವರು ಆಡಳಿತ, ಶಿಕ್ಷಣ ಹಾಗೂ ಉದ್ಯೋಗದಲ್ಲಿ ಕನ್ನಡಕ್ಕೆ ಹೆಚ್ಚು ಒತ್ತು ನೀಡಿದ್ದರು. ಕನ್ನಡದ ಬೆಳವಣಿಗೆಗಾಗಿ 21 ಅಂಶಗಳನ್ನು ರೂಪಿಸಿದ್ದರು. ಈ ಅಂಶಗಳನ್ನು ಅನುಷ್ಠಾನಗೊಳಿಸಿದಲ್ಲಿ ಸರಕಾರಿ ಶಾಲೆಗಳನ್ನು ಸಬಲಿಕರಣಗೊಂಡಂತಾಗುತ್ತದೆ. ಇದರಿಂದ ಮಕ್ಕಳಿಗೆ ಆರೋಗ್ಯ ಪೂರ್ಣ ಶಿಕ್ಷಣ ನೀಡಿದಂತಾಗುತ್ತದೆ ಎಂದರು.
ಎಲ್ಲ ಸರಕಾರಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಭಾಷೆಯಾಗಿ ಕಲಿಸುವದನ್ನು ಕಡ್ಡಾಯ ಮಾಡಬೇಕು. ಈಗಾಗಲೇ ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ 22 ಅಧಿಕೃತ ಭಾಷೆಗಳಿದ್ದು, ಇನ್ನು 99 ಭಾಷೆಗಳು ಅಧಿಕೃತ ಪಡೆಯುವಲ್ಲಿ ಬಾಗಿಲಿಗೆ ಬಂದು ನಿಂತಿವೆ. ಅಧಿಕೃತ ಭಾಷೆಗಳಲ್ಲಿ ಕನ್ನಡಕ್ಕೆ 9 ಸ್ಥಾನದಲ್ಲಿದೆ ಎಂದರು. ವಿವಿಧ ಭಾಷೆಗಳಿಗಿಂತ ಒಂದೂವರೆ ಸಾವಿರ ವರ್ಷದ ಇತಿಹಾಸ ಹೊಂದಿದ್ದರು ಸಹ ಕನ್ನಡ ಭಾಷೆ ಬಡವಾಗುತ್ತಿರುವದಕ್ಕೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ.
ಪರಿಸರದ ಭಾಷೆ, ನೆಲದ ಭಾಷೆ ಹಾಗೂ ಮಾತೃ ಭಾಷೆಗೆ ಬದ್ದತೆ ನೀಡಬೇಕು. ಈ ನಿಟ್ಟಿನಲ್ಲಿ ಪ್ರಾಧಿಕಾರ ಕೆಲಸ ಮಾಡುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಮಾಜಿ ಕುಲಪತಿ ಮಲ್ಲಿಕಾ ಘಂಟಿ, ಜಿಲ್ಲಾಧಿಕಾರಿ ಆರ್.ರಾಮಚಂದ್ರನ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶ್ರೀಶೈಲ ಕರಿಶಂಕರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಬಿ.ಎಚ್.ಗೋನಾಳ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಶಶಿಧರ ಪೂಜಾರಿ, ಕನ್ನಡ ಪ್ರಾಧಿಕಾರದ ಸದಸ್ಯ ಮಹಾಂತೇಶ ಹಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕಿ ಶಶಿಕಲಾ ಹುಡೇದ ಸೇರಿದಂತೆ ಇತರರು ಉಪಸ್ಥಿತರಿದ್ದರು.