ಭಾರತೀಯ ಗ್ರಂಥಾಲಯ ಪಿತಾಮಹರನ್ನು ಸ್ಮರಿಸಿದ ಗ್ರಂಥಪಾಲಕರು
Librarians remember the fathers of Indian libraries: Koppal news
ಕೊಪ್ಪಳ 12: ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿನ ಎನ್.ಜಿ.ಓ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರೀಡಿಂಗ್ ಸೆಂಟರ್, ಮುಖ್ಯಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಮಂಗಳವಾರ ಗ್ರಂಥಪಾಲಕರ ದಿನಾಚರಣೆ ಆಚರಿಸಲಾಯಿತು.
ಭಾರತೀಯ ಗ್ರಂಥಾಲಯ ಪಿತಾಮಹ ಪದ್ಮಶ್ರೀ ಡಾ. ಎಸ್.ಆರ್.ರಂಗನಾಥನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾತನಾಡಿದ ಮುಖ್ಯಗ್ರಂಥಾಲಯಾಧಿಕಾರಿ ಯಮನೂರ್ಪ ಅವರು ಮಾತನಾಡಿ, ಪದ್ಮಶ್ರೀ ಡಾ. ಎಸ್.ಆರ್.ರಂಗನಾಥನ್ ರವರ ಪೂರ್ಣ ಹೆಸರು ಶಿಯ್ಯಾಳಿ ರಾಮಾಮೃತ ರಂಗನಾಥನ್. ಇವರು 12 ಆಗಸ್ಟ್ 1892ರಲ್ಲಿ ತಮಿಳುನಾಡಿನ ತಂಜಾವೂರು ಜಿಲ್ಲೆಯ ಶಿಯ್ಯಾಳಿ ಎಂಬ ಗ್ರಾಮದಲ್ಲಿ ಜನಿಸಿದರು. ತಂದೆ ರಾಮಾಮೃತ ಅಯ್ಯರ್, ತಾಯಿ ಸೀತಾಲಕ್ಷ್ಮಿ, ಮೂಲತಃ ಡಾ. ಎಸ್.ಆರ್. ರಂಗನಾಥನ್ ರವರು ತಮ್ಮನ್ನು ಗುರುತಿಸಿಕೊಂಡಿದ್ದು ಒಬ್ಬ ಗಣಿತ ಪ್ರಾಧ್ಯಾಪಕರಾಗಿ. ನಂತರದ ದಿನಗಳಲ್ಲಿ ಶೈಕ್ಷಣಿಕ ವಿದ್ಯಾಸಂಸ್ಥೆಯಲ್ಲಿ ಗ್ರಂಥಪಾಲಕರಾಗಿ ಸೇವೆ ಸಲ್ಲಿಸಿದರು. ಈ ಸೇವೆ ಅವರನ್ನು ಗ್ರಂಥಾಲಯಗಳ ಬಗ್ಗೆ ಚಿಂತಿಸುವಂತೆ ಮಾಡಿ ಮುಂದೆ ಗ್ರಂಥಾಲಯ ವಿಜ್ಞಾನಕ್ಕೆ ಮಹತ್ತರ ಕೂಡುಗೆ ನೀಡುವಂತೆ ಮಾಡಿತು. ಅವರು ಗ್ರಂಥಾಲಯ ವಿಜ್ಞಾನಕ್ಕೆ ಹಲವಾರು ಮಹತ್ವದ ಕೂಡುಗೆಗಳನ್ನು ನೀಡಿದ್ದಾರೆ. ಅವುಗಳೆಂದರೆ. ಗ್ರಂಥಾಲಯದ ಪಂಚಸೂತ್ರಗಳು, ದ್ವಿಬಿಂದು ವರ್ಗೀಕರಣ, ಸೂಚೀಕರಣ ಪರಾಮರ್ಶನ ಸೇವೆಗಳು ಎಂದರು.
ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಉಮಾ ಹಳ್ಯಾಳ, ವಿಜಯಲಕ್ಷ್ಮೀ ವಡ್ಡಟ್ಟಿ, ನಾಗರಾಜನಾಯಕ ಡೊಳ್ಳಿನ ನಿರೂಪಿಸಿದರು, ಕೊಟ್ರ್ಪ ಬಿ. ವಂದಿಸಿದರು.
ವಿವಿಧೆಡೆ ಗ್ರಂಥಪಾಲಕರ ದಿನಾಚರಣೆ: ಕೊಪ್ಪಳ ಮುಖ್ಯ ಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಸೇರಿದಂತೆ ಕೊಪ್ಪಳದ ಗಣೇಶ ನಗರದಲ್ಲಿರುವ ಮುಖ್ಯ ಶಾಖೆಯಲ್ಲಿ ಮತ್ತು ಗಂಗಾವತಿ ಶಾಖಾ ಗ್ರಂಥಾಲಯದಲ್ಲಿ ಹಾಗೂ ಜಿಲ್ಲೆಯ ವಿವಿಧೆಡೆ ಗ್ರಂಥಪಾಲಕ ದಿನಾಚರಣೆಯು ನಡೆಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 