ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಆರ್ಥಪೂರ್ಣವಾಗಿರಲಿ : ಜಿಲ್ಲಾಧಿಕಾರಿ

Let the celebration of Anti-Child Labor Day be meaningful: District Collector

ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಆರ್ಥಪೂರ್ಣವಾಗಿರಲಿ : ಜಿಲ್ಲಾಧಿಕಾರಿ

ಕಾರವಾರ, 06  : ಜೂನ್ 12 ರಂದು ನಡೆಯುವ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಮತ್ತು ಪರಿಣಾಮಕಾರಿಯಾಗಿ ಆಚರಿಸುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು.ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿವಿಧ ಇಲಾಖೆಗಳು, ಸರ್ಕಾರೇತರ ಸಂಸ್ಥೆಗಳು, ಸ್ವ ಸಹಾಯ ಸಂಘಗಳು, ಕಾರ್ಮಿಕ ಸಂಘಗಳು, ಉದ್ಯೋಗದಾತರ ಸಂಘಗಳು, ಮತ್ತು ಬಾಲಕಾರ್ಮಿಕ ಪದ್ಧತಿ ವಿರುದ್ಧ ಆಂದೋಲನ ನಡೆಸುತ್ತಿರುವ ಎಲ್ಲಾ ಸಂಘ ಸಂಸ್ಥೆಗಳು ಹಾಗೂ ಸಾಮಾಜಿಕ ಕಾರ್ಯಕರ್ತರ ಸಹಕಾರದೊಂದಿಗೆ, ಬಾಲ ಕಾರ್ಮಿಕ ಪದ್ದತಿ ವಿರೋಧದ ಕುರಿತು ಅರ್ಥವತ್ತಾದ ಕಾರ್ಯಕ್ರಮ ಹಾಗೂ ಚಟುವಟಿಕೆಗಳನ್ನು ಹಮ್ಮಿಕೊಂಡು, ಜಿಲ್ಲೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ಸಮಸ್ಯೆಯ ನಿವಾರಣೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದರುಜೂನ್ 12 ರಂದು ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ತಾವು ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿಯೇ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿಷೇಧ ಕುರಿತ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮವನ್ನು ಆಯೋಜಿಸುವಂತೆ ಮತ್ತು ಶಾಲಾ-ಕಾಲೇಜುಗಳಲ್ಲಿ ಹಾಗೂ ಗ್ರಾಮ/ತಾಲ್ಲೂಕು/ಜಿಲ್ಲಾ ಪಂಚಾಯತಿಯ ಅಧಿಕಾರಿಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಗಳಿಂದ ಪ್ರಮಾಣ ವಚನ ಸ್ವೀಕರಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದರು. 

ಜಿಲ್ಲೆಯ ಎಲ್ಲಾ ಗ್ರಾಮ ಮತ್ತು ತಾಲ್ಲೂಕುಗಳಲ್ಲಿ ಶಾಲಾ-ಕಾಲೇಜು, ಎನ್‌.ಸಿ.ಸಿ ಹಾಗೂ ಎನ್‌.ಎಸ್‌.ಎಸ್ ವಿದ್ಯಾರ್ಥಿಗಳಿಂದ ಜಾಥಾ ಕಾರ್ಯಕ್ರಮವನ್ನು ಆಯೋಜಿಸಿ. ಜಾಥಾ ಕಾರ್ಯಕ್ರಮದಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕ ವಿರೋಧಿ ಪದ್ಧತಿ ಕುರಿತು ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.ಬಾಲ ಹಾಗೂ ಕಿಶೋರ ಕಾರ್ಮಿಕರಿಂದ ಮುಕ್ತರಾಗಿರುವವರನ್ನು , ಬಾಲ ಹಾಗೂ ಕಿಶೋರ ಕಾರ್ಮಿಕ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಕರನ್ನು, ಹೆಚ್ಚು ಮೊಕದ್ದಮೆಗಳನ್ನು ಅಧಿಕಾರಿ/ನೀರೀಕ್ಷಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸುವುದರ ಜೊತೆಗೆ ಬಾಲ ಹಾಗೂ ಕಿಶೋರ ಕಾರ್ಮಿಕರಿಂದ ಮುಕ್ತವಾಗಿ ಮುಖ್ಯವಾಹಿನಿಗೆ ಸೇರಿ ಎಸ್‌.ಎಸ್‌.ಎಲ್‌.ಸಿ. ಹಾಗೂ ಪಿ.ಯು.ಸಿ. ಯಲ್ಲಿ ಶೇ.75ಅ ಕ್ಕಿಂತ ಹೆಚ್ಚಿಗೆ ಅಂಕ ಪಡೆದ ಮಕ್ಕಳಿಗೆ ಪ್ರೋತ್ಸಾಹಧನವನ್ನು ನೀಡುವಂತೆ ಮತ್ತು ಬಾಲ ಹಾಗೂ ಕಿಶೋರ ಕಾರ್ಮಿಕ ಮುಕ್ತ ಗ್ರಾಮಗಳನ್ನು ಗುರುತಿಸಿ ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ನೀಡಿ ಗೌರವಿಸುವಂತೆ ತಿಳಿಸಿದರು.ಬಾಲಕಾರ್ಮಿಕ ವಿರೋಧಿ ದಿನದ ಕುರಿತು ಪ್ರಾಥಮಿಕ/ಪ್ರೌಢಶಾಲಾ ಮಕ್ಕಳಿಗೆ/ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ, ಚರ್ಚಾ ಸ್ಪರ್ಧೆ, ಚಿತ್ರಕಲೆ, ರಸಪ್ರಶ್ನೆ ಕಾರ್ಯಕ್ರಮ ಮತ್ತು ಮಕ್ಕಳಿಂದ ನಾಟಕ ಪ್ರದರ್ಶನಗಳನ್ನು ಆಯೋಜಿಸುವಂತೆ ಮತ್ತು ಜಿಲ್ಲೆಯಾದ್ಯಂತ ಜೂನ್ 13 ರಿಂದ 30 ರ ವರೆಗೆ ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣಾ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸುವಂತೆ ನಿರ್ದೇಶನ ನೀಡಿದರು.ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ, ಉಪ ವಿಭಾಗಾಧಿಕಾರಿ ಕನಿಷ್ಕ, ಪೌರಾಯುಕ್ತ ಜಗದೀಶ್ ಹುಲಗೆಜ್ಜಿ, ಡಿವೈಎಸ್ಪಿ ಗೀರೀಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಲಲಿತಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.