ಶೋಷಿತರು ಸರಕಾರದ ಯೋಜನೆ ಪಡೆದುಕೊಳ್ಳಲು ಮುಂದಾಗಲಿ: ಡಾ.ನಾಗಲಕ್ಷ್ಮೀ
Let the exploited come forward to get the government scheme: Dr.Nagalakshmi
ಮಾಂಜರಿ 05: ಶೋಷಿತರು ಹೋರಾಟ ಮಾಡುವ ಮೂಲಕ ಸರಕಾರದ ಯೋಜನೆ ಪಡೆದುಕೊಳ್ಳಲು ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದರು.
ಅವರು ಶುಕ್ರವಾರರಂದು ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಸಿದ್ದಾಪುರವಾಡಿ ಗ್ರಾಮದಲ್ಲಿ ಭೀಮ ಘರ್ಜನೆ ಯುವರಾಜ ಬಣ ಸಂಘಟನೆ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ದಲಿತ ಹಿಂದುಳಿದ ವರ್ಗಗಳ ಅಲ್ಪ ಸಂಖ್ಯಾತರ ಜಾಗೃತಿ ಸಲಹಾ ಸಮಿತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಅಂಬೇಡ್ಕರ ಅವರ ಅರಿವಿನ ಬೆಳಕು ತಿಳಿಸಲು ಬಂದಿರುವೆ. ಅಂಬೇಡ್ಕರ ಮಕ್ಕಳು ಪ್ರಶ್ನೆ ಮಾಡಬೇಕು. ನಾನು ಅಂಬೇಡ್ಕರ ನಿಜವಾದ ಮಗಳಾಗಿದ್ದೇನೆ. ಮಹಿಳಾ ಗ್ರಾಮ ಸಭೆಯನ್ನು ಪ್ರತಿಯೊಂದು ಗ್ರಾಮದಲ್ಲಿ ನಡೆಸಬೇಕು ಎಂದರು.
ಕಾವಲು ಸಮಿತಿಯವರು ಮೂರು ತಿಂಗಳಿಗೊಮ್ಮೆ ಸಭೆ ಮಾಡಬೇಕು. ಹೆಣ್ಣು ಮಕ್ಕಳ ಮೇಲೆ ಯಾರೂ ದೌರ್ಜನ್ಯ ಮಾಡುವಂತಿಲ್ಲ. ಅಧಿಕಾರಿಗಳು ಜನರಲ್ಲಿಅರಿವು ಮೂಡಿಸದೆ ಹೋದಲ್ಲಿ ದೌರ್ಜನ್ಯ ತಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಮತವನ್ನು ಹಣಕ್ಕೆ ಮಾರಾಟ ಮಾಡಿಕೊಳ್ಳಬಾರದು. ನಮ್ಮ ಮಕ್ಕಳ ಭವಿಷ್ಯ ರೂಪಿಸುವವರಿಗೆ ಮತ ನೀಡಬೇಕು. ಸಂಕೋನಟ್ಟಿಯಲ್ಲಿ ಜಾತಿ ಪದ್ಧತಿ ಇನ್ನೂ ಜೀವಂತವಾಗಿರುವುದು ಎಲ್ಲರೂ ತೆಲೆ ತಗ್ಗಿಸುವಂತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಬೌದ್ಧಧರ್ಮದ ಭಂತೇಜಿ, ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ, ತಹಶೀಲ್ದಾರ ಸಿ.ಎಸ್. ಕುಲಕರ್ಣಿ, ಶಿವಾನಂದ ಶಿರಗಾಂವಿ, ಭೀಮ ಘರ್ಜನೆ ಯುವರಾಜ ಬಣದ ರಾಜ್ಯಾಧ್ಯಕ್ಷ ಯುವರಾಜ ಕಾಂಬಳೆ, ಮಚೇಂದ್ರ ಕಾಡಾಪುರ ಉಪಸ್ಥಿತರಿದ್ದರು. ಮಹಾದೇವ ಕೋಳಿ ಸ್ವಾಗತಿಸಿದರು. ಭರತ ಕಲಾಚಂದ್ರ ನಿರೂಪಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 