ಗ್ರಂಥಾಲಯಗಳು ಜ್ಞಾನದ ಸಂಪಾದನೆಗೆ ಪೂರಕ
Libraries are instrumental in acquiring knowledge
ಹೂವಿನ ಹಡಗಲಿ 20- ಗ್ರಂಥಾಲಯ ಗಳು ಜ್ಞಾನದ ಸಂಪಾದನೆ ಗೆ ಪೂರಕವಾಗಿದ್ದು, ಗ್ರಂಥಾಲಯದಲ್ಲಿ ಕಾಲ ಹರಣ ಮಾಡುವ ಬದಲು ಪುಸ್ತಕಗಳಲ್ಲಿನ ಜ್ಞಾನವನ್ನು ಪಡೆಯಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಪ್ರಾಚಾರ್ಯ ಎಸ್.ಎಸ್.ಪಾಟೀಲ ಹೇಳಿದರು.ಪಟ್ಟಣದ ಜಿಬಿಆರ್ ಪದವಿ ಮಹಾವಿದ್ಯಾಲಯದ ಗ್ರಂಥಾಲಯದಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.ಐಕ್ಯೂಎಸಿ ಸಂಯೋಜಕಿ ಡಾ.ಮಹಿಮಾ ಜ್ಯೋತಿ, ದೈಹಿಕ ನಿರ್ದೇಶಕ ಬಡೆಸಾಬ್ ನಾಯಕ, ಪ್ರಭಾರಿ ಗ್ರಂಥಪಾಲಕ ಪ್ರಭು ಹೆಚ್, ಕನ್ನಡ ವಿಭಾಗದ ಮುಖ್ಯಸ್ಥ ಡಾ.ವೈ.ಚಂದ್ರಬಾಬು, ವಾಣಿಜ್ಯ ಶಸ್ತ್ರ ವಿಭಾಗದ ಮುಖ್ಯಸ್ಥ ಶೇಕ್ಷಾವಲಿ, ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಮಾಬುಸಾಬ್ ಕೆ, ಅಧ್ಯಾಪಕರಾದ ಶಶಿಧರ್ ಹಿರೇಮಠ, ರಾಘವೇಂದ್ರ, ಮಧುಸೂದನ ಕೆ ಹಾಗೂ ವಿದ್ಯಾರ್ಥಿಗಳು ಇತರರಿದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 