ವಸ್ತ್ರ ಸಂಹಿತೆ ಎಲ್ಲಾ ಸಮುದಾಯಗಳ ಭಾವನೆಗಳಿಗೆ ಪೂರಕವಾಗಿಲಿ
Let the dress code be responsive to the sentiments of all communities.
ಲೋಕದರ್ಶನ ವರದಿ
ಹೂವಿನಹಡಗಲಿ 26: ರಾಜ್ಯ ಸರ್ಕಾರ ವಸ್ತ್ರ ಸಂಹಿತೆಯನ್ನು ರೂಪಿಸುವಾಗ ಅಥವಾ ಜಾರಿಗೆ ತರುವಾಗ ಎಲ್ಲಾ ಜನಾಂಗ ಹಾಗೂ ಸಮುದಾಯಗಳ ಭಾವನೆಗಳಿಗೆ ಪೂರಕವಾಗಿರಬೇಕು ಹಾಗೂ ಸಮಾನವಾಗಿ ಜಾರಿಯಾಗಬೇಕು ಎಂದು ವಿಜಯನಗರ ಜಿಲ್ಲಾ ಬಿಜೆಪಿ ಪಕ್ಷದ ಮುಖಂಡ ಎಂ.ಬಿ. ಬಸವರಾಜ ಹೇಳಿದರು. ಭಾನುವಾರ ಪತ್ರಿಕಾ ಹೇಳಿಕೆಯಲ್ಲಿ ರಾಜ್ಯದಲ್ಲಿ ಎಲ್ಲ ಧರ್ಮಗಳ ಜನರು ಸಹಬಾಳ್ವೆಯಿಂದ ಬದುಕುತ್ತಿದ್ದು, ಸರ್ಕಾರವು ಯಾವುದೇ ನಿರ್ಧಾರ ಕೈಗೊಳ್ಳುವಾಗ ಸಮಾನತೆ ಹಾಗೂ ಸಂವಿಧಾನದ ಮೌಲ್ಯಗಳನ್ನು ಗಮನದಲ್ಲಿಟ್ಟು ಕೊಳ್ಳಬೇಕು.ವಸ್ತ್ರ ಸಂಹಿತೆ ಹೆಸರಿನಲ್ಲಿ ಸಮಾಜದಲ್ಲಿ ಭಿನ್ನಾಭಿಪ್ರಾಯ ಉಂಟಾಗುವಂತ ಕ್ರಮಗಳನ್ನು ತಪ್ಪಿಸಬೇಕು ಎಂದರು.
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿ ರಾಜ್ಯವನ್ನು ಆರ್ಥಿಕವಾಗಿ ದುರ್ಬಲಗೊಳಿಸುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿರುವ ಸರ್ಕಾರ, ರಾಜ್ಯವನ್ನು ಆರ್ಥಿಕ ಸಂಕಷ್ಟದತ್ತ ದೂಡುತ್ತಿದೆ. ಅಭಿವೃದ್ಧಿ ಎಂದರೆ ಕೇವಲ ಜನರಿಗೆ ಉಚಿತ ಯೋಜನೆಗಳು ಹಾಗೂ ಉಡುಗೊರೆಗಳನ್ನು ನೀಡುವುದಲ್ಲ. ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳನ್ನು ಸಮರ್ಕವಾಗಿ ಒದಗಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಸರ್ಕಾರವೇ ಜನಪರ ಸರ್ಕಾರವಾಗಿರಬೇಕು.
ಆದರೆ ಪ್ರಸ್ತುತ ಅಧಿಕಾರಕ್ಕಾಗಿ ಹಪಾಹಪಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿ ಆರ್ಥಿಕ ಸ್ಥಿತಿಗತಿಯ ಬಗ್ಗೆ ಅಗತ್ಯ ಕಾಳಜಿ ವಹಿಸುತ್ತಿಲ್ಲ. ತಮ್ಮ ರಾಜಕೀಯ ಲಾಭಕ್ಕಾಗಿ ಆರ್ಥಿಕ ಹೊರೆ ಹೆಚ್ಚಿಸುವ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಆರ್ಥಿಕ ಸಮತೋಲನವನ್ನು ಗಮನದಲ್ಲಿಟ್ಟು ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಎಂ.ಬಿ. ಬಸವರಾಜ್ ಆಗ್ರಹಿಸಿದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 