ಅನ್ನಪೂರ್ಣಸಮೂಹ ಸಂಸ್ಥೆಗಳಲ್ಲಿ ಗ್ರಂಥಪಾಲಕರ ದಿನಾಚರಣೆ
Librarians' Day celebrated at Annapurna Group institutions
ಅಥಣಿ 12 : ಎ ಎಸ್ ಪಾಂಗಿ ವೈದ್ಯಕೀಯ ಸೇವೆಗಳು ಮತ್ತು ಸಂಶೋಧನಾ ಪ್ರತಿಷ್ಠಾನದ ಅನ್ನಪೂರ್ಣ ಸಮೂಹ ಶಿಕ್ಷಣ ಸಂಸ್ಥೆಗಳಾದ ಪೂಜ್ಯ ಅನ್ನಪೂರ್ಣ ಬಿ ಎಸ್ ಸಿ ನರ್ಸಿಂಗ್ ವಿಜ್ಞಾನ ಮಹಾವಿದ್ಯಾಲಯ, ಪೂಜ್ಯ ಅನ್ನಪೂರ್ಣ ಪ್ಯಾರಾ ಮೆಡಿಕಲ್ ಮಹಾವಿದ್ಯಾಲಯ, ಅನ್ನಪೂರ್ಣ ಬಿ ಸಿ ಎ, ಬಿ ಬಿ ಎ, ಬಿ ಕಾಂ ಮಹಾವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಗ್ರಂಥಾಲಯ ಪಿತಾಮಹ ಡಾ : ಎಸ್ ಆರ್ ರಂಗನಾಥನ್ ಅವರ ಜನ್ಮ ದಿನದ ಪ್ರಯುಕ್ತ ರಾಷ್ಟೀಯ ಗ್ರಂಥಪಾಲಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಮಹಾವಿದ್ಯಾಲಯಗಳ ಗ್ರಂಥಪಾಲಕರಾದ ಶ್ರೀ ಈರಣ್ಣ ಗದಗಿನಮಠ ಅವರು ಡಾ :ಎಸ್ ಆರ್ ರಂಗನಾಥನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಸಮಾರಂಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ ಪಾಂಗಿ, ಸಂಸ್ಥೆಯ ಕಾರ್ಯದರ್ಶಿಗಳಾದ ಡಾ : ರವಿ ಪಾಂಗಿ ಅವರು ಆಗಮಿಸಿದ್ದರು.
ಸಮಾರಂಭದಲ್ಲಿ ಅನ್ನಪೂರ್ಣ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿರಿಗಳಾದ ಶ್ರೀ ರಮೇಶ ಪೈರಶಿ, ನರ್ಸಿಂಗ್ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ ಎಂ ಎ ಶಿವಾಪುರ, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ ಪರಮಾನಂದ ನಾಯ್ಕ ಪ್ಯಾರಾ ಮೆಡಿಕಲ್ ಪ್ರಾಚಾರ್ಯರಾದ ಶ್ರೀ ಕಿರಣ ಕೆಂಪಿ ಹಾಗೂ ನರ್ಸಿಂಗ್, ಬಿ ಸಿ ಎ, ಬಿ ಬಿ ಎ, ಬಿ ಕಾಂ, ಪ್ಯಾರಾ ಮೆಡಿಕಲ್ ಮಹಾವಿದ್ಯಾಲಯಗಳ ಎಲ್ಲ ಪ್ರಾಧ್ಯಾಪಕರು ಎಲ್ಲ ಸಿಬ್ಬಂದಿ ವರ್ಗದವರು, ಎಲ್ಲ ವಿದ್ಯಾರ್ಥಿಗಳು ಹಾಜರಿದ್ದರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 