ಯುವಜನತೆ ದುಶ್ಟಟಗಳಿಂದ ಮುಕ್ತವಾಗಿರಲಿ: ಪ್ರೋ. ಸಿ.ಎಂ.ತ್ಯಾಗರಾಜ್

ಯುವಜನತೆ ದುಶ್ಟಟಗಳಿಂದ ಮುಕ್ತವಾಗಿರಲಿ: ಪ್ರೋ. ಸಿ.ಎಂ.ತ್ಯಾಗರಾಜ್  Let the youth be free from vices: Prof. C.M. Thyagaraj

ಬೆಳಗಾವಿ 26: ಅಮಲು ಬರಿಸುವ ಮಾದಕ ವಸ್ತುಗಳ ಸೇವನೆಯಿಂದ ವಿದ್ಯಾರ್ಥಿಗಳು ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತಮ್ಮ ಅಮೂಲ್ಯವಾದ ಜೀವನವನ್ನೇ ಕಳೆದುಕೊಳ್ಳುತ್ತಾರೆ ಇದರಿಂದ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಯುವಜನತೆ ಇಂತಹ ದುಶ್ಟಟಗಳಿಂದ ಮುಕ್ತವಾಗಿರಬೇಕೆಂದು ರಾಚವಿವಿ ಕುಲಪತಿ ಪ್ರೋ. ಸಿ.ಎಂ.ತ್ಯಾಗರಾಜ್ ಅವರು ಕಿವಿಮಾತು ಹೇಳಿದರು.  

ಅವರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ಮತ್ತು ಆಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆಯ ನಿಮಿತ್ಯ ದಿ. 26ರಂದು ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. 

ಮುಖ್ಯ ಅತಿಥಿಗಳು ಮತ್ತು ವಿಶ್ವವಿದ್ಯಾಲಯದ ಕುಲಸಚಿವ ಸಂತೋಷ ಕಾಮಗೌಡ ಇವರು ಮಾತನಾಡುತ್ತ ಮಾದಕ ವಸ್ತುಗಳ ಬಳಕೆ ಹಾಗೂ ಅಕ್ರಮ ಸಾಗಾಣಿಕೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಜಾಗತಿಕವಾಗಿ ಅರಿವು ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್ 26ರಂದು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಣಿಕೆ ವಿರೋಧಿ ದಿನವನ್ನು ಆಚರಿಸಲಾಗುತ್ತಿದೆ. ಇಂದಿನ ದಿನಗಳಲ್ಲಿ ವಿಶ್ವದಾದ್ಯಂತ ಈ ದುಶ್ಚಟಗಳಿಗೆ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ. ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣಿಕೆ ಕಾನೂನ ಬಾಹಿರ ಎಂದು ಗೊತ್ತಿದ್ದರೂ ಇಂತಹ ತಪ್ಪುಗಳು ಮರುಕಳಿಸುತ್ತಿವೆ. ಡ್ರಗ್ ಮಾಫಿಯಾ ಹತೋಟಿಗೆ ತರಲು ವಿಶ್ವದೆಲ್ಲೆಡೆ ಕಾನೂನು ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದನ್ನು ಬುಡ ಸಮೇತ ಕಿತ್ತು ಹಾಕಲು ಪ್ರತಿಯೊಬ್ಬರು ಶ್ರಮಿಸಬೇಕು. ಮುಖ್ಯವಾಗಿ ವಿದ್ಯಾರ್ಥಿಗಳು ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವ ಮೂಲಕ ದೇಶ ್ಘ ವಿಶ್ವವನ್ನು ಮಾದಕವಸ್ತುಗಳಿಂದ ಮುಕ್ತವಾಗಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕೆಂದರು.  

ನಂತರದಲ್ಲಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.  ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಡಿ. ಎನ್‌. ಪಾಟೀಲ, ವಿದ್ಯಾರ್ಥಿ ಕಲ್ಯಾಣ ವಿಭಾಗದ ನಿರ್ದೇಶಕ ಪ್ರೊ. ವಾಯ್‌. ಎಸ್‌. ಬಲವಂತಗೊಳ, ಸ್ನಾತಕೋತ್ತರ ವಿಭಾಗಗಳ ನಿರ್ದೇಶಕ ಪ್ರೊ. ಎಸ್‌. ಸಿ. ಪಾಟೀಲ, ಹಾಗೂ ವಿವಿಧ ನಿಖಾಯಗಳ ಡೀನರು, ಬೋಧಕ-ಬೋಧಕೇತರ ಸಿಬ್ಬಂದಿಗಳು, ಸಂಶೋಧನಾ, ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.  

ಡಾ. ಪ್ರಕಾಶ ಕಟ್ಟಿಮನಿ ಸ್ವಾಗತಿಸಿ, ನಿರೂಪಣೆಗೈದರು.