ಉತ್ತರ ಪ್ರದೇಶ ಮುಖ್ಯಮಂತ್ರಿಗೆ ಜೀವಬೆದರಿಕೆ : ಅಪರಿಚಿತನ ವಿರುದ್ಧ ಎಫ್‍ಐಆರ್

ಲಖನೌ, ಮೇ 22,ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಸ್ಫೋಟಿಸುವುದಾಗಿ ಜೀವಬೆದರಿಕೆಯೊಡ್ಡಿದ್ದಾನೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ನಿರ್ದಿಷ್ಟ ಸಮುದಾಯಕ್ಕೆ ಬೆದರಿಕೆ ಹಾಕುತ್ತಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಾಂಬ್ ಸ್ಪೋಟಿಸಿ  ಅಂತ್ಯಗೊಳಿಸುವುದಾಗಿ ಅಪರಿಚಿತ ವ್ಯಕ್ತಿ ವಾಟ್ಸಪ್ ನಲ್ಲಿ ಬೆದರಿಕೆಯೊಡ್ಡಿದ್ದಾನೆ.  ಜೀವ ಬೆದರಿಕೆ ನೀಡಿದ್ದಕ್ಕಾಗಿ ಆತನ ವಿರುದ್ಧ ಗೋಮತಿ ನಗರ ಪೊಲೀಸ್  ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.ಐಪಿಸಿಯ ಸೆಕ್ಷನ್ 505 (1) (6), 506,507 ರ ಅಡಿಯಲ್ಲಿ ಎಫ್ಐಆರ್ ಅನ್ನು ದೂರು ಸಂಖ್ಯೆ 0472/2020 ಅಡಿಯಲ್ಲಿ ನೋಂದಾಯಿಸಲಾಗಿದೆ.ವ್ಯಕ್ತಿಯನ್ನು ಪತ್ತೆ ಹಚ್ಚಲು ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.