ಸಿಎಂ ಬದಲಾವಣೆ ಗೊಂದಲಗಳಿಗೆ ತೆರೆ ಬೀಳಲಿ
Let the CM change clear up the confusion.
ದಾವಣಗೆರೆ: ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಸೃಷ್ಟಿಯಾಗಿರುವ ಗೊಂದಲಗಳಿಗೆ ಪಕ್ಷದ ಹೈಕಮಾಂಡ್ ಶೀಘ್ರದಲ್ಲೇ ತೆರೆ ಎಳೆಯುವ ಅಗತ್ಯವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
‘ಮುಖ್ಯಮಂತ್ರಿ ಗಾದಿಯ ಕುರಿತಂತೆ ನಡೆಯುತ್ತಿರುವ ಚರ್ಚೆ ಪಕ್ಷದ ನಾಯಕರ ಗಮನಲ್ಲಿದೆ. ಇದು ಶೀಘ್ರ ಇತ್ಯರ್ಥ ಆಗಬೇಕು ಎಂಬುದು ಪಕ್ಷದ ಎಲ್ಲ ಶಾಸಕರ ಅಭಿಮತ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಸ್ಸಾಂ ಕಾಂಗ್ರೆಸ್ ಉಸ್ತುವಾರಿ ಕೂಡ ಹೌದು. ಅವರು ದೆಹಲಿಗೆ ತೆರಳಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ’ ಎಂದು ಚನ್ನಗಿರಿ ತಾಲ್ಲೂಕಿನ ಗೋಪೇನಹಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
‘ದೆಹಲಿಯ ಕರ್ನಾಟಕ ಭವನ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿದೆ. ಹೊಸ ಕಟ್ಟಡ ನಿರ್ಮಾಣದ ವಿಚಾರವಾಗಿ ರಾಷ್ಟ್ರ ರಾಜಧಾನಿಗೆ ತೆರಳುತ್ತಿದ್ದೇನೆ. ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಅಭಿಮಾನಿಗಳು ‘ಸಾಹುಕಾರ್ ನಮ್ಮ ಸಿಎಂ’ ಎಂಬ ಘೋಷಣೆ ಕೂಗಿದರು. ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಅಭಿಮಾನ ಮೆರೆದರು.
‘2028ರ
ಸಾರ್ವತ್ರಿಕ ಚುನಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಡಲಿದ್ದೇನೆ. ಪ್ರಸಕ್ತ ಅವಧಿಯಲ್ಲಿ ಆಸೆ ಇರುವವರು ಮುಖ್ಯಮಂತ್ರಿ ಆಗಬಹುದು. ಇದಕ್ಕೆ ನನ್ನ ಬೆಂಬಲವೂ ಇದೆ. ಅಭಿಮಾನಿಗಳು ರಾಜ್ಯದ ಎಲ್ಲೆಡೆ ಹೀಗೆ ಒತ್ತಾಯಿಸುತ್ತಿದ್ದಾರೆ. ಇದರಿಂದ ಗೊಂದಲ ಆಗುವುದು ಬೇಡ’ ಎಂದು ಸುದ್ದಿಗಾರರ ಪ್ರಶ್ನೆಗೆ ಜಾರಕಿಹೊಳಿ ಪ್ರತಿಕ್ರಿಯಿಸಿದರು.
ರಾಜ್ಯ ರಾಜಕೀಯದಲ್ಲಿ ಹಲವು ಬೆಳವಣಿಗೆ: ಊಹಾಪೋಹಗಳಿಗೆ ಕಾರಣವಾದ ಮಹದೇವಪ್ಪ-ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ
ಬೆಂಗಳೂರಿನ ಶಿವಾನಂದ ವೃತ್ತದ ಬಳಿ ಅಕ್ಕಪಕ್ಕದಲ್ಲಿ ಅಧಿಕೃತ ನಿವಾಸಗಳನ್ನು ಹೊಂದಿರುವ ಈ ಇಬ್ಬರು ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರಾಗಿದ್ದಾರೆ.
ವಿದೇಶ ಪ್ರವಾಸದಿಂದ ಹಿಂದಿರುಗಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ನಿನ್ನೆ ಶನಿವಾರ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ ಅವರೊಂದಿಗೆ ರಹಸ್ಯವಾಗಿ ಚರ್ಚೆ ನಡೆಸಿದ್ದು, ಕಾಂಗ್ರೆಸ್ನಲ್ಲಿ ತೀವ್ರ ರಾಜಕೀಯ ಊಹಾಪೋಹಗಳಿಗೆ ಕಾರಣವಾಗಿದೆ.
ಬೆಂಗಳೂರಿನ ಶಿವಾನಂದ ವೃತ್ತದ ಬಳಿ ಅಕ್ಕಪಕ್ಕದಲ್ಲಿ ಅಧಿಕೃತ ನಿವಾಸಗಳನ್ನು ಹೊಂದಿರುವ ಈ ಇಬ್ಬರು ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರಾಗಿದ್ದಾರೆ.
ದಕ್ಷಿಣ ಆಫ್ರಿಕಾಕ್ಕೆ ಒಂದು ವಾರದ ಪ್ರವಾಸಕ್ಕೆ ಹೋಗಿದ್ದ ಸತೀಶ್ ಜಾರಕಿಹೊಳಿ ಮೊನ್ನೆ ಶುಕ್ರವಾರ ಬೆಂಗಳೂರಿಗೆ ಮರಳಿದರು. ನಿನ್ನೆ ಶನಿವಾರ ಬೆಳಗ್ಗೆ ಮಹದೇವಪ್ಪ ಅವರು ಸತೀಶ್ ಜಾರಕಿಹೊಳಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು ಎಂದು ಬಲ್ಲ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ರಾಯ್ ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆಯಿರುವ ಈ ಸಂದರ್ಭದಲ್ಲಿಈ ಇಬ್ಬರು ಸಚಿವರು ರಹಸ್ಯ ಮಾತುಕತೆ ನಡೆಸಿದ್ದು, ರಾಜಕೀಯ ಮಹತ್ವ ಪಡೆದುಕೊಂಡಿದೆ.
ಈ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ನಡೆದ ಸತೀಶ್ ಜಾರಕಿಹೊಳಿ- ಹೆಚ್ ಸಿ ಮಹದೇವಪ್ಪ ಭೇಟಿಯು ರಾಜಕೀಯ ವಲಯಗಳಲ್ಲಿ ಗಮನ ಸೆಳೆದಿದೆ. ಇಬ್ಬರೂ ಸಚಿವರು ಸಿದ್ದರಾಮಯ್ಯ ಅವರು ಐದು ವರ್ಷಗಳ ಅವಧಿಯನ್ನು ಮುಖ್ಯಮಂತ್ರಿಯಾಗಿ ಪೂರ್ಣಗೊಳಿಸಬೇಕು ಎಂದು ನಿರಂತರವಾಗಿ ಪ್ರತಿಪಾದಿಸುತ್ತಾ ಬಂದಿದ್ದಾರೆ. ಯಾವುದೇ ಪರಿಸ್ಥಿತಿಯಲ್ಲಿ ನಾಯಕತ್ವ ಬದಲಾವಣೆಯನ್ನು ಅವರು ದೃಢವಾಗಿ ವಿರೋಧಿಸುತ್ತಾರೆ. ಇದಕ್ಕೆ ವ್ಯತಿರಿಕ್ತವಾಗಿ, ಡಿಕೆ ಶಿವಕುಮಾರ್ ದೆಹಲಿ ಮಟ್ಟದಲ್ಲಿ ತಮ್ಮ ಲಾಬಿಯನ್ನು ಮುಂದುವರೆಸಿದ್ದಾರೆ. ತಮ್ಮ ನಿಲುವಿನಿಂದ ಹಿಂದೆ ಸರಿಯಲು ಡಿ ಕೆ ಶಿವಕುಮಾರ್ ನಿರಾಕರಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ನಿರ್ಣಾಯಕ ಹಂತದಲ್ಲಿ, ಇಬ್ಬರು ಹಿರಿಯ ಸಚಿವರ ನಡುವಿನ ಮಾತುಕತೆಯು ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ಇದು ಕಾಂಗ್ರೆಸ್ನೊಳಗೆ ಕುದಿಯುತ್ತಿರುವ ಅಧಿಕಾರ ಬದಲಾವಣೆಗೆ ಮತ್ತಷ್ಟು ಪುಷ್ಠಿ ನೀಡುತ್ತಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 