ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಶೀಘ್ರವೇ ವಿಧಾನಸಭಾ ಚುನಾವಣೆ : ಲೆಫ್ಟಿನೆಂಟ್ ಗವರ್ನರ್

 ಶ್ರೀನಗರ, ನ 15  :      ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಶೀಘ್ರದಲ್ಲೇ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಹೇಳಿದ್ದಾರೆ.     ಜಮ್ಮು ವಲಯದ ತಲ್ವಾರಾದಲ್ಲಿ ನಡೆದ ರಾಜ್ಯ ಪೊಲೀಸ್ ಕಾನ್ಸ್ ಟೆಬಲ್ ಸಮಾರಂಭದಲ್ಲಿ ಅವರು ಮಾತನಾಡಿದರು.    ಜಮ್ಮು ಕಾಶ್ಮೀರದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಲು ಪೊಲೀಸರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಅವರು ಮೆಚ್ಚುಗೆ ಸೂಚಿಸಿದರು.    ಜಮ್ಮು ಕಾಶ್ಮೀರದಲ್ಲಿ ಶಾಂತಿ ಮತ್ತು ಸಾಮಾನ್ಯ ಜನಜೀವನ ಕಾಪಾಡುವಲ್ಲಿ ಪೊಲೀಸರು ಅಪಾರ ತ್ಯಾಗ ಮಾಡಿದ್ದಾರೆ ಎಂದು ಮುರ್ಮು ಕೊಂಡಾಡಿದರು.