ಮಡಿಕೇರಿ, ಜೂನ್ 14, ಲೆಫ್ಟಿನೆಂಟ್ ಜನರಲ್ (ನಿವೃತ್ತ) ಕೊದಂಡ ಸೋಮಣ್ಣ ಅವರು ಶನಿವಾರ ಸಂಜೆ ವಿರಾಜಪೇಟೆಯಲ್ಲಿನ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಅವರ ವಯಸ್ಸು 94 ವಯಸ್ಸಾಗಿತ್ತು. ಮೃತರು ಪತ್ನಿ, ಮಗ ಮತ್ತು ಮಗಳನ್ನು ಅಗಲಿದ್ದಾರೆ. ಸೋಮಣ್ಣ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಪಂಜಾಬ್‌ನಲ್ಲಿ ನಡೆದ ಬ್ಲೂ ಸ್ಟಾರ್ ಕಾರ್ಯಾಚರಣೆಯನ್ನು ಕೋದಂಡ ಸೋಮಣ್ಣ ಅವರು ಯಶಸ್ವಿಯಾಗಿ ಮುನ್ನಡೆಸಿದ್ದರು.ಸೇನೆಯ ಹಿರಿಯ ಅಧಿಕಾರಿಗಳು ಸೋಮಣ್ಣ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಮೃತರ ಪಾರ್ಥಿವ ಶರೀರದ ಅಂತಿಮ ವಿಧಿ-ವಿಧಾನಗಳು ಭಾನುವಾರ ಮಧ್ಯಾಹ್ನ ಅವರ ಕೃಷಿ ತೋಟದ ಮನೆಯ ಆವರಣದಲ್ಲಿ ಸಕಲ ಸೇನಾ ಗೌರವಗಳೊಂದಿಗೆ ನಡೆದವು.