ಅರಿವು ಆದರ್ಶಗಳಿಂದ ಬದುಕು ಸಮೃದ್ಧಗೊಳ್ಳಬೇಕು
Life should be enriched with knowledge and ideals
ರಾಣೆಬೆನ್ನೂರು 28: ಮನುಷ್ಯ ಜೀವನ ಪವಿತ್ರವಾದುದು. ಜನ್ಮ ಜನ್ಮಾಂತರದ ಪುಣ್ಯದ ಫಲದಿಂದ ಮಾನವ ಜೀವನ ಪ್ರಾಪ್ತವಾಗಿದೆ. ಅರಿವು ಆದರ್ಶಗಳಿಂದ ಬದುಕು ಸಮೃದ್ಧಗೊಳ್ಳಬೇಕು. ಕ್ರಿಯಾಶೀಲ ಜೀವನ ಶ್ರೇಯಸ್ಸಿಗೆ ಮೂಲವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಶುಕ್ರವಾರ ತಾಲೂಕಿನ ಲಿಂಗದಹಳ್ಳಿ ಹಿರೇಮಠದ ಡಾಽಽ ವೀರಭದ್ರ ಶಿವಾಚಾರ್ಯ ಸ್ವಾಮಿಗಳವರ ಅಂಗವಾಗಿ ನೂರೆಂಟು ಮಂಟಪ ಪೂಜಾ ಹಾಗೂ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಮನುಷ್ಯನಲ್ಲಿ ಒಳ್ಳೆಯ ಮತ್ತು ಕೆಟ್ಟ ಎರಡು ಗುಣಗಳಿವೆ. ಒಳ್ಳೆಯವರ ಒಡನಾಟದಲ್ಲಿ ಬಾಳಿದರೆ ಜೀವನ ವಿಕಾಸಗೊಳ್ಳುವುದು. ದುರ್ಜನರ ಒಡನಾಟದಲ್ಲಿ ಬಾಳಿದರೆ ಬದುಕು ಸರ್ವ ನಾಶವಾಗುತ್ತದೆ. ಯಾವ ವಿಶ್ವಾಸ ಹೋದರೂ ಚಿಂತೆಯಿಲ್ಲ. ಆದರೆ ಆತ್ಮ ವಿಶ್ವಾಸ ಕಳೆದುಕೊಳ್ಳಬಾರದು. ದೇಹದ ಬಲ ಉಡುಗಿದರೂ ಚಿಂತಿಸಬೇಕಾಗಿಲ್ಲ. ಆದರೆ ಛಲ ನಿಷ್ಠೆಗಳು ಉಡುಗಬಾರದು. ಮನುಷ್ಯ ಜೀವನದಲ್ಲಿ ದೇಹವನ್ನು ದುಡಿಮೆಗೆ ಮತ್ತು ಮನಸ್ಸನ್ನು ಭಗವಂತನಿಗೆ ಅರ್ಿಸಿ ನಡೆದಾಗ ಜೀವನ ಉಜ್ವಲಗೊಳ್ಳುವುದು. ಮಾತನಾಡುವುದು ಸಾಧನೆಯಲ್ಲ. ಸಾಧನೆ ಮಾತನಾಡಬೇಕು.
ಸಾಧನೆಯಿಲ್ಲದೇ ಸತ್ತರೆ ಸಾವಿಗೆ ಅವಮಾನ. ಆದರ್ಶಗಳಿಲ್ಲದೇ ಬದುಕಿದರೆ ಬದುಕಿಗೆ ಅವಮಾನ ಎಂದು ಸ್ವಾಮಿ ವಿವೇಕಾನಂದರು ಎಚ್ಚರಿಸಿದ್ದಾರೆ. ಶ್ರೀ ಜಗದ್ಗುರು ರೇಣುಕಾರ್ಯರು ಕಾಯಕವೇ ಕಳಾ ಚೈತನ್ಯ ಎಂದು ಕಾಯಕದ ಹಿರಿಮೆಯನ್ನು ಬೋಧಿಸಿದ್ದಾರೆ. ಲಿಂಗದಹಳ್ಳಿ ಹಿರೇಮಠದ ಡಾಽಽ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಸದ್ದು ಗದ್ದಲವಿಲ್ಲದೇ ಅಪಾರ ಸಾಧನೆ ಮಾಡಿದ್ದಾರೆಂದು ಹರುಷ ವ್ಯಕ್ತಪಡಿಸಿ ಅವರಿಗೆ ಶ್ರೀ ಪೀಠದಿಂದ ರೇಶ್ಮೆ ಮಡಿ ಸ್ಮರಣಿಕೆ ಫಲ ಪುಷ್ಪದೊಂದಿಗೆ ಶುಭ ಹಾರೈಸಿದರು. ಸಾನ್ನಿಧ್ಯ ವಹಿಸಿದ ಶ್ರೀ ಕಾಶಿ ಡಾ. ಚಂದ್ರಶೇಖರ ಜಗದ್ಗುರುಗಳು ತಮ್ಮ ಆಶೀರ್ವಚನದಲ್ಲಿ ಮನುಷ್ಯ ಜೀವನದಲ್ಲಿ ಧರ್ಮ ಯಶಸ್ಸು ನೀತಿ ದಕ್ಷತೆ ಮತ್ತು ಒಳ್ಳೆಯ ಮಾತು ಅಳವಡಿಸಿಕೊಂಡು ಬಾಳಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ.
ಪ್ರಾಣ ಯೌವನ ಕಾಲ ಒಮ್ಮೆ ಕಳೆದರೆ ಮತ್ತೆಂದೂ ತಿರುಗಿ ಬರಲಾರದು. ಆತ್ಮ ಸಾಕ್ಷಿ ಉತ್ತಮ ಆರೋಗ್ಯ ಮತ್ತು ್ಠ್ಲ್ಝ್ಣಿದಿ್ಲ್ಘ್ಲ್ಖಿ ಇವು ಮೂರು ಸಂತೋಷದ ಮೂಲಗಳು. ಸದ್ವಿದ್ಯೆ, ಉತ್ತಮ ಸಂಬಂಧ ಆದರ್ಶ ಸ್ನೇಹ ನಮ್ಮೊಂದಿಗೆ ಇದ್ದರೆ ಬಾಳೆಲ್ಲ ಸುಖಮಯವಾಗುತ್ತದೆ. ಲಿಂಗದಹಳ್ಳಿ ಹಿರೇಮಠದ ಡಾಽಽ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಈ ಎಲ್ಲ ಗುಣ ಧರ್ಮಗಳನ್ನು ಹೊಂದಿದ್ದಾರೆಂದು ಸಂತೋಷ ವ್ಯಕ್ತಪಡಿಸಿದರು. ನೇತೃತ್ವ ವಹಿಸಿದ ಲಿಂಗದಹಳ್ಳಿ ಹಿರೇಮಠದ ಡಾ.ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಪೂಜ್ಯ ಜಗದ್ಗುರುಗಳ ಆಶೀರ್ವಾದದ ಬಲ ಮತ್ತು ಭಕ್ತರ ಸಹಕಾರದಿಂದ ಶ್ರೀ ಮಠದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 