ಲೋಕದರ್ಶನ ವರದಿ
ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಲಿಂಗರಾಜ ಪಿಯು ಕಾಲೇಜು ವಿಜೇತ
ಬೆಳಗಾವಿ 10: ಬೆಳಗಾವಿಯ ಜಿಎಸ್‌ಎಸ್ ಕಾಲೇಜಿನಲ್ಲಿ ಜರುಗಿದ ಜಿಲ್ಲಾ ಮಟ್ಟದ ಅಂತರ ಪಿಯು ಕಾಲೇಜುಗಳ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಬೆಳಗಾವಿಯ ಲಿಂಗರಾಜ ಪಿಯು ಕಾಲೇಜಿನ ವಿದ್ಯಾರ್ಥಿಗಳು ವಿಜೇತರಾಗಿದ್ದಾರೆ. ಬೆಳಗಾವಿ ಫುಟ್‌ಬಾಲ್ ಅಸೋಸಿಯೇಶನ್ ಈ ಪಂದ್ಯಾವಳಿಯನ್ನು ಆಯೋಜಿಸಿತ್ತು. ವಿದ್ಯಾರ್ಥಿಗಳ ಈ ಸಾಧನೆಗೆ ಪದವಿ ಪ್ರಾಚಾರ್ಯ ಡಾ.ಎಚ್.ಎಸ್.ಮೇಲಿನಮನಿ, ಪದವಿಪೂರ್ವ ಪ್ರಾಚಾರ್ಯೆ ಗಿರಿಜಾ ಹಿರೇಮಠ, ದೈಹಿಕ ನಿರ್ದೇಶಕರಾದ ಡಾ.ಸಿ.ರಾಮರಾವ್, ತರಬೇತುದಾರ ಮಾನಸ್ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.