ವಸತಿ ರಹಿತರಿಗೆ ನಿವೇಶನ ಮಂಜೂರು ನಿಯಮಾನುಸಾರ ಆಯ್ಕೆ ಪ್ರಕ್ರಿಯೆ ನಡೆಯಲಿ


ಕೊಪ್ಪಳ 13: ಕೊಪ್ಪಳ ಜಿಲ್ಲೆಯ ವಸತಿ ರಹಿತರಿಗೆ ವಾಜಪೇಯಿ ನಗರ ವಸತಿ ಯೋಜನೆ, ಪ್ರಧಾನಮಂತ್ರಿ ಆವಾಸ್ ಹಾಗೂ ವಿವಿಧ ಯೋಜನೆಗಳಡಿ ನಿವೇಶ ಮಂಜೂರಿಸುವ ಕುರಿತಂತೆ ನಿಯಮಾನುಸಾರವಾಗಿ ಆಯ್ಕೆ ಪ್ರಕ್ರಿಯೆ ನಡೆಯಬೇಕು ಎಂದು ಜಿಲ್ಲಾಧಿಕಾ ಪಿ.ಸುನೀಲ್ ಕುಮಾರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ವಾಜಪೇಯಿ ನಗರ ನಿವೇಶನ ಯೋಜನೆ ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು (ಜ. 13) ಏರ್ಪಡಿಸಲಾಗಿದ್ದ, ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. 

ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮೂಲಕ ವಸತಿ ರಹಿತರಿಗೆ ನಿವೇಶನ ಸೌಲಭ್ಯ ಒದಗಿಸಲು ಸಂಬಂಧಿಸಿದ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಫಲಾನುಭವಿಗಳ ಅನುಗುಣವಾಗಿ ಅವಶ್ಯವಿರುವ ಕಡೆ ಜಮೀನನ್ನು ಖರೀದಿಸಬೇಕು.  ಭೂ ಮಾಲೀಕರಿಂದ ಜಮೀನು ಖರೀದಿ ಪ್ರಕ್ರಿಯೆ ನಿಯಮಾನುಸಾರ ಅಂದರೆ ಜಮೀನಿನ ಪ್ರಸ್ತುತ ಮಾರುಕಟ್ಟೆಯ ಸರ್ಕಾರಿ ದರಕ್ಕೆ ಮೂರು ಪಟ್ಟು ಹೆಚ್ಚಿಸಿ ನಿಗದಿಪಡಿಸಬೇಕು.  ಜಮೀನು ಎನ್.ಎ ರೂಪದಲ್ಲಿದರೆ ಅದನ್ನು ಸಹ ಸರ್ಕಾರದ ನಿಮಗಳ ಪ್ರಕಾರವೇ ಖರೀದಿಸಬೇಕು.  ಜಿಲ್ಲೆಯ ಕೊಪ್ಪಳ ಹಾಗೂ ಗಂಗಾವತಿ ನಗರಸಭೆ, ಕುಷ್ಟಗಿ ಹಾಗೂ ಕಾರಟಗಿ ಪುರಸಭೆ, ಕನಕಗಿರಿ, ತಾವರಗೇರಾ, ಯಲಬುರ್ಗಾ, ಕುಕನೂರು, ಭಾಗ್ಯನಗರ ಪಟ್ಟಣ ಪಂಚಾಯತ್ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಜಮೀನನ್ನು ಖರೀದಿಸಿ ಅರ್ಹ ಫಲಾನುಭವಿಗಳಿಗೆ ನಿವೇಶನ ಸೌಲಭ್ಯ ನೀಡಬೇಕು.  ಈ ನಿಟ್ಟಿನಲ್ಲಿ ಜಮೀನು ಖರೀದಿಗಾಗಿ ಪ್ರಸ್ತಾವನೆಗಳನ್ನು ಮತ್ತು ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗಾಗಿ ಅವಶ್ಯವಿದ್ದಲ್ಲಿ ಹೊಸದಾಗಿ ಅಜರ್ಿ ಕರೆದು ಅರ್ಹರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು.  ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯು ಸಂಬಂಧಿಸಿದ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಬೇಕು.  ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿರುವ ವಸತಿ ರಹಿತರಿಗೆ ನಿವೇಶನ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು.  

ಸಭೆಯಲ್ಲಿ ಉಪವಿಭಾಗಾಧಿಕಾರಿ ಸಿ.ಡಿ ಗೀತಾ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿದರ್ೇಶಕ ಸಿದ್ದರಾಮೇಶ್ವರ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಿಸರಳ್ಳಿ, ಕೊಪ್ಪಳ ತಹಶೀಲ್ದಾರ ಜೆ.ಬಿ ಮಜ್ಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.