ಪೌರಕಾರ್ಮಿಕರ ಆರೋಗ್ಯ ರಕ್ಷಣೆಗೆ ಲಯನ್ಸ್‌ ಕ್ಲಬ್ ಮುನ್ನಡೆ

ಪೌರಕಾರ್ಮಿಕರ ಆರೋಗ್ಯ ರಕ್ಷಣೆಗೆ ಲಯನ್ಸ್‌ ಕ್ಲಬ್ ಮುನ್ನಡೆ  Lions Club takes the lead in safeguarding the health of civic workers

ಲೋಕದರ್ಶನ ವರದಿ 

ಮಹಾಲಿಂಗಪುರ 18 : ಮಹಾಲಿಂಗಪುರ ನಗರದ ಸ್ವಚ್ಛತೆ ಹಾಗೂ ಆರೋಗ್ಯ ಸಂರಕ್ಷಣೆಯಲ್ಲಿ ಹಗಲಿರುಳು ಶ್ರಮಿಸುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರುವ ಲಯನ್ಸ್‌ ಕ್ಲಬ್ ಆಫ್ ಮಹಾಲಿಂಗಪುರ ಟೌನ್ ಹಾಗೂ ಪುರಸಭೆ ವತಿಯಿಂದ ಪೌರಕಾರ್ಮಿಕರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಯಿತು. ಶಿಬಿರದಲ್ಲಿ 100ಕ್ಕೂ ಅಧಿಕ ಪೌರಕಾರ್ಮಿಕರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಯಿತು. ರಕ್ತದೊತ್ತಡ, ರಕ್ತದಲ್ಲಿನ ಸಕ್ಕರೆ ಪ್ರಮಾಣ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸಲಾಯಿತು. ಸುಮಾರು 50 ಮಂದಿಗೆ ಇಸಿಜಿ ಪರೀಕ್ಷೆ ಮಾಡಲಾಗಿದ್ದು, ವೈದ್ಯರು ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಸಲಹೆ ಹಾಗೂ ಚಿಕಿತ್ಸೆಯನ್ನು ನೀಡಿದರು.

ಆರೋಗ್ಯವೇ ನಿಜವಾದ ಸಂಪತ್ತು: ಲಯನ್ಸ್‌ ಕ್ಲಬ್ ಅಧ್ಯಕ್ಷ ಲಯನ್ ಡಾ. ವಿಶ್ವನಾಥ ಗುಂಡಾ ಮಾತನಾಡಿ, ಬದಲಾಗುತ್ತಿರುವ ಜೀವನಶೈಲಿಯಿಂದ ಮಧುಮೇಹ, ರಕ್ತದೊತ್ತಡ ಸೇರಿದಂತೆ ಹಲವು ಕಾಯಿಲೆಗಳು ಹೆಚ್ಚುತ್ತಿವೆ. ಕಾಯಿಲೆ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ಮುನ್ನೆಚ್ಚರಿಕೆಯಾಗಿ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಂತ ಮುಖ್ಯ. ನಗರದ ಸ್ವಚ್ಛತೆಗಾಗಿ ನಿರಂತರವಾಗಿ ದುಡಿಯುವ ಪೌರಕಾರ್ಮಿಕರ ಆರೋಗ್ಯದ ಕಾಳಜಿ ವಹಿಸುವುದು ನಮ್ಮ ಸಾಮಾಜಿಕ ಹೊಣೆಗಾರಿಕೆಯಾಗಿದೆ ಎಂದರು. ಪೌರಕಾರ್ಮಿಕರ ಸೇವೆ ಶ್ಲಾಘನೀಯ: ಪುರಸಭೆ ಮುಖ್ಯಾಧಿಕಾರಿ ನಾಮದೇವ ಲಮಾಣಿ ಮಾತನಾಡಿ, ನಗರದ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ.