ಲಿಂಗಾಯತ ಮಹಿಳಾ ಸಮಾಜದಿಂದ ಮಕರ - ಸಂಕ್ರಾಂತಿ, ಅರಿಶಿಣ ಕುಂಕುಮ ಸಂಭ್ರಮ
Lingayat women's society celebrates Makar Sankranti with turmeric and saffron
ಬೆಳಗಾವಿ 29: ಭಾರತೀಯ ಸಂಸ್ಕೃತಿಯ ಆಚರಣೆಯಲ್ಲಿ ಮಹಿಳೆಯರನ್ನು ಪೂಜ್ಯನೀಯ ಸ್ವರೂಪದಲ್ಲಿ ಕಾಣುವ ನಮ್ಮ ಸಂಸ್ಕೃತಿಯಲ್ಲಿ ಅರಿಶಿಣ ಕುಂಕುಮವು ಆರೋಗ್ಯ ದೃಷ್ಟಿಯಲ್ಲಿಯೂ ಗಣನೀಯ ಸ್ಥಾನವನ್ನು ಪಡೆದುಕೊಂಡಿದೆ. ಇಂತಹ ಕಾರ್ಯಕ್ರಮಗಳ ಆಯೋಜನೆಯಿಂದ ನಮ್ಮ ಸಂಸ್ಕೃತಿ ಪರಂಪರೆಗಳನ್ನು ಪೋಷಿಸಲು ನಮ್ಮ ಮುಂದಿನ ಪೀಳಿಗೆಗೆ ಪ್ರೇರಣೆಯಾಗುತ್ತದೆ ಎಂದು ಕೆ.ಎಲ್ .ಇ ಸಂಸ್ಥೆ ನಿರ್ದೇಶಕರಾದ ಡಾ. ಪ್ರೀತಿ ದೊಡ್ಡವಾಡ ಅವರು ಹೇಳಿದರು.
ನಗರದ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಬುಧವಾರ ಲಿಂಗಾಯತ ಮಹಿಳಾ ಸಮಾಜದ ವತಿಯಿಂದ ಆಯೋಜಿಸಲಾದ ಸಂಪ್ರದಾಯ - ಸಂಭ್ರಮ, ಮಕರ - ಸಂಕ್ರಾಂತಿಯ ಅರಿಶಿಣ ಕುಂಕುಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು, ಮಹಿಳೆಯರನ್ನು ಸಂಘಟಿಸುವ ಉದ್ದೇಶದಿಂದ ಸಾಮೂಹಿಕ ಅರಿಶಿಣ ಕುಂಕುಮ ಆಯೋಜಿಸಲಾಗುತ್ತಿದೆ. ಅರಿಶಿಣ ರೋಗ ನಿರೋಧಕ ಮಾತ್ರವಲ್ಲದೇ ಚರ್ಮದ ಕಾಂತಿ ಹೆಚ್ಚಿಸುತ್ತದೆ. ಜೊತೆಗೆ ಸಂಕ್ರಾಂತಿ ಹಬ್ಬವು ಕೃಷಿ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಸಂಗಮವಾಗಿದ್ದು, ಪರಸ್ಪರ ಪ್ರೀತಿ, ಕೃತಜ್ಞತೆ ಮತ್ತು ಸಮೃದ್ಧಿಯ ಸಂದೇಶವನ್ನು ಸಾರುತ್ತದೆ ಎಂದರು.
ಕೆಎಲ್ ಇ ಸಂಸ್ಥೆ ಕಾರ್ಯಾಧ್ಯಕ್ಷರಾಗಿ 4 ದಶಕಗಳ ಕಾಲ ತಂದೆಯವರಾದ ಪ್ರಭಾಕರ್ ಕೋರೆ ಅವರು ಸೇವೆ ಸಲ್ಲಿಸಿ, ಕೆಎಲ್ ಇ ಸಂಸ್ಥೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಬೆಳೆಸಿದ್ದಾರೆ. ಸಾಮಾಜಿಕ, ಕೃಷಿ, ರಾಜಕೀಯ, ಶೈಕ್ಷಣಿಕ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದಾರೆ. ಲಕ್ಷಾಂತರ ಜನರಿಗೆ ಉದ್ಯೋಗ ಕಲ್ಪಿಸಿರುವ ದಿಮಂತ ನಾಯಕರು, ಸಧ್ಯ ಅವರ ಜವಾಬ್ದಾರಿಯನ್ನು ಮಕ್ಕಳ ಮೇಲೆ ಹೊರಸಿದ್ದಾರೆ.ಆದರೆ, ತಂದೆಯವರು ನೀಡಿದ ಜವಾಬ್ದಾರಿ ನಿಬಾಯಿಸುವುದು ಅಷ್ಟು ಸುಲಭದ ಮಾತಲ್ಲ, ಆದರೂ ಸಮಾಜ ಸೇವೆಗಾಗಿ ಹಗಲಿರುಳು ಶ್ರಮಿಸಲಾಗುವುದು ಎಂದು ಡಾ. ಪ್ರೀತಿ ದೊಡ್ಡವಾಡ ಅವರ ವಿಶ್ವಾಸ ವ್ಯಕ್ತಪಡಿಸಿದರು.
ಕೆಎಲ್ ಇ ಸಂಸ್ಥೆ ಪ್ರಥಮ ಮಹಿಳಾ ನಿರ್ದೇಶಕಿಯಾಗಿ ಡಾ. ಪ್ರೀತಿ ದೊಡ್ಡವಾಡ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಲಿಂಗಾಯತ ಮಹಿಳಾ ಸಮಾಜದಿಂದ ಸನ್ಮಾನಿಸಲಾಯಿತು. ಮಹಿಳೆಯರು ಅತಿ ಉತ್ಸಾಹದಿಂದ ಭಾಗವಹಿಸಿ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ರಾಣಿ ಚನ್ನಮ್ಮ ಮಹಿಳಾ ಬ್ಯಾಂಕ್ ಅಧ್ಯಕ್ಷರಾದ ಆಶಾತಾಯಿ ಪ್ರಭಾಕರ್ ಕೋರೆ, ಲಿಂಗಾಯತ ಮಹಿಳಾ ಸಮಾಜದ ಗೌರವಾದ್ಯಕ್ಷರಾದ ಶೈಲಜಾ ಬಿಂಗೆ, ಹಿರಿಯ ಸಾಹಿತಿ ನೀಲಗಂಗಾ ಚರಂತಿಮಠ, ಸಾಹಿತಿ, ಇಂಗ್ಲಿಷ್ ಪ್ರಾಧ್ಯಾಪಕರಾದ ವಿಜಯಲಕ್ಷ್ಮಿ ಪುಟ್ಟಿ, ಲಿಂಗಾಯತ ಮಹಿಳಾ ಸಮಾಜದ ಅಧ್ಯಕ್ಷರಾದ ಮಧುಮತಿ ಹಿರೇಮಠ, ಕಾರ್ಯದರ್ಶಿ ರಕ್ಷಾ ದೇಗಿನಾಳ, ಸಹ ಕಾರ್ಯದರ್ಶಿ ಸರೋಜಾ ನಿಶಾನ್ಹಾರ, ಆಶಾ ಪಾಟೀಲ್, ಜ್ಯೋತಿ ಬದಾಮಿ, ಎಲ್ಲ ಪದಾಧಿಕಾರಿಗಳು ಹಾಗೂ ಇತರರು ಇದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 