ಜಾತಿ-ಭೇದ ಮರೆತು ಭಾರತ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸೋಣ: ಸಚಿವ ಖಾದರ್
Let us all strive to build India, setting aside caste differences: Minister Khader
ಲಕ್ಷ್ಮೇಶ್ವರ, ಸೆ.15: ಪಟ್ಟಣದ ಐತಿಹಾಸಿಕ ಶ್ರೀ ಸೋಮೇಶ್ವರ ದೇವಸ್ಥಾನ ಹಾಗೂ ಭಾವೈಕ್ಯತೆಯ ಕೇಂದ್ರವಾಗಿರುವ ಹಜರತ್ ಸಯ್ಯದ್ ಸುಲೇಮಾನ ಬಾದಶಾ ಖಾದ್ರಿ (ದೂದನಾನಾ) ದರ್ಗಾಕ್ಕೆ ಭಾನುವಾರ ಭೇಟಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ದರ್ಶನ ಪಡೆದರು.
ನಂತರ ಶಾದಿಮಹಲ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಲಕ್ಷ್ಮೇಶ್ವರದಲ್ಲಿರುವ ಶ್ರೀ ಸೋಮೇಶ್ವರ ದೇವಸ್ಥಾನ ಹಾಗೂ ದೂದನಾನಾ ದರ್ಗಾ ಯಾವುದೇ ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ಎಲ್ಲ ಧರ್ಮಗಳ ಜನರನ್ನು ಒಗ್ಗೂಡಿಸುವ ಶ್ರದ್ಧಾ ಕೇಂದ್ರಗಳಾಗಿವೆ. ಇವುಗಳ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಜಾತಿ-ಭೇದ ಮರೆತು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುವ ಮೂಲಕ ಉತ್ತಮ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಸಚಿವರು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕ ಡಾ. ಚಂದ್ರು ಲಮಾಣಿ, ಶಿಗ್ಗಾಂವಿ ಶಾಸಕ ಯಾಸಿರ್ ಖಾನ್ ಪಠಾಣ್, ಟಿ.ಎಫ್. ಈಶ್ವರ, ಮಾಜಿ ಶಾಸಕ ರಮಣ ಲಮಾಣಿ, ಆನಂದಸ್ವಾಮಿ ಗಡ್ಡದೇವರಮಠ, ದರ್ಗಾ ಸಮಿತಿ ಅಧ್ಯಕ್ಷರು, ಸೋಮೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 